ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಎಂಎಲ್‌ಸಿ ರವಿಕುಮಾರ್ ಹೇಳಿಕೆ ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ: ಲಕ್ಷ್ಮೀ ಹೆಬ್ಬಾಳ್ಕರ್

Laxmi Hebbalkar: ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್‌ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಎಂಎಲ್‌ಸಿ ರವಿಕುಮಾರ್ ಕೂಡಲೇ ಕ್ಷಮೆಯಾಚಿಸಬೇಕು: ಹೆಬ್ಬಾಳ್ಕರ್ ಆಗ್ರಹ

Profile Siddalinga Swamy Jul 3, 2025 3:49 PM

ಬೆಂಗಳೂರು: ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್‌ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)‌ ಪ್ರಶ್ನಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಅವರು ಹೇಳಿದರು.

ಕ್ಷಮೆಯಾಚನೆಗೆ ಪಟ್ಟು

ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Fire Accident: ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ, ಬೆಂಗಳೂರಿನಲ್ಲಿ ತಪ್ಪಿದ ಭಾರಿ ಅನಾಹುತ