ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಮಾದರಿ: ರಾಜೀನಾಮೆ ಬಳಿಕ ರಾಹುಲ್ ಗಾಂಧಿ ಶ್ಲಾಘನೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ.

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅವರನ್ನು ಹೊಗಳಿದ ರಾಹುಲ್ ಗಾಂಧಿ

ಸಂಗ್ರಹ ಚಿತ್ರ -

ನವದೆಹಲಿ: ಸಿದ್ದರಾಮಯ್ಯ (former cm Siddaramaiah) ಅವರು ಕಾಂಗ್ರೆಸ್ (Congress) ಪಕ್ಷದ ನಾಯಕರಿಗೆ ಮಾದರಿಯಾಗಿದ್ದಾರೆ. ಅವರು ಪಕ್ಷಕ್ಕೆ ನೀಡಿದ ಭರವಸೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಶುಕ್ರವಾರ ದೆಹಲಿಯಲ್ಲಿ ರಾಹುಲ್ ಗಾಂಧಿ (rahul gandhi) ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Congress president Mallikarjun Kharge) ಅವರ ಸಿದ್ದರಾಮಯ್ಯ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಚಿವ ಸಂಪುಟದ ಕುರಿತು ಮಾತುಕತೆಯನ್ನು ಕೂಡ ನಡೆಸಲಾಗಿದೆ.

ಸಿದ್ದರಾಮಯ್ಯ ಅವರ ನಡೆಯಿಂದ ಸಾಕಷ್ಟು ಸಂತೋಷಗೊಂಡಿದ್ದ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕತ್ವ ಬದಲಾವಣೆ ಯೋಜನೆಯನ್ನು ಅವರು ಗೌರವಿಸಿದ್ದಕ್ಕಾಗಿ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್; ಜೂನ್ 3ರಂದು ಪ್ರಮಾಣ ವಚನ?

ಭರವಸೆಗಾಗಿ ಕುರ್ಚಿಯನ್ನು ತ್ಯಾಗ ಮಾಡುವ ಮೂಲಕ ನೀವು ಇತರ ಕಾಂಗ್ರೆಸ್ ನಾಯಕರಿಗೆ ಮಾದರಿಯಾಗಿದ್ದೀರಿ. ಪಕ್ಷ ಮತ್ತು ಸಿದ್ಧಾಂತಕ್ಕಾಗಿ ನೀವು ತೋರಿಸಿರುವ ಬದ್ಧತೆಯನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ ಎಂದು ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಕ್ಷದ ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ವರು ಸಂಪುಟ ಪ್ರಾತಿನಿಧ್ಯ ಮತ್ತು ಸಮುದಾಯ ಸಮತೋಲನದ ಕುರಿತು ಮಾತನಾಡಿದ್ದು, ಇದರೊಂದಿಗೆ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪ್ರಮುಖ ಖಾತೆಯ ಬೇಡಿಕೆ ಇಟ್ಟಿದ್ದಾರೆ. ಯತೀಂದ್ರ ಅವರಿಗೆ ಸರ್ಕಾರದಲ್ಲಿ ಉನ್ನತ ಸ್ಥಾನ, ಯಾವುದಾದರೂ ಖಾತೆಗೆ ಪರಿಗಣಿಸುವುದಾಗಿ ಈ ಸಂದರ್ಭದಲ್ಲಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಭರವಸೆ ನೀಡಿದೆ ಎನ್ನಲಾಗಿದೆ.

ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ ತಮ್ಮ ನಿಷ್ಠಾವಂತರಲ್ಲಿ ಯಾರು ಇರಬೇಕು ಎನ್ನುವ ಕುರಿತು ಸಿದ್ದರಾಮಯ್ಯ ಅವರು ಹೆಸರುಗಳನ್ನೂ ಹೈಕಮಾಂಡ್ ಗೆ ಸಲ್ಲಿಸಿಲ್ಲ. ಶುಕ್ರವಾರ ಪಟ್ಟಿಯನ್ನು ಅಂತಿಮಗೊಳಿಸಿ ಶನಿವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರಿಗೆ ಇದನ್ನು ನೀಡುವ ನೀರಿಕ್ಷೆ ಇದೆ.

ಎಲ್ಲಾ ಪ್ರಮುಖ ಸಮುದಾಯಗಳಿಗೂ ಹೊಸ ಸಚಿವ ಸಂಪುಟದಲ್ಲಿ ಸಾಕಷ್ಟು ಪ್ರಾತಿನಿಧ್ಯ ಸಿಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದು, ಅದರ ಬಳಿಕವೇ ಉಪಮುಖ್ಯಮಂತ್ರಿ ನೇಮಕ ಮಾಡಬೇಕು ಎಂದಿದ್ದಾರೆ. ಉಪಮುಖ್ಯಮಂತ್ರಿ ಹುದ್ದೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ಲಿಂಗಾಯತ ಸಮುದಾಯದಿಂದ ತಲಾ ಒಬ್ಬ ಪ್ರತಿನಿಧಿಯನ್ನು ನೀಡಬೇಕು ಎಂದು ಅವರು ಹೈಕಮಾಂಡ್ ಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಇದರೊಂದಿಗೆ ರಾಜ್ಯಸಭೆ, ಎಂಎಲ್‌ಸಿ ನೇಮಕಾತಿಗಳಿಗೆ ಸಂಬಂಧಿಸಿ ಹೆಸರುಗಳ ಪಟ್ಟಿಗಳನ್ನು ಮತ್ತು ಸಂಪುಟ ಖಾತೆಗಳಿಗೆ ತಮ್ಮ ಆದ್ಯತೆಗಳನ್ನು ಕೂಡ ಅವರು ಸಲ್ಲಿಸಿದ್ದಾರೆ. ಯತೀಂದ್ರ ಅವರಿಗೆ ವೈದ್ಯಕೀಯ ಶಿಕ್ಷಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಅಥವಾ ಕೈಗಾರಿಕೆ ಅಥವಾ ಜಲಸಂಪನ್ಮೂಲ ಖಾತೆಗಳನ್ನು ನೀಡುವಂತೆ ತಿಳಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಮನವೊಲಿಸಿದ್ದು ರಾಹುಲ್ ಗಾಂಧಿ; ಇದು ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆಯೇ?

ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿದಿರುವ ಸಿದ್ದರಾಮಯ್ಯ ಅವರು ರಾಷ್ಟ್ರೀಯ ರಾಜಕೀಯಕ್ಕೆ ತೆರಳಲು ಆಸಕ್ತಿ ತೋರಿಸಿಲ್ಲ. ಕಾಂಗ್ರೆಸ್ ಹೈಕಮಾಂಡ್ ಅವರಿಗೆ ರಾಜ್ಯಸಭಾ ಸ್ಥಾನವನ್ನು ನೀಡಲು ಮುಂದಾಗಿದ್ದು ಅದನ್ನು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.