ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Hampi Utsav 2026: ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ 'ಹಂಪಿ ಉತ್ಸವ-2026'

Hampi Utsav 2026: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ, ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿ 'ಹಂಪಿ ಉತ್ಸವ-2026' ಆಚರಣೆ

ಹಂಪಿ ಉತ್ಸವ ಲಾಂಛನವನ್ನು ಸಚಿವ ಜಮೀರ್‌ ಅಹ್ಮದ್‌ ಬಿಡುಗಡೆ ಮಾಡಿದರು. -

Profile
Siddalinga Swamy Jan 14, 2026 8:19 PM

ಹೊಸಪೇಟೆ, ಜ.14: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು (Hampi Utsav 2026) ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ, ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ-2026 ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು.

ಫೆಬ್ರವರಿ 13ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಉತ್ಸವದ ಯಶಸ್ವಿ ಆಚರಣೆಗಾಗಿ ಈ ಬಾರಿ ₹22 ಕೋಟಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ವರ್ಷ 16 ಕೋಟಿ ಅನುದಾನ ನೀಡಲಾಗಿತ್ತು ಎಂದು ಹೇಳಿದರು.

ಕಲಾವಿದರ ಆಯ್ಕೆ

ರಾಷ್ಟ್ರ ಮತ್ತು ರಾಜ್ಯ ಮಟ್ಟದ ಖ್ಯಾತ ಕಲಾವಿದರನ್ನು ಆಹ್ವಾನಿಸುವ ಕುರಿತು ನಾಳೆ ಗುರುವಾರ ಬೆಳಗ್ಗೆ 11 ಗಂಟೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಕಾರ್ಯಕ್ರಮಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.

ಹಂಪಿ ಉತ್ಸವದಲ್ಲಿ ಪ್ರತಿ ವರ್ಷದಂತೆ ಈ ಉತ್ಸವದಲ್ಲಿಯು ಸ್ಥಳೀಯ ಕಲಾವಿದರಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಾರಿಗೆ ಹಾಗೂ ಮೂಲಸೌಕರ್ಯಗಳ ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವನಾಗಿ ಎರಡು ಉತ್ಸವಗಳನ್ನು ಯಶಸ್ವಿ ಮಾಡಲಾಗಿದ್ದು ಇದು ಮೂರನೇ ಉತ್ಸವವಾಗಿದ್ದು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.‌

Special Session: ಜ.22 ರಿಂದ 31ರವರೆಗೆ ವಿಶೇಷ ಅಧಿವೇಶನ ನಡೆಸಲು ಸಚಿವ ಸಂಪುಟ ನಿರ್ಧಾರ

ಈ ಸಂದರ್ಭದಲ್ಲಿ ಸಂಸದ ಈ. ತುಕಾರಾಂ, ಶಾಸಕರಾದ ಲತಾ ಮಲ್ಲಿಕಾರ್ಜುನ್, ಕಂಪ್ಲಿ ಗಣೇಶ್, ನಾ.ರಾ. ಭರತ್ ರೆಡ್ಡಿ, ಹುಡಾ ಅಧ್ಯಕ್ಷ ಎಚ್.ಎನ್.ಎಫ್ ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಸಿಇಓ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಪೊಲೀಸ್ ಅಧೀಕ್ಷಕಿ ಎಸ್.ಜಾಹ್ನವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.