ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Ramakrishna Hegde’s centenary: ನಾಳೆ ವಿಧಾನಸೌಧದಲ್ಲಿ 'ರಾಮಕೃಷ್ಣ ಹೆಗಡೆ ಜನ್ಮ ಶತಮಾನೋತ್ಸವ'; ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸೇರಿ ಗಣ್ಯರು ಭಾಗಿ

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆ.29ರಂದು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮಶತಮಾನೋತ್ಸವ ಆಯೋಜಿಸಲಾಗಿದೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜನ್ಮಶತಮಾನೋತ್ಸವದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

ನಾಳೆ ವಿಧಾನಸೌಧದಲ್ಲಿ 'ರಾಮಕೃಷ್ಣ ಹೆಗಡೆ ಜನ್ಮ ಶತಮಾನೋತ್ಸವ'

-

Prabhakara R
Prabhakara R Aug 28, 2026 9:37 PM

ಬೆಂಗಳೂರು: ರಾಮಕೃಷ್ಣ ಹೆಗಡೆ ಜನ್ಮಶತಮಾನೋತ್ಸವ ಸಮಿತಿ ಹಾಗೂ ರಾಷ್ಟ್ರೀಯ ನವ ನಿರ್ಮಾಣ ವೇದಿಕೆ ವತಿಯಿಂದ ಆ. 29ರಂದು ಸಂಜೆ 4 ಗಂಟೆಗೆ ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮಶತಮಾನೋತ್ಸವ (Ramakrishna Hegde’s centenary) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಸಮಿತಿಯ ಅಧ್ಯಕ್ಷ ಆ‌ರ್.ವಿ. ದೇಶಪಾಂಡೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. 'ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಜನ್ಮಶತಮಾನೋತ್ಸವ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌, ಕೇಂದ್ರ ಸಚಿವ ಪ್ರಲಾದ ಜೋಶಿ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3ರಿಂದ 4 ಗಂಟೆಯವರೆಗೆ ಬಿಂದು ಸುಬ್ರಮಣಿಯಂ ಮತ್ತು ಅಂಬಿ ಸುಬ್ರಮಣಿಯಂ ಅವರಿಂದ ಸಂಗೀತ ಕಛೇರಿ ನಡೆಯಲಿದೆ' ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಮಾತನಾಡಿ, ರಾಮಕೃಷ್ಣ ಹೆಗಡೆ ಅವರು ಮೌಲ್ಯಾಧಾರಿತ ರಾಜಕಾರಣಿ. ಅವರ ವಿಚಾರವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು' ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ಅವರು ಮಾತನಾಡಿ, ಮುಂದಿನ ಒಂದು ವರ್ಷ ವಿವಿಧೆಡೆ ರಾಮಕೃಷ್ಣ ಹೆಗಡೆ ಜನ್ಮಶತಮಾನೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತದೆ. ರಾಜ್ಯ ಸರ್ಕಾರ 1 ಕೋಟಿ ಅನುದಾನ ನೀಡಿದೆ ಎಂದರು.

ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿ.ಕೆ. ಶಿವಕುಮಾರ್

ಈ ವೇಳೆ ರಾಮಕೃಷ್ಣ ಹೆಗಡೆ ಅವರ ಮಗಳು ಮಮತಾ ನಿಚ್ಚಾನಿ, ರಾಷ್ಟ್ರೀಯ ನವ ನಿರ್ಮಾಣ ವೇದಿಕೆಯ ಎಂ.ಪಿ. ನಾಡಗೌಡ, ಟಿ. ಪ್ರಭಾಕ‌ರ್ ಉಪಸ್ಥಿತರಿದ್ದರು.