ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Basavaraj Bommai: ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂದ ಬಸವರಾಜ ಬೊಮ್ಮಾಯಿ

Basavaraj Bommai: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದಲ್ಲಿ ಸುಮಾರು 5 ಲಕ್ಷ ಕೋಟಿ ಹೊಸ ಸಾಲ ಮಾಡಿ, ದಾಖಲೆ ಸಾಲಗಾರ ಸಿದ್ದರಾಮಯ್ಯ ಎಂದು ಹೆಸರು ಪಡೆದುಕೊಂಡಿದ್ದಾರೆ. ಎಲ್ಲ ಇಲಾಖೆಗಳಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದ್ದು ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂದ ಬಸವರಾಜ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ) -

Profile
Siddalinga Swamy Mar 31, 2026 7:28 PM

ದಾವಣಗೆರೆ, ಮಾ.31: ರಾಜ್ಯದಲ್ಲಿ ಒಂದು ರೀತಿಯಲ್ಲಿ ಟ್ಯಾಕ್ಸ್ ಟೆರರಿಸಂ (tax terrorism) ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲನೇ ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದರು. ನಂತರ ಹಾಲಿನ ದರ, ಎರಡು ಬಾರಿ ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಮೋಟರ್ ವೆಹಿಕಲ್ ತೆರಿಗೆ ಹೆಚ್ಚಳ ಮಾಡಿದ್ದಾರೆ. ಮೂರು ವರ್ಷದಲ್ಲಿ 60 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದರು.

ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದಲ್ಲಿ ಸುಮಾರು 5 ಲಕ್ಷ ಕೋಟಿ ಹೊಸ ಸಾಲ ಮಾಡಿ, ದಾಖಲೆ ಸಾಲಗಾರ ಸಿದ್ದರಾಮಯ್ಯ ಎಂದು ಹೆಸರು ಪಡೆದುಕೊಂಡಿದ್ದಾರೆ. ಎಲ್ಲ ಇಲಾಖೆಗಳಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದ್ದು ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ. ಯಾವುದೇ ಹಳ್ಳಿಯಲ್ಲಿ ನೋಂದಣಿ ಮಾಡಬೇಕೆಂದರೆ ಲಂಚದ ಹಣ ಬೆಂಗಳೂರಿಗೆ ಮುಟ್ಟಬೇಕು. ಇಲ್ಲದಿದ್ದರೆ ನೋಂದಣಿ ಆಗುವುದಿಲ್ಲ.

ದೂರದ ಹಳ್ಳಿಯಲ್ಲಿ ಒಂದು ಎಕರೆ ಚೇಂಜ್ ಆಫ್ ಲ್ಯಾಂಡ್‌ಗೆ 10 ಲಕ್ಷ ರೂ. ನಿಗದಿ ಮಾಡಿದ್ದಾರೆ. ಇವರು ಕೊಡುವಂತಹ ಅಕ್ಕಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ರೇಷನ್ ಅಂಗಡಿಯವರೂ ದೂರು ದಾಖಲಿಸಿದ್ದಾರೆ. ಪ್ರತಿ ತಿಂಗಳು ಎಷ್ಟು ಕಡಿಮೆ ಅಕ್ಕಿ ಹಂಚಿಕೆ ಮಾಡುತ್ತೇವೆ ಅಷ್ಟು ರಾಜ್ಯ ಸರ್ಕಾರಕ್ಕೆ ಅನುಕೂಲ ಆಗುತ್ತದೆ ಎನ್ನುತ್ತಾರೆ. ಆಸ್ಪತ್ರೆಯಲ್ಲಿ, ಮಂತ್ರಿಗಳ ಕಚೇರಿ, ಸಿಎಂ ಕಚೇರಿಯಿಂದಲೇ ಭ್ರಷ್ಟಾಚಾರ ಆರಂಭವಾಗುತ್ತದೆ. ವರ್ಗಾವಣೆ ಉದ್ಯಮವಾಗಿ ಮಾರ್ಪಾಡಾಗಿದೆ. ಯಾವುದೇ ಅಧಿಕಾರಿ ಎಷ್ಟೇ ದುಡ್ಡು ಕೊಟ್ಟು ಬಂದರೂ ಎಷ್ಟು ದಿನ ಇರುತ್ತಾನೆ ಎನ್ನುವ ನಂಬಿಕೆ ಇಲ್ಲ. ಆಡಳಿತ ಸಂಪೂರ್ಣ ಕುಸಿದು ಹೋಗಿದೆ. ಜನರ ಮೇಲೆ ಭ್ರಷ್ಟಾಚಾರದ ಹೊರೆ ಹಾಕುತ್ತಾರೆ ಎಂದು ಅವರು ಆರೋಪಿಸಿದರು.

ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ

ಅಧಃಪತನದ ಮೊದಲ ಹೆಜ್ಜೆ

ರಾಜ್ಯ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ಪಿಡಬ್ಲ್ಯುಡಿ, ಅಬಕಾರಿ, ಕೆಇಬಿ ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ಅದನ್ನು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆರೋಪ ಮಾಡುವ ಸಾಹಸ ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಆದರೆ, ಮೂರು ವರ್ಷದಲ್ಲಿ ಸಿಎಂ ಅವರ ದುರಾಡಳಿತ ರಾಜ್ಯದ ಮನೆಮನೆಗೂ ತಲುಪಿದೆ. ದಾವಣಗೆರೆ, ಬಾಗಲಕೋಟೆಯ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ನ ಅಧಃಪತನದ ಮೊದಲನೆಯ ಹೆಜ್ಜೆಯಾಗುತ್ತದೆ. ಅದಕ್ಕೆ ದಾವಣಗೆರೆ, ಬಾಗಲಕೋಟೆ ಜನ ಆಶೀರ್ವಾದ ಮಾಡುವ ವಿಶ್ವಾಸ ಇದೆ. ಬಿಜೆಪಿ ಒಗ್ಗಟಿನಿಂದ ಕೆಲಸ ಮಾಡಿ ಈ ದುಷ್ಟ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ನಾವು ವಿರಮಿಸುವುದಿಲ್ಲ. ಅದಕ್ಕಾಗಿ ಜನರು ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.