ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಮನವೊಲಿಸಿದ್ದು ರಾಹುಲ್ ಗಾಂಧಿ; ಇದು ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆಯೇ?
ಕರ್ನಾಟಕ ರಾಜಕೀಯ ನಾಯಕತ್ವದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ಕಾಂಗ್ರೆಸ್ ಪಕ್ಷ ಈ ಮೂಲಕ ಸಾಕಷ್ಟು ಮುಂಚಿತವಾಗಿಯೇ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಸೂಚನೆಯನ್ನು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವೊಲಿಸಿರುವುದು ಈ ನಿಟ್ಟಿನಲ್ಲಿ ಒಂದು ಪ್ರಮುಖ ವಿಚಾರ ಎನ್ನಲಾಗುತ್ತಿದೆ.
ಸಂಗ್ರಹ ಚಿತ್ರ -
ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ (Lok sabha election) ಕಾಂಗ್ರೆಸ್ (congress) ಈಗಾಗಲೇ ಸಜ್ಜಾಗುತ್ತಿದೆಯೇ ಈ ಒಂದು ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಯಾಕೆಂದರೆ ಇತ್ತೀಚಿನ ಕಾಂಗ್ರೆಸ್ ನ ಕೆಲವು ನಡೆಗಳು ಮುಂದಿನ ಲೋಕಸಭಾ ಚುನಾವಣೆಯ ತಯಾರಿ ಎನ್ನಲಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಮಾಡಿರುವ ನಾಯಕತ್ವ ಬದಲಾವಣೆ ಇದರಲ್ಲಿ ಒಂದು ಪ್ರಮುಖ ಭಾಗವಾಗಿದೆ ಎನ್ನುತ್ತಿದ್ದಾರೆ ವಿಶ್ಲೇಷಣಾಕಾರರು. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಯಶಸ್ವಿಯಾಗಿರುವುದು ಎಲ್ಲವೂ ಮುಂದಿನ ಲೋಕಸಭಾ ಚುನಾವಣೆ ಕಾರ್ಯತಂತ್ರದ ಭಾಗವಾಗಿದೆ.
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕಳೆದ ನವೆಂಬರ್ ತಿಂಗಳಿನಿಂದ ನಡೆಯುತ್ತಿದೆ. ಅಂತಿಮವಾಗಿ ಇದರ ಜವಾಬ್ದಾರಿ ರಾಹುಲ್ ಗಾಂಧಿ ಹೆಗಲಿಗೆ ಬಿದ್ದಿದ್ದು, ಇದರಲ್ಲಿ ಅವರು ಈಗ ಯಶಸ್ವಿಯಾಗಿದ್ದಾರೆ.
ಆಸ್ತಿ ವಿವಾದ: ಸಮಾಜವಾದಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಮೇಲೆ ಹಲ್ಲೆ, ವಿಡಿಯೋ ವೈರಲ್!
ಕಳೆದ ಸೋಮವಾರ ಮತ್ತು ಮಂಗಳವಾರ ರಾಹುಲ್ ಗಾಂಧಿ ಅವರು ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಿದ್ದರು. ಸುಮಾರು 35 ನಿಮಿಷಗಳ ಸಂವಾದದಲ್ಲಿ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡುವಂತೆ ಮನವೊಲಿಸಿದರು.
ಕಾಂಗ್ರೆಸ್‌ನ ಅತ್ಯಂತ ಉನ್ನತ ಮಟ್ಟದ ಒಬಿಸಿ ನಾಯಕರಾಗಿರುವ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯ ಮಾತ್ರವಲ್ಲ ರಾಷ್ಟ್ರೀಯ ನೆಲೆಯಲ್ಲೂ ಕೂಡ ಕಾಂಗ್ರೆಸ್ ಪಕ್ಷದ ಮುಖ್ಯ ನಾಯಕರಾಗಿದ್ದಾರೆ. ಹೀಗಾಗಿ ಇವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಕಾಂಗ್ರೆಸ್ ಹೈಕಮಾಂಡ್ ಗೆ ಬಹುದೊಡ್ಡ ನಿರ್ಧಾರವಾಗಿದೆ.
ಇದು ಈಗ 2029ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಾಡಲಾಗುತ್ತಿದೆ ಎನ್ನಲಾಗಿದೆ. ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ನೀಡಬಹುದು ಎಂದು ಸಿದ್ದರಾಮಯ್ಯ ವಾದಿಸಿದರು. ಆದರೆ ರಾಹುಲ್ ಗಾಂಧಿ ತಮ್ಮ ನಿರ್ಧಾರಕ್ಕೆ ಬದ್ದವಾಗಿದ್ದರು. ಇದನ್ನು ಕೇರಳ ಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿದ್ದ ಸ್ಪರ್ಧೆಯಂತೆ ಪರಿಗಣಿಸಿ ಸಮಸ್ಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಪರಿಹರಿಸಿತ್ತು.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಬಹುದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಗೆ ಇಲ್ಲಿ ಮುಖ್ಯಮಂತ್ರಿ ಆಯ್ಕೆ ಸವಾಲಾಗಿ ಪರಿಣಮಿಸಿತ್ತು. ಹುದ್ದೆಯ ರೇಸ್ ನಲ್ಲಿ ವಿ.ಡಿ. ಸತೀಶನ್, ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಅವರಿದ್ದು, ಈ ಬಿಕ್ಕಟ್ಟು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಒಂದು ವಾರಕ್ಕೂ ಹೆಚ್ಚು ಕಾಲ ತೆಗೆದುಕೊಂಡಿತ್ತು.
ಭಾರತಕ್ಕೆ 'ಎಲ್ ನಿನೋ' ಭೀತಿ: ದೇಶದಲ್ಲಿ ಮಳೆ ಕೊರತೆ ಮುನ್ಸೂಚನೆ
ರಾಹುಲ್ ಗಾಂಧಿ ಅವರು ವೇಣುಗೋಪಾಲ್ ಅವರನ್ನು ಬೆಂಬಲಿಸಿದ್ದರು. ಆದರೆ ಮತದಾರರು ಸತೀಶನ್ ಅವರನ್ನೇ ಮುಖ್ಯಮಂತ್ರಿಯಾಗಿ ಕಾಣುವ ಇಚ್ಛೆ ಹೊಂದಿದ್ದರು. ಆದರೆ ಕಾಂಗ್ರೆಸ್ ನ ಪ್ರಮುಖ ಮಿತ್ರಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಹುಲ್ ಗಾಂಧಿ ಅವರ ತೀರ್ಪನ್ನು ಒಪ್ಪಿಕೊಂಡಿತ್ತು. ಕರ್ನಾಟಕ ಮತ್ತು ಕೇರಳದ ಈ ಎರಡು ಸಂದಿಗ್ದ ಪರಿಸ್ಥಿತಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಚ್ಚು ಮೌನವಾಗಿದ್ದರು ಎಂದು ಮೂಲಗಳು ತಿಳಿಸಿವೆ.