ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Controversy: ಸರ್ಜಿಕಲ್ ಸ್ಟ್ರೈಕ್‌ಗೆ ಪುರಾವೆ ಕೊಡಿ... ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಸಂಸದ- ಬಿಜೆಪಿ ಕೆಂಡಾಮಂಡಲ

2019ರಲ್ಲಿ ಪುಲ್ವಾಮಾ ಭಯೋತ್ಪಾದಕ ದಾಳಿಯ (Pulwama terror attack) ಅನಂತರ ನಡೆದಿರುವ ಸರ್ಜಿಕಲ್ ಸ್ಟ್ರೈಕ್‌ಗಳನ್ನು ಪ್ರಶ್ನಿಸಿರುವ ಕಾಂಗ್ರೆಸ್ ಸಂಸದ (Congress MP) ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ಯಾರೂ ಅವುಗಳನ್ನು ನೋಡಲಿಲ್ಲ ಎಂದು ಹೇಳಿ ದಾಳಿಗೆ ಪುರಾವೆಗಳನ್ನು ಕೇಳಿ ವಿವಾದ ಸೃಷ್ಟಿಸಿದ್ದಾರೆ. ಅವರ ಈ ಹೇಳಿಕೆಗಳನ್ನು ಖಂಡಿಸಿರುವ ಬಿಜೆಪಿ ನಾಯಕರು, ಚರಣ್ ಜಿತ್ ಸಿಂಗ್ ಅವರು ಸಶಸ್ತ್ರ ಪಡೆಗಳ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಜಿಕಲ್‌ ಸ್ಟ್ರೈಕ್‌ ಬಗ್ಗೆ ಅನುಮಾನ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಸಂಸದ

ಪಂಜಾಬ್: ಭಾರತೀಯ ಸೇನೆಯು (Indian Army) ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್‌ಗಳನ್ನು (surgical strikes) ಯಾರು ನೋಡಿದ್ದಾರೆ ಎಂದು ಪ್ರಶ್ನಿಸಿದ ಕಾಂಗ್ರೆಸ್ ಸಂಸದ (Congress MP) ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ( Charanjit Singh Channi) ಈಗ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಚರಣ್‌ಜಿತ್ ಸಿಂಗ್ ಚನ್ನಿ ನೀಡಿರುವ ಹೇಳಿಕೆಯು ಬಿಜೆಪಿ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕರು ನೀವು ರಾಹುಲ್ ಗಾಂಧಿ ಜೊತೆ ಪಾಕಿಸ್ತಾನಕ್ಕೆ ತೆರಳಿ ಎಂದು ಹೇಳಿದ್ದಾರೆ.

2019ರಲ್ಲಿ ಪುಲ್ವಾಮಾ ಭಯೋತ್ಪಾದಕ ದಾಳಿಯ ಅನಂತರ ನಡೆದಿರುವ ಸರ್ಜಿಕಲ್ ಸ್ಟ್ರೈಕ್‌ಗಳನ್ನು ಪ್ರಶ್ನಿಸಿರುವ ಚರಣ್ ಜಿತ್ ಸಿಂಗ್, ಯಾರೂ ಅವುಗಳನ್ನು ನೋಡಲಿಲ್ಲ ಎಂದು ಹೇಳಿ ದಾಳಿಗೆ ಪುರಾವೆಗಳನ್ನು ಕೇಳಿ ವಿವಾದ ಸೃಷ್ಟಿಸಿದರು. ಅವರ ಈ ಹೇಳಿಕೆಗಳನ್ನು ಖಂಡಿಸಿರುವ ಬಿಜೆಪಿ ನಾಯಕರು, ಚರಣ್ ಜಿತ್ ಸಿಂಗ್ ಅವರು ಸಶಸ್ತ್ರ ಪಡೆಗಳ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಚರಣ್ ಜಿತ್ ಸಿಂಗ್, ಸರ್ಜಿಕಲ್ ಸ್ಟ್ರೈಕ್ ಎಲ್ಲಿ ನಡೆಯಿತು, ಆ ಸಮಯದಲ್ಲಿ ಯಾರು ಕೊಲ್ಲಲ್ಪಟ್ಟರು ಮತ್ತು ಪಾಕಿಸ್ತಾನದಲ್ಲಿ ಇದು ಎಲ್ಲಿ ಸಂಭವಿಸಿತು ಎಂದು ನನಗೆ ತಿಳಿದಿಲ್ಲ. ಎಲ್ಲಿಯೂ ಸರ್ಜಿಕಲ್ ಸ್ಟ್ರೈಕ್ ಕಂಡುಬಂದಿಲ್ಲ. ಯಾರಿಗೂ ಈ ಬಗ್ಗೆ ತಿಳಿದಿರಲಿಲ್ಲ. ನಾನು ಪುರಾವೆ ಕೇಳಿದ್ದೇನೆ ಎಂದು ಹೇಳಿದ್ದರು.

ಕಾಶ್ಮೀರದ ಪಹಲ್ಗಾಮ್ ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಕುರಿತು ಪ್ರತಿಕ್ರಿಯೆ ನೀಡುವಾಗ ಚನ್ನಿಯವರು ಈ ಹೇಳಿಕೆ ನೀಡಿದ್ದಾರೆ. ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಸರ್ಕಾರ ಏನಾದರೂ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದಿರುವ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಅಪರಾಧಿಗಳು ಯಾರೆಂದು ಜನರಿಗೆ ತಿಳಿಸಿ ಮತ್ತು ಅವರನ್ನು ಶಿಕ್ಷಿಸಿ ಎಂದು ಹೇಳಿದ್ದಾರೆ.

ಪಹಲ್ಗಾಮ್ ದಾಳಿ ನಡೆದು ಹತ್ತು ದಿನಗಳು ಕಳೆದಿವೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಪಾಕಿಸ್ತಾನದ ವಿರುದ್ಧ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ನೋಡಲು ಇಡೀ ದೇಶ ಕಾಯುತ್ತಿದೆ ಎಂದು ಹೇಳಿದರು.

ನೀವೂ ಪಾಕಿಸ್ತಾನಕ್ಕೆ ಹೋಗಬಹುದು ಎಂದ ಬಿಜೆಪಿ

ಕಾಂಗ್ರೆಸ್‌ ಸಂಸದನ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ದೆಹಲಿ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, ಸಶಸ್ತ್ರ ಪಡೆಗಳನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಚನ್ನಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು

ಸರ್ಜಿಕಲ್ ಸ್ಟ್ರೈಕ್‌ಗೆ ಪುರಾವೆ ಬೇಕು ಎಂಬ ಚರಣ್‌ಜಿತ್ ಸಿಂಗ್ ಚನ್ನಿ ಅವರ ಹೇಳಿಕೆಯು ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ಕೊಳಕು ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಈ ಜನರು ಸೇನೆಯ ನೈತಿಕತೆಯನ್ನು ಕುಗ್ಗಿಸಲು ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಹೇಳಿದರು.

ನೀವು ರಾಹುಲ್ ಗಾಂಧಿ ಅವರೊಂದಿಗೆ ಪಾಕಿಸ್ತಾನಕ್ಕೆ ಹೋಗಿ ವಾಯುದಾಳಿಯ ಪುರಾವೆಗಳನ್ನು ನೋಡಬಹುದು. ಭಾರತವು ಸರ್ಜಿಕಲ್ ಸ್ಟ್ರೈಕ್ ನಡೆಸುವ ಮೂಲಕ ಬಹಳಷ್ಟು ಹಾನಿಯನ್ನುಂಟು ಮಾಡಿದೆ ಎಂದು ಪಾಕಿಸ್ತಾನವೇ ಹೇಳುತ್ತಿದೆ. ಚರಣ್‌ಜಿತ್ ಸಿಂಗ್ ಚನ್ನಿ ಮತ್ತೊಮ್ಮೆ ಗಾಂಧಿ ಕುಟುಂಬದ ಕೊಳಕು ರಾಜಕೀಯ ಮತ್ತು ಮನಸ್ಥಿತಿಯನ್ನು ತೋರಿಸಿದ್ದಾರೆ. ಅವರು ಯಾವಾಗಲೂ ಸೈನ್ಯವನ್ನು ಪ್ರಶ್ನಿಸುತ್ತಾರೆ ಮತ್ತು ಸೇನಾಬಲವನ್ನು ಕುಗ್ಗಿಸುತ್ತಾರೆ. ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಪ್ರತಿಕ್ರಿಯಿಸಿ, ಸರ್ಜಿಕಲ್ ಸ್ಟ್ರೈಕ್‌ಗಳನ್ನು ಅನುಮಾನಿಸುವ ಚನ್ನಿ ಹೇಳಿಕೆ ಭಾರತೀಯ ಸಶಸ್ತ್ರ ಪಡೆಗಳು ಮತ್ತು ಭಾರತದ ಜನರ ಮನೋಬಲವನ್ನು ಕುಗ್ಗಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Pahalgam Terror Attack: ಭಾರತ- ಪಾಕ್‌ ನಡುವೆ ಯುದ್ಧದ ವಾತಾವರಣ; ಸಭೆ ಕರೆದ ಯುರೋಪಿಯನ್‌ ಒಕ್ಕೂಟ

ಹೊರಗಿನಿಂದ ನೋಡಿದರೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC). ಆದರೆ ಒಳಗಿನಿಂದ ಅವರು ಪಾಕಿಸ್ತಾನ ಕಾರ್ಯಕಾರಿ ಸಮಿತಿ(PWC). ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದ ಬಳಿಕ ಕೆಲವು ಪ್ರಸ್ತಾಪಗಳನ್ನು ಅಂಗೀಕರಿಸಲಾಯಿತು. ಬಳಿಕ ಚರಣ್‌ಜಿತ್ ಸಿಂಗ್ ಚನ್ನಿ ಈ ಪತ್ರಿಕಾಗೋಷ್ಠಿ ನಡೆಸಿದರು ಎಂದರು.

ಚರಣ್‌ಜಿತ್ ಸಿಂಗ್ ಚನ್ನಿ ಪುಲ್ವಾಮಾ ಭಯೋತ್ಪಾದಕ ದಾಳಿಯ ಅನಂತರ ಸರ್ಜಿಕಲ್ ಸ್ಟ್ರೈಕ್ ಎಂದಿಗೂ ನಡೆಸಲಾಗಿಲ್ಲ ಎಂದು ಹೇಳಿದರು. ಪಾಕಿಸ್ತಾನಿ ಭಯೋತ್ಪಾದಕರು ಮತ್ತು ಪಾಕಿಸ್ತಾನಿ ಸೈನ್ಯಕ್ಕೆ ಆಮ್ಲಜನಕವನ್ನು ಒದಗಿಸಲು ಕಾಂಗ್ರೆಸ್ ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಸಂಬಿತ್ ಪಾತ್ರಾ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ರಾಷ್ಟ್ರೀಯ ಏಕತೆ ಪಕ್ಷ ಬದ್ಧವಾಗಿರುವುದಾಗಿ ಹೇಳಿದ್ದು, ಪಹಲ್ಗಾಮ್ ದಾಳಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.