ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಗಾಣಗಾಪುರ ಶ್ರೀ ದತ್ತಾತ್ರೇಯ ಕ್ಷೇತ್ರದ ಅಭಿವೃದ್ಧಿಗೆ 250 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲ್ಯಾನ್

Sri Kshetra Ganagapur: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗಾಣಗಾಪುರದ ಶ್ರೀ ದತ್ತಾತ್ರೇಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 250 ಕೋಟಿ ರೂ. ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಗಾಣಗಾಪುರ ಶ್ರೀ ದತ್ತಾತ್ರೇಯ ಕ್ಷೇತ್ರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್

-

Profile
Siddalinga Swamy Nov 10, 2026 5:37 PM

ಕಲಬುರಗಿ, ನ.10: ಕಲ್ಯಾಣ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗಾಣಗಾಪುರದ ಶ್ರೀ ದತ್ತಾತ್ರೇಯ ಕ್ಷೇತ್ರದ (Ganagapur Dattatreya Temple) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 250 ಕೋಟಿ ರೂ. ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ. ಒಟ್ಟು 250 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲ್ಯಾನ್‌ನೊಂದಿಗೆ ಮೊದಲ ಹಂತದಲ್ಲಿ 50 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಡಿಪಿಆರ್ ಸಿದ್ಧಗೊಳಿಸಲಾಗಿದ್ದು, ಸಚಿವ ಸಂಪುಟದ ಅನುಮೋದನೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಶೀಘ್ರದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಮಾಹಿತಿ ನೀಡಿದ್ದಾರೆ.

ಮೊದಲ ಹಂತದಲ್ಲಿ 6 ಪ್ರಮುಖ ಕಾಮಗಾರಿಗಳು:

  • ಸಂಗಮ ಘಾಟ್ ಅಭಿವೃದ್ಧಿ – ₹17.12 ಕೋಟಿ
  • ಪಾಪವಿನಾಶ ತೀರ್ಥ – ₹12.50 ಕೋಟಿ
  • ದೇವಸ್ಥಾನಕ್ಕೆ ಪ್ರೊಮೆನಡ್ ಮಾರ್ಗ – ₹6.50 ಕೋಟಿ
  • ಪಾರ್ಕಿಂಗ್ ಮತ್ತು ಟ್ರಾನ್ಸಿಟ್ ವ್ಯವಸ್ಥೆ – ₹9.10 ಕೋಟಿ
  • ಬಸ್ ನಿಲ್ದಾಣದಿಂದ ದೇವಸ್ಥಾನಕ್ಕೆ ಪಾದಚಾರಿ ಮಾರ್ಗ – ₹52 ಲಕ್ಷ
  • ದೇವಸ್ಥಾನ ಸಂಕೀರ್ಣ ಅಭಿವೃದ್ಧಿ – ₹4.25 ಕೋಟಿ.‌
Sri Dattatreya kshetra

ಈ ಯೋಜನೆಯ ಅನುಷ್ಠಾನದಿಂದ ಶ್ರೀಕ್ಷೇತ್ರದಲ್ಲಿ ಸುಸಜ್ಜಿತವಾದ ಪ್ರವಾಸಿ ಸ್ನೇಹಿ ವ್ಯವಸ್ಥೆ ನಿರ್ಮಾಣವಾಗಲಿದೆ.

ಏನಿಲ್ಲಾ ಸೌಲಭ್ಯ?

  • 860 ಕಾರುಗಳು, 500 ದ್ವಿಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ
  • ಸಂಗಮ ಘಾಟ್‌ನಲ್ಲಿ 40 ವಾಣಿಜ್ಯ ಮಳಿಗೆಗಳು
  • ಪಾಪವಿನಾಶ ತೀರ್ಥದಲ್ಲಿ ಫ್ಲೋಟಿಂಗ್ ಜೆಟ್ಟಿ ಮತ್ತು ಸುರಕ್ಷಿತ ಸ್ನಾನ ವ್ಯವಸ್ಥೆ
  • ದೇವಸ್ಥಾನ ಮಾರ್ಗದಲ್ಲಿ 30 ಅಂಗಡಿಗಳು, ಮಾಹಿತಿ ಕೇಂದ್ರ ಮತ್ತು ವಿದ್ಯುತ್ ದೀಪಾಲಂಕಾರ
  • ಉದ್ಯಾನವನ, ಶೌಚಾಲಯ, ವಿಶ್ರಾಂತಿ ಸ್ಥಳಗಳು ಮತ್ತು ಯಾತ್ರಿಕರಿಗೆ ಅಗತ್ಯ ಮೂಲಸೌಕರ್ಯ
  • ಅಂಗವಿಕಲರಿಗೆ ವಿಶೇಷ ಪ್ರವೇಶ, ಪ್ರತ್ಯೇಕ ದರ್ಶನ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆ

ಪ್ರವಾಸೋದ್ಯಮಕ್ಕೆ ಉತ್ತೇಜನ

ನದಿ ತೀರದ ಸೌಂದರ್ಯೀಕರಣ, ಸುಸಜ್ಜಿತ ಪಾರ್ಕಿಂಗ್ ಮತ್ತು ಆಧುನಿಕ ಮೂಲಸೌಕರ್ಯಗಳೊಂದಿಗೆ ಗಾಣಗಾಪುರವನ್ನು ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಯೋಜನೆಯಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಮತ್ತು ಪ್ರವಾಸಿಗರಿಗೆ ಅನುಕೂಲ ಒದಗಿಸುವುದರೊಂದಿಗೆ ಕಲಬುರಗಿ ಜಿಲ್ಲೆಯ ಆರ್ಥಿಕ ಚಟುವಟಿಕೆಗಳು ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವುದು ನಮ್ಮ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.