ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: ಪ್ರತಿ ಜಿಲ್ಲೆಗೂ ಬಿಐಎಸ್‌ ಸೌಲಭ್ಯಕ್ಕೆ ಪ್ರಯತ್ನ; ಪ್ರಲ್ಹಾದ್‌ ಜೋಶಿ

Pralhad Joshi: ಪ್ರಸ್ತುತ 371 ಜಿಲ್ಲೆಗಳು ಬಿಐಎಸ್ ಸೌಲಭ್ಯ ಹೊಂದಿವೆ. ಮುಂದಿನ ದಿನಗಳಲ್ಲಿ ದೇಶಾದ್ಯಂತ ಎಲ್ಲ ಜಿಲ್ಲೆಗಳಲ್ಲೂ BIS ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಪ್ರತಿ ಜಿಲ್ಲೆಗೂ ಬಿಐಎಸ್‌ ಸೌಲಭ್ಯಕ್ಕೆ ಪ್ರಯತ್ನ; ಪ್ರಲ್ಹಾದ್‌ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ.

Profile Siddalinga Swamy May 27, 2025 11:58 PM

ನವದೆಹಲಿ: ದೇಶದ ಪ್ರತಿ ಜಿಲ್ಲೆಗಳಲ್ಲೂ ಭಾರತೀಯ ಮಾನದಂಡಗಳ ಬ್ಯೂರೋ (BIS) ಸೌಲಭ್ಯ ಕಲ್ಪಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi)‌ ತಿಳಿಸಿದರು. ಆಂಧ್ರಪ್ರದೇಶದಲ್ಲಿ ಮಂಗಳವಾರ ನಡೆದ BIS 9ನೇ ಆಡಳಿತ ಮಂಡಳಿ ಸಭೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಸ್ತುತ 371 ಜಿಲ್ಲೆಗಳು ಬಿಐಎಸ್ ಸೌಲಭ್ಯ ಹೊಂದಿವೆ. ಮುಂದಿನ ದಿನಗಳಲ್ಲಿ ದೇಶಾದ್ಯಂತ ಎಲ್ಲ ಜಿಲ್ಲೆಗಳಲ್ಲೂ BIS ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

2014ರಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದ ವೇಳೆ ಕೇವಲ 14 ಗುಣಮಟ್ಟ ನಿಯಂತ್ರಣ ಆದೇಶ (QCO) ಗಳಿದ್ದವು. ಆದರೆ, (ಕ್ಯೂಸಿಒಗಳು) ನಂತರದ 10 ವರ್ಷಗಳಲ್ಲಿ 2025ರ ವೇಳೆಗೆ 769 ಉತ್ಪನ್ನಗಳ ಪೈಕಿ 119ಕ್ಕೂ ಹೆಚ್ಚು ಕ್ಯೂಸಿಒಗಳನ್ನು ಹೊಂದಿದೆ. ಉತ್ಪನ್ನಗಳ ತಯಾರಿಕೆ ವ್ಯವಸ್ಥೆ, ವ್ಯಾಪಾರ ಉದ್ಯಮಗಳನ್ನು ಮತ್ತಷ್ಟು ಬಲಪಡಿಸಲು BIS ಮತ್ತಷ್ಟು ಚುರುಕಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಭಾರತದ ಉತ್ಪನ್ನಗಳು ಮತ್ತು ಭಾರತದ ಪ್ರಾಮಾಣೀಕರಣ ಶ್ರೇಷ್ಠ ಶ್ರೇಣಿಯುಳ್ಳದ್ದಾಗಿವೆ. ಕಳೆದ ವರ್ಷ 25000 ಉತ್ಪನ್ನಗಳ ಪರೀಕ್ಷೆ ನಡೆಸಲಾಗಿದೆ. ದೇಶಾದ್ಯಂತ ಪರೀಕ್ಷೆ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ, BIS ಪ್ರಯೋಗಾಲಯಗಳನ್ನು ನವೀಕರಿಸುವುದು ಸೇರಿದಂತೆ ಮಾರುಕಟ್ಟೆಯಲ್ಲಿ ಗುಣಮಟ್ಟದ ಉತ್ಪನ್ನಗಳಿಗಾಗಿ ಪ್ರತಿ ವರ್ಷ ಲಕ್ಷಾಂತರ ಮಾದರಿಗಳ ಪರೀಕ್ಷೆ ನಡೆಸುತ್ತಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಆಂಧ್ರಪ್ರದೇಶದಲ್ಲಿ ಮಂಗಳವಾರ ನಡೆದ BIS 9ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರ ಉತ್ಪನ್ನಗಳ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ BIS ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ಪ್ರಯೋಗಾಲಯಗಳನ್ನು ಹೆಚ್ಚಿಸಿದೆ ಎಂದು ಹೇಳಿದರು.

ಚಿನ್ನಾಭರಣಗಳಿಗೆ 2021ರಿಂದ ಹಾಲ್‌ಮಾರ್ಕಿಂಗ್‌ ಕಡ್ಡಾಯವಿದ್ದು, ಇದನ್ನು ರಾಷ್ಟ್ರವ್ಯಾಪಿ ವಿಸ್ತರಿಸಲಾಗುತ್ತಿದೆ. ಅಲ್ಲದೇ 55 ಸಾವಿರಕ್ಕೂ ಹೆಚ್ಚು ಉತ್ಪನ್ನಗಳಿಗೆ ಬ್ಯೂರೋ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಡ್‌ (BIS) ಪ್ರಮಾಣೀಕರಣ ನೀಡಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ʼಮೇಕ್‌ ಇನ್‌ ಇಂಡಿಯಾʼವನ್ನು ಬಲಪಡಿಸುತ್ತಿದೆ. 23,000ಕ್ಕೂ ಹೆಚ್ಚು ಸ್ಟ್ಯಾಂಡರ್ಡ್‌ಗಳನ್ನು BIS ಬೆಂಬಲಿಸುತ್ತಿದ್ದು, 55000ಕ್ಕೂ ಹೆಚ್ಚು ಉತ್ಪನ್ನಗಳನ್ನು ಪ್ರಮಾಣೀಕರಿಸುತ್ತಿದೆ. ದೇಶದಲ್ಲಿ ತಯಾರಾಗುವ ಉತ್ಪನ್ನಗಳ ಗುಣಮಟ್ಟವನ್ನು BIS ಖಚಿತಪಡಿಸಿದ್ದು, ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ಸೆಪ್ಟೆಂಬರ್‌ನಲ್ಲಿ 89ನೇ IEC ಸಾಮಾನ್ಯ ಸಭೆ

ಸೆಪ್ಟೆಂಬರ್ 8ರಿಂದ 19ರವರೆಗೆ ದೆಹಲಿಯಲ್ಲಿ 89ನೇ IEC ಸಾಮಾನ್ಯ ಸಭೆ ಆಯೋಜಿಸಲಾಗುತ್ತಿದೆ. ಉತ್ಪನ್ನಗಳ ಗುಣಮಟ್ಟದ ಮಾನದಂಡಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಎಂದಿಗೂ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಬಿಐಎಸ್ ಬಹು ದೂರ ಸಾಗಿದೆ. ಅಂತಾರಾಷ್ಟ್ರೀಯ ಮಾನದಂಡಗಳೊಂದಿಗೆ ಭಾರತೀಯ ಮಾನದಂಡಗಳನ್ನು ಸಮನ್ವಯಗೊಳಿಸುವ ಮೂಲಕ ನಾವಿನ್ನೂ ಗಮನಾರ್ಹ ಹೆಜ್ಜೆ ಗುರುತು ಮೂಡಿಸಬೇಕಿದೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | ISRO Recruitment 2025: ಇಸ್ರೋದಲ್ಲಿದೆ 320 ಹುದ್ದೆ; ಇಂದೇ ಅಪ್ಲೈ ಮಾಡಿ

BIS 9ನೇ ಆಡಳಿತ ಮಂಡಳಿ ಸಭೆಯಲ್ಲಿ ಆಂಧ್ರಪ್ರದೇಶದ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ, BIS ಮತ್ತು ಗ್ರಾಹಕ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಆಂಧ್ರಪ್ರದೇಶ, ಉತ್ತರಾಖಂಡ, ಬಿಹಾರ, ಗುಜರಾತ್ ಮತ್ತು ಅಸ್ಸಾಂ ರಾಜ್ಯ ಸಚಿವರು ಭಾಗವಹಿಸಿದ್ದರು.