ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka CM Row: ಮೇ 15ರೊಳಗೆ ಡಿಸಿಎಂ ಡಿಕೆಶಿಗೆ ಹೈಕಮಾಂಡ್‌ನಿಂದ ಬರ್ತ್‌ಡೇ ಗಿಫ್ಟ್: ಶಾಸಕ ರಂಗನಾಥ್

ಕಾಂಗ್ರೆಸ್‌ ಪಕ್ಷಕ್ಕಾಗಿ ಶ್ರಮಿಸಿರುವ ಡಿ.ಕೆ.ಶಿವಕುಮಾರ್‌ ಅವರಿಗೆ ಒಳ್ಳೆಯ ಸ್ಥಾನ ಸಿಗಬೇಕು ಎಂಬುವುದು ನಮ್ಮ ಆಸೆಯಾಗಿದೆ. ಅವರ ಹುಟ್ಟುಹಬ್ಬಕ್ಕೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ ಎಂದು ಹೇಳುವ ಮೂಲಕ ಸಿಎಂ ಸ್ಥಾನ ಬದಲಾವಣೆಯ ವದಂತಿಗಳಿಗೆ ಕುಣಿಗಲ್‌ ಶಾಸಕ ರಂಗನಾಥ್‌ ಅವರು ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ.

ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್‌ನಿಂದ ಬರ್ತ್‌ಡೇ ಗಿಫ್ಟ್: ಶಾಸಕ ರಂಗನಾಥ್

ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಶಾಸಕ ರಂಗನಾಥ್‌. -

Prabhakara R
Prabhakara R Apr 27, 2026 3:05 PM

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ (MLA Ranganath) ಮಹತ್ವದ ಹೇಳಿಕೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು 40 ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಬಹಳಷ್ಟು ಶ್ರಮಪಟ್ಟಿದ್ದಾರೆ. ಹೀಗಾಗಿ ಅವರಿಗೆ‌ ಒಳ್ಳೆಯ ಸ್ಥಾನ ಸಿಗಬೇಕು ಎಂದು ಹಲವರ ಆಸೆಯಾಗಿದೆ. ಅಂತಹವರಲ್ಲಿ ನಾನೂ ಒಬ್ಬ. ಮೇ 15ಕ್ಕೆ ಡಿಕೆಶಿ (DK Shivakumar) ಅವರ ಹುಟ್ಟುಹಬ್ಬ ಇದೆ. ಅಷ್ಟರೊಳಗೆ ಸಿಹಿ ಸುದ್ದಿ ಸಿಗಲಿದೆ ಎಂದು ಭಾವಿಸಿದ್ದೇವೆ ಎಂದು ಶಾಸಕ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ಒಂದು ಒಪ್ಪಂದವಾಗಿದೆ ಎಂಬ ವಿಚಾರ ಎಲ್ಲರ ತಲೆಯಲ್ಲೂ ಇದೆ. ಆದರೆ, ಆ ಒಪ್ಪಂದದ ಸ್ವರೂಪ ಏನು ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕು. ಈ ಮೂಲಕ ಹೈಕಮಾಂಡ್ ಸದ್ಯ ಇರುವ ಗೊಂದಲವನ್ನು ಬಗೆಹರಿಸಬೇಕು. ಇದನ್ನು ನಾವಷ್ಟೇ ಅಲ್ಲ, ಎಲ್ಲರೂ ಹೇಳುತ್ತಿದ್ದಾರೆ ಎಂದು ಉತ್ತರಿಸಿದರು.

ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು, ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ ನಮ್ಮ ಡಿ.ಕೆ. ಶಿವಕುಮಾರ್ ಸಾಹೇಬರು ಪಕ್ಷದ ಜವಾಬ್ದಾರಿಯನ್ನು ಹೊತ್ತು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಬರುವ ದಿನಗಳಲ್ಲಿ ಒಳ್ಳೆಯ ಸ್ಥಾನ ಸಿಗಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆಯಾಗಿದೆ. ಹೈಕಮಾಂಡ್ ಈ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ನಮಗಿದೆ ಎಂದು ರಂಗನಾಥ್ ಹೇಳಿದರು.

ಸಿದ್ದರಾಮಯ್ಯ ಅವರು ಪ್ರಸ್ತುತ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರಿಗೂ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎನ್ನುವುದು ನಮ್ಮ ಆಸೆ. ಹೈಕಮಾಂಡ್ ಏನೇ ನಿರ್ಧಾರ ತಗೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ. ವರಿಷ್ಠರು ಸೂಕ್ತ ನಿರ್ಧಾರ ತಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.