ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆರ್​ಎಸ್​ಎಸ್​​​​​ ವಿರುದ್ಧ ಅವಹೇಳನಕಾರಿ ಪೋಸ್ಟ್​; ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ನೋಟಿಸ್‌

ಆರ್​ಎಸ್​ಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್​ ಮುಖಂಡ ಮೊಹಮ್ಮದ್‌ ನಲಪಾಡ್ ವಿರುದ್ಧ ಆರ್​ಎಸ್​ಎಸ್​ ಕಾರ್ಯಕರ್ತ ಎ. ತೇಜಸ್ ಎಂಬುವರು ಕೋರ್ಟ್‌ಗೆ ಖಾಸಗಿ ದೂರು ನೀಡಿದ್ದರು. ಇದಕ್ಕೆ ಸಂಬಂಧಿಸಿ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದೆ.

RSS ವಿರುದ್ಧ ಪೋಸ್ಟ್; ಪ್ರಿಯಾಂಕ್‌ ಖರ್ಗೆಗೆ ಕೋರ್ಟ್ ನೋಟಿಸ್‌

-

Prabhakara R
Prabhakara R Jun 27, 2026 8:09 PM

ಬೆಂಗಳೂರು: ಆರ್​ಎಸ್​ಎಸ್​​​​​ ವಿರುದ್ಧ ಅವಹೇಳನಕಾರಿ ಪೋಸ್ಟ್​ ಆರೋಪದ ಹಿನ್ನಲೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮತ್ತು ಮೊಹಮ್ಮದ್ ನಲಪಾಡ್​​ಗೆ ಬೆಂಗಳೂರಿನ 42 ನೇ ಎಸಿಜೆಎಂ ಕೋರ್ಟ್ ಸಮನ್ಸ್ ನೀಡಿದೆ. ಕ್ರಿಮಿನಲ್‌ ಮಾನನಷ್ಟ ಕೇಸ್ ವಿಚಾರಣೆಗೆ ಅಂಗೀಕರಿಸಿದ ನ್ಯಾಯಾಲಯ, ಜುಲೈ 21 ರಂದು ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ.

2025 ಅಕ್ಟೋಬರ್​​ 14 ರಂದು ಪ್ರಿಯಾಂಕ್ ಖರ್ಗೆ ಅವರು ಆರ್​ಎಸ್​ಎಸ್ ಸದಸ್ಯರ ವಿರುದ್ದ ಟ್ವೀಟ್ ಮಾಡಿದ್ದರು. ಅಲ್ಲದೇ ಕಾಂಗ್ರೆಸ್​ ಮುಖಂಡ ನಲಪಾಡ್ ಅವರು ಕೂಡ ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಆರ್​ಎಸ್​ಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಆರ್​ಎಸ್​ಎಸ್​ ಕಾರ್ಯಕರ್ತ ಎ. ತೇಜಸ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ಅವಹೇಳನಕಾರಿ ಹೇಳಿಕೆಯಿಂದ ಸಂಘದ ಘನತೆಗೆ ಧಕ್ಕೆಯಾಗಿದೆ ಎಂದು ಬೆಂಗಳೂರಿನ ಸಿದ್ದಾಪುರದ ಎ.ತೇಜಸ್ ದೂರು ದಾಖಲಿಸಿದ್ದರು.

ಕಾರ್ತಿಕೇಯ ಸಿಂಗ್ ಮಾನನಷ್ಟ ಮೊಕದ್ದಮೆ: ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿಷಾದ

ಈ ಹಿನ್ನೆಲೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಜೆಎಂ ಕೋರ್ಟ್, ಕ್ರಿಮಿನಲ್‌ ಮಾನನಷ್ಟ ಕೇಸ್ ವಿಚಾರಣೆಗೆ ಅಂಗೀಕರಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ಹ್ಯಾರಿಸ್ ನಲಪಾಡ್​​ಗೆ ​ಸಮನ್ಸ್ ಜಾರಿ ಮಾಡಿದೆ.