ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Sting Operation: ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್‌ ಆಪರೇಷನ್‌ನಲ್ಲಿ ನಮ್ಮ ಪಕ್ಷದವರೇ ಭಾಗಿ: ಯತೀಂದ್ರ ಸ್ಫೋಟಕ ಹೇಳಿಕೆ!

Yathindra siddaramaiah: ಸಿದ್ದರಾಮಯ್ಯರಿಗೆ ಬ್ಲ್ಯಾಕ್‌ಮೇಲ್ ಮಾಡುವ ಯತ್ನ ನಡೆದಿದೆ ಎಂದಿರುವ ಯತೀಂದ್ರ ಸಿದ್ದರಾಮಯ್ಯ ಅವರು, ತಂದೆಯ ಹೆಸರು ಕೆಡಿಸಲು ಸ್ಟಿಂಗ್ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಿ ಅವರ ಲೆಗಸಿ ಹಾಳು ಮಾಡಿ ಬ್ಲ್ಯಾಕ್‌ಮೇಲ್ ಮಾಡುವ ಪ್ರಯತ್ನ ನಡೆದಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್‌ನಲ್ಲಿ ನಮ್ಮ ಪಕ್ಷದವರೇ ಭಾಗಿ: ಯತೀಂದ್ರ

-

Prabhakara R
Prabhakara R Oct 23, 2026 4:36 PM

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬ್ಲ್ಯಾಕ್‌ಮೇಲ್ ಮಾಡುವ ಯತ್ನ ನಡೆದಿದೆ. ಸ್ಟಿಂಗ್ ಆಪರೇಷನ್‌ ಪ್ರಕರಣದಲ್ಲಿ (Sting Operation) ನಮ್ಮ ಪಕ್ಷದವರೇ ಇದ್ದಾರೆ ಎಂಬುವುದು ಗೊತ್ತಾಗಿದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸ್ಟಿಂಗ್ ಆಪರೇಷನ್ ಬಗ್ಗೆ ಮಾತನಾಡಿದ ಯತೀಂದ್ರ, ಸ್ಟಿಂಗ್ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಯಾರೇ ಇದ್ದರೂ ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ. ತನಿಖೆ ಸರಿಯಾಗಿ ನಡೆಯುತ್ತಿದೆ. ಆಕಸ್ಮಾತ್ ತನಿಖೆ ಸರಿಯಾಗಿ ನಡೆಯಲಿಲ್ಲ ಎಂದರೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯರಿಗೆ ಬ್ಲ್ಯಾಕ್‌ಮೇಲ್ ಮಾಡುವ ಯತ್ನ ನಡೆದಿದೆ ಎಂದಿರುವ ಅವರು, ತಂದೆಯ ಹೆಸರು ಕೆಡಿಸಲು ಸ್ಟಿಂಗ್ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಿ ಅವರ ಲೆಗಸಿ ಹಾಳು ಮಾಡಿ ಬ್ಲ್ಯಾಕ್‌ಮೇಲ್ ಮಾಡುವ ಪ್ರಯತ್ನ ನಡೆದಿದೆ. ಸ್ಟಿಂಗ್ ಪ್ರಕರಣದಲ್ಲಿ ಓರ್ವ ಮಹಿಳೆ ಇದ್ದಾರೆ. ಆ ಮಹಿಳೆ ನಮ್ಮ ಪಕ್ಷದವರು ಎಂದು ವಿಡಿಯೊ ಮೂಲಕವೇ ಗೊತ್ತಾಗುತ್ತದೆ ಎಂದು ಹೇಳಿದರು.

ಪುತ್ತೂರು ಟಿಕೆಟ್‌ಗಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಯತ್ನಿಸಿದ್ದಾರೆ. ಇದರಿಂದ ತಂದೆ ಬೇಜಾರಿಗಿದ್ದಾರೆ. 40 ವರ್ಷ ಕಳಂಕ ಇಲ್ಲದೇ ರಾಜಕಾರಣ ಮಾಡಿದ್ದಾರೆ. ಯಾರೋ ಒಬ್ಬರು ಈ ರೀತಿ ಮಾಡಿದ ತಕ್ಷಣ, ಪಕ್ಷದವರೆಲ್ಲಾ ನಮ್ಮ ವಿರುದ್ಧ ಇದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ತನಿಖೆಯಲ್ಲಿ ಸತ್ಯ ಹೊರಗೆ ಬರುತ್ತೆ ಎಂದು ತಿಳಿದರು.