ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ, ಜೆಡಿಎಸ್ ತಾಕತ್ ತೋರಿಸುತ್ತೇವೆ ಎಂದ ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಹಿಂದೆ 5 ವರ್ಷ ಈಗ 3 ವರ್ಷ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಏಳು ಲಕ್ಷದ ಅರವತ್ತು ಕೋಟಿ ಸಾಲ ಮಾಡಿ ಈ ರಾಜ್ಯದ ಜನರ ಮೇಲೆ ಸಾಲದ ಹೊರೆಯನ್ನು ಹೊರಿಸುವುದಲ್ಲದೆ ಸಾಲಗಾರ ಸರ್ಕಾರ ಎಂಬ ಬಿರುದಿನೊಂದಿಗೆ ಅಭಿವೃದ್ಧಿ ಮಾಡದೆ ಅಧಿಕಾರದ ತಿಕ್ಕಾಟದಲ್ಲಿ ಕಾಲ ಕಳೆಯುತ್ತಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ, ಜೆಡಿಎಸ್ ತಾಕತ್ ತೋರಿಸುತ್ತೇವೆ

ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (ಸಂಗ್ರಹ ಚಿತ್ರ) -

Profile
Siddalinga Swamy Feb 23, 2026 3:19 PM

ಮೈಸೂರು, ಫೆ.23: ಕಾಂಗ್ರೆಸ್ ಪಕ್ಷಕ್ಕೆ, ಕಾಂಗ್ರೆಸ್ ಸರ್ಕಾರಕ್ಕೆ ದಮ್ಮು, ತಾಕತ್ತಿದ್ದರೆ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲಿ, ಆಗ ನಮ್ಮ ತಾಕತ್ ಏನು ಎಂಬುದನ್ನು ತೋರಿಸುತ್ತೇವೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸವಾಲು ಹಾಕಿದ್ದಾರೆ. ಕೆ.ಆರ್. ನಗರದ ರೇಡಿಯೋ ಮೈದಾನದಲ್ಲಿ ಜನರೊಂದಿಗೆ ಜನತಾದಳ ಮತ್ತು ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಸಾರ್ವಜನಿಕರ ತೆರಿಗೆಯ ಹಣವನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಜೆಡಿಎಸ್ ಪಕ್ಷ ಮತ್ತು ಜೆಡಿಎಸ್ ವರಿಷ್ಠರನ್ನು ಟೀಕಿಸುವ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಹಿಂದೆ ಐದು ವರ್ಷ ಈಗ ಮೂರು ವರ್ಷ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಏಳು ಲಕ್ಷದ ಅರವತ್ತು ಕೋಟಿ ಸಾಲ ಮಾಡಿ ಈ ರಾಜ್ಯದ ಜನರ ಮೇಲೆ ಸಾಲದ ಹೊರೆಯನ್ನು ಹೊರಿಸುವುದಲ್ಲದೆ ಸಾಲಗಾರ ಸರ್ಕಾರ ಎಂಬ ಬಿರುದಿನೊಂದಿಗೆ ಅಭಿವೃದ್ಧಿ ಮಾಡದೆ ಅಧಿಕಾರದ ತಿಕ್ಕಾಟದಲ್ಲಿ ಕಾಲ ಕಳೆಯುತ್ತಿದೆ ಎಂದು ಟೀಕಿಸಿದರು.

ಈ ಸರ್ಕಾರ 50, 60% ಕಮಿಷನ್‌ಗೆ ಇಳಿದಿದೆ

ವಿಧಾನಸೌಧಕ್ಕೆ ಮಾಧ್ಯಮಗಳ ನಿರ್ಬಂಧ ವಿಚಾರಕ್ಕೆ ಮಾತನಾಡಿದ ಅವರು, ಸರ್ಕಾರ ತಮ್ಮ ಭ್ರಷ್ಟಾಚಾರ ಮತ್ತು ವಿಧಾನಸಭೆಯಲ್ಲಿ ತಮ್ಮ ಸರ್ಕಾರದ ವಿರುದ್ಧ ಪ್ರಚಾರ ಮಾಡಬಾರದೆಂದು ಇಂತಹ ನಿರ್ಣಯವನ್ನು ಕೈಗೊಂಡ ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಿಂದೆ 30, 40 ಪರ್ಸೆಂಟ್ ಕಮಿಷನ್ ಎಂದು ಹೇಳುತ್ತಿದ್ದ ಈ ಸರ್ಕಾರ 50, 60% ಕಮಿಷನ್‌ಗೆ ಇಳಿದಿದೆ ಎಂದು ಅವರು ಆರೋಪಿಸಿದರು.

ಹಳೆ ಮೈಸೂರು ಪ್ರಾಂತ್ಯಕ್ಕೆ ಮೀಸಲಾಗದೆ ರಾಜ್ಯ ವ್ಯಾಪ್ತಿ ಸಂಚರಿಸಿ ರೈತರಿಗಾಗಿ, ಬಡವರಿಗಾಗಿ ಸ್ಥಾಪನೆ ಮಾಡಿದ ಜೆಡಿಎಸ್ ಪಕ್ಷವನ್ನು ಕಟ್ಟುವ ಜತೆಗೆ ಅಧಿಕಾರಕ್ಕೆ ತರಲು ಆಯಾಯ ಭಾಗದಲ್ಲಿ ಸಮಾವೇಶಗಳನ್ನು ಮಾಡುವ ಜತೆಗೆ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳುವ ಮೂಲಕ 2028ಕ್ಕೆ ಕರ್ನಾಟಕ ರಾಜ್ಯದಲ್ಲಿ ಸಮಿಶ್ರ ಸರ್ಕಾರವನ್ನು ಆಡಳಿತಕ್ಕೆ ತಂದು ಜನತಾದಳದ ನಾಯಕರಾದ ಕುಮಾರಣ್ಣ ಅವರ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ತಿಳಿಸಿದರು.

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ; ಪಿಎಲ್ಐ 1.2 ಆರಂಭಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಜೆಡಿಎಸ್ ಅಧ್ಯಕ್ಷ ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಶಾಸಕ ಮಹಾದೇವ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎ.ಎಸ್. ಚನ್ನಬಸಪ್ಪ ಹಾಗೂ ಇತರರು ಉಪಸ್ಥಿತರಿದ್ದರು.