ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಿಕ್ಷಕರಿಗೆ ಬೆದರಿಕೆ ಹಾಕಿ ಅಧಿಕಾರ ದುರುಪಯೋಗ: ಸಿಎಂ ಡಿಕೆಶಿ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

BS Yediyurappa: ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ತಪ್ಪಾಗಿದ್ದರೆ ಅದನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿ. ಆದರೆ ಪ್ರತಿಭಟನೆ ನಡೆಸಿದ ಶಿಕ್ಷಕರ ವಿರುದ್ಧ ಅಧಿಕಾರದ ಬಲ ಪ್ರಯೋಗಿಸಿ ಬೆದರಿಕೆ ಹಾಕುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಶಿಕ್ಷಕರಿಗೆ ಬೆದರಿಕೆ ಹಾಕಿ ಅಧಿಕಾರ ದುರುಪಯೋಗ: ಮಾಜಿ ಸಿಎಂ ಬಿಎಸ್‌ವೈ

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. -

Profile
Siddalinga Swamy Oct 5, 2026 3:19 PM

ಕಲಬುರಗಿ, ಅ.05: ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ತಪ್ಪುಗಳಾಗಿದ್ದರೆ ಸರಿಪಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ಅಧಿಕಾರ ದುರುಪಯೋಗಪಡಿಸಿಕೊಂಡು ಶಿಕ್ಷಕರ ಮೇಲೆ ಒತ್ತಡ ಹೇರಿ ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಆರೋಪಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ತಪ್ಪಾಗಿದ್ದರೆ ಅದನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿ. ಆದರೆ ಪ್ರತಿಭಟನೆ ನಡೆಸಿದ ಶಿಕ್ಷಕರ ವಿರುದ್ಧ ಅಧಿಕಾರದ ಬಲ ಪ್ರಯೋಗಿಸಿ ಬೆದರಿಕೆ ಹಾಕುವುದು ಸರಿಯಲ್ಲ ಎಂದರು.

ಭಾರತದ ಇತಿಹಾಸದಲ್ಲಿ ಮುಖ್ಯಮಂತ್ರಿಯೊಬ್ಬರು ಪ್ರತಿಭಟನೆ ನಡೆಸಿದ ಉದಾಹರಣೆ ಇಲ್ಲ. ಡಿ.ಕೆ. ಶಿವಕುಮಾರ್ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಶಿಕ್ಷಕರ ಮೇಲೆ ಒತ್ತಡ ಹೇರುವ ಬದಲು ಅವರ ಅಹವಾಲುಗಳನ್ನು ಆಲಿಸಬೇಕು. ಎಸ್‌ಐಆರ್‌ನಲ್ಲಿ ಲೋಪವಿದ್ದರೆ ಸರಿಪಡಿಸಲಿ ಎಂದು ಹೇಳಿದರು.

ರಾಜ್ಯದಲ್ಲಿ 45 ಸಾವಿರ ಶಿಕ್ಷಕರ ಹುದ್ದೆಗಳು ಹಾಗೂ 6 ಸಾವಿರ ವಿಶ್ವವಿದ್ಯಾಲಯ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ. 15 ಸಾವಿರ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ. ಇಂತಹ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವತ್ತ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ರೈತರಿಗೆ ಸಮರ್ಪಕ ನೆರವು ನೀಡಿಲ್ಲ. ಬರ ಪರಿಹಾರವಾಗಿ ₹2,500 ನೀಡಲಾಗಿದೆ. ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಎಂದು ಹೇಳಿದರು.

ಹಣಬಲ, ತೋಳ್ಬಲ ಹಾಗೂ ಜಾತಿಬಲದಿಂದ ಚುನಾವಣೆ ಗೆಲ್ಲುವ ಕಾಲ ಹೋಗಿದೆ. ಜನರು ಜಾಗೃತರಾಗಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಶಿಕ್ಷಕರ ವಿಶ್ವಾಸ ಗಳಿಸಿದ್ದಾರೆ. ಈ ಚುನಾವಣೆಯಲ್ಲಿ ನಮೋಶಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.‌

KRS ಬಳಿ ನಡೆಯಬೇಕಿದ್ದ ಕಾವೇರಿ ಆರತಿ ಕಾರ್ಯಕ್ರಮ ಮುಂದೂಡಿಕೆ; ಕಾರಣವೇನು?

ಬಿಜೆಪಿ ಹಾಗೂ ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟದಡಿ ಒಟ್ಟಾಗಿ ಚುನಾವಣೆ ಎದುರಿಸಲಿವೆ. 2028ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂಬ ಭ್ರಮೆಯಲ್ಲಿ ಡಿ.ಕೆ.ಶಿವಕುಮಾರ್ ಇದ್ದಾರೆ. ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.