ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Half Helmet Ban: ಹಾಫ್ ಹೆಲ್ಮೆಟ್‌ ಬಳಕೆ, ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದ ರಾಜ್ಯ ಸರ್ಕಾರ

ರಾಜ್ಯ ಸಾರಿಗೆ ಇಲಾಖೆಯಿಂದ ಹಾಫ್‌ ಹೆಲ್ಕೆಟ್‌ಗಳ ಬಳಕೆ ನಿಷೇಧ ಮಾಡಲಾಗಿದೆ. ಇನ್ನುಮುಂದೆ ಸವಾರರು BIS/ISI ಮಾನದಂಡದ ಹೆಲೈಟ್ ಧರಿಸುವುದು ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಹಾಫ್ ಹೆಲ್ಮೆಟ್ ತಯಾರಕರು ಮತ್ತು ಮಾರಾಟಗಾರರ ಮೇಲೂ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಸರ್ಕಾರ ನೀಡಿದೆ.

ಹಾಫ್ ಹೆಲ್ಮೆಟ್‌ ಬಳಕೆ, ಮಾರಾಟಕ್ಕೆ ನಿಷೇಧ ಹೇರಿದ ರಾಜ್ಯ ಸರ್ಕಾರ

-

Prabhakara R
Prabhakara R Oct 7, 2026 3:14 PM

ಬೆಂಗಳೂರು: ರಸ್ತೆ ಸುರಕ್ಷತೆಗೆ ಮತ್ತಷ್ಟು ಆದ್ಯತೆ ನೀಡುವ ನಿಟ್ಟಿನಲ್ಲಿ ಹಾಫ್ ಹೆಲ್ಮೆಟ್‌ (Half Helmet Ban) ಬಳಕೆ, ತಯಾರಕೆ ಮತ್ತು ಮಾರಾಟಕ್ಕೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ದ್ವಿಚಕ್ರ ವಾಹನ ಸವಾರರು BIS/ISI ಮಾನದಂಡದ ಹೆಲ್ಮೆಟ್‌ಗಳನ್ನು ಬಳಸುವ ಮೂಲಕ ತಮ್ಮ ಸುರಕ್ಷತೆಗೆ ಆದ್ಯತೆ ನೀಡಬೇಕು. ನಿಯಮ ಉಲ್ಲಂಘಿಸಿದ್ದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಹಾಫ್ ಹೆಲ್ಮೆಟ್‌ಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಇತ್ತೀಚೆಗೆ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ತಿಳಿಸಿದ್ದರು. ರಸ್ತೆ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿ ಇಲ್ಲದ ಹಾಫ್ ಹೆಲ್ಮೆಟ್‌ಗಳ ಉತ್ಪಾದನೆಯನ್ನೇ ನಿಷೇಧಿಸುವುದು, ಇಂತಹ ಹೆಲ್ಮೆಟ್‌ಗಳನ್ನು ತಯಾರಿಸುವ ಉತ್ಪಾದಕರು ಹಾಗೂ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇವೆ. ಹಾಫ್ ಹೆಲ್ಮೆಟ್ ಅಗತ್ಯ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ’ ಎಂದು ಸಚಿವರು ಹೇಳಿದ್ದರು. ಈ ಸಂಬಂಧ ಇದೀಗ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಫುಟ್‌ಪಾತ್ ಮೇಲೆ ಬೈಕ್ ಓಡಿಸಿದರೆ 5 ರಿಂದ 10 ಸಾವಿರ ರೂ. ದಂಡ!

ಅದೇ ರೀತಿ ಪಾದಚಾರಿಗಳಿಗೆ ಮೀಸಲಾದ ಫುಟ್‌ಪಾತ್‌ಗಳ ಮೇಲೆ ದ್ವಿಚಕ್ರ ವಾಹನಗಳನ್ನು ಓಡಿಸುವ ಸವಾರರಿಗೆ ಬಿಸಿ ಮುಟ್ಟಿಸಲು ಸಾರಿಗೆ ಮತ್ತು ಗೃಹ ಇಲಾಖೆ ಜಂಟಿಯಾಗಿ ದಂಡದ ಮೊತ್ತವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಂದಾಗಿವೆ. ಪ್ರಸ್ತುತ ಫುಟ್‌ಪಾತ್ ರೈಡಿಂಗ್‌ಗೆ 500 ರೂ. ದಂಡವಿದ್ದು, ಇದನ್ನು ಮೊದಲ ಬಾರಿಯ ಉಲ್ಲಂಘನೆಗೆ ಬರೋಬ್ಬರಿ 5,000 ರೂ ಹಾಗೂ ಎರಡನೇ ಬಾರಿಯೂ ಪುನರಾವರ್ತಿಸಿದರೆ 10,000 ರೂ.ಗೆ ಏರಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಲಾಗಿದೆ.

ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ: ಪರಿಷತ್ತಿನಲ್ಲಿ ನಿಗಮಗಳ ಆರ್ಥಿಕ ಪರಿಸ್ಥಿತಿ ಬಿಚ್ಚಿಟ್ಟ ಸಾರಿಗೆ ಸಚಿವ

ಫುಟ್‌ಪಾತ್ ಮೇಲೆ ಬೈಕ್‌ ಚಾಲನೆ ಮಾಡುವ ಸವಾರರ ಮೇಲಿನ ದಂಡ ಹೆಚ್ಚಳದ ಪ್ರಸ್ತಾವನೆ ಇನ್ನೂ ಅಂತಿಮವಾಗಿ ಜಾರಿಗೆ ಬಂದಿಲ್ಲ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸದ್ಯ ಕಾನೂನು ಇಲಾಖೆಯ ಅಭಿಪ್ರಾಯ ಮತ್ತು ಸಲಹೆಗಳನ್ನು ಕೋರಲಾಗಿದ್ದು, ಕಾನೂನು ಇಲಾಖೆಯ ಒಪ್ಪಿಗೆ ಸಿಕ್ಕ ಬಳಿಕ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.