Karnataka Drought: ಕರ್ನಾಟಕದ 101 ತಾಲೂಕುಗಳು ಬರಪೀಡಿತ; ರಾಜ್ಯ ಸರ್ಕಾರ ಘೋಷಣೆ
Drought-Hit Taluks in Karnataka: ಕೇಂದ್ರ ಸರ್ಕಾರ ನೀಡಿರುವ ಮಾನದಂಡಗಳಿಗೆ ಅನುಗುಣವಾಗಿ ಸಮಗ್ರ ಪರಿಶೀಲನೆ ನಡೆಸಿ ರಾಜ್ಯ ಸರ್ಕಾರವು 101 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದೆ. SDRF ಮಾರ್ಗಸೂಚಿಗಳ ಪ್ರಕಾರ ಬರ ಪರಿಹಾರ ಮತ್ತು ತುರ್ತು ಸ್ಪಂದನೆಗೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸರ್ಕಾರ ಸೂಚಿಸಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು: ಈ ಬಾರಿಯ ಮುಂಗಾರಿನಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ (Karnataka Drought) ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು (Drought-Hit Taluks) ರಾಜ್ಯ ಸರ್ಕಾರ ಘೋಷಿಸಿದೆ. ಇವುಗಳಲ್ಲಿ 89 ತಾಲೂಕುಗಳು ತೀವ್ರ ಬರಪೀಡಿತ ಹಾಗೂ 12 ತಾಲೂಕುಗಳು ಮಧ್ಯಮ ಬರಪೀಡಿತ ಎಂದು ವರ್ಗೀಕರಿಸಲಾಗಿದೆ.
ಈ ಬಗ್ಗೆ ಡಿಸಿಎಂ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಬರ ಘೋಷಣೆಗೆ ಕೇಂದ್ರ ಸರ್ಕಾರ ನೀಡಿರುವ ಮಾನದಂಡಗಳಿಗೆ ಅನುಗುಣವಾಗಿ ಸಮಗ್ರ ಪರಿಶೀಲನೆ ನಡೆಸಿ ನಮ್ಮ ಸರ್ಕಾರವು 101 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದೆ. ಇವುಗಳಲ್ಲಿ 89 ತಾಲೂಕುಗಳು ತೀವ್ರ ಬರಪೀಡಿತ ಹಾಗೂ 12 ತಾಲೂಕುಗಳು ಮಧ್ಯಮ ಬರಪೀಡಿತ ಎಂದು ವರ್ಗೀಕರಿಸಲಾಗಿದೆ.
ಈ ಘೋಷಣೆ ತಕ್ಷಣದಿಂದಲೇ ಜಾರಿಗೆ ಬರಲಿದೆ. SDRF ಮಾರ್ಗಸೂಚಿಗಳ ಪ್ರಕಾರ ಬರ ಪರಿಹಾರ ಮತ್ತು ತುರ್ತು ಸ್ಪಂದನೆಗೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಬೆಳೆ ನಷ್ಟದ ಮೌಲ್ಯಮಾಪನ ನಡೆಸಲಿವೆ ಎಂದು ತಿಳಿಸಿದ್ದಾರೆ.
ಕಾನೂನು ಚೌಕಟ್ಟಿನಲ್ಲಿ ಬರಗಾಲ ಪರಿಸ್ಥಿತಿ ಪರಾಮರ್ಶೆ, ಬರ ಪರಿಹಾರಕ್ಕೆ ಚಿಂತನೆ: ಸಿಎಂ ಡಿಕೆ ಶಿವಕುಮಾರ್ ಭರವಸೆ
ಬರ ಪರಿಸ್ಥಿತಿಯನ್ನು ಖಾರಿಫ್ ಅವಧಿ ಪೂರ್ಣವಾಗುವವರೆಗೆ ಪ್ರತಿ ವಾರವೂ ಪರಿಶೀಲಿಸಲಾಗುವುದು. ನಿಗದಿತ ಮಾನದಂಡಗಳಿಗೆ ಒಳಪಡುವ ಹೆಚ್ಚುವರಿ ತಾಲೂಕುಗಳನ್ನೂ ಮುಂದಿನ ದಿನಗಳಲ್ಲಿ ಬರಪೀಡಿತವೆಂದು ಘೋಷಿಸಲಾಗುವುದು.
ರೈತರ ಹಿತ ಕಾಪಾಡುವುದು, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಲಭ್ಯತೆಯನ್ನು ಖಚಿತಪಡಿಸುವುದು ಹಾಗೂ ಬರದಿಂದ ಸಂಕಷ್ಟಕ್ಕೊಳಗಾದ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲು ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
ಪರಪೀಡಿತ ತಾಲೂಕುಗಳ ಪಟ್ಟಿ
- ಬೆಂಗಳೂರು ನಗರ: ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಯಲಹಂಕ
- ಬೆಂಗಳೂರು ಗ್ರಾಮಾಂತರ: ಹೊಸಕೋಟೆ, ನೆಲಮಂಗಲ, ದೇವನಹಳ್ಳಿ
- ಬೆಂಗಳೂರು ದಕ್ಷಿಣ: ಮಾಗಡಿ, ರಾಮನಗರ
- ಕೋಲಾರ: ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ, ಕೆ.ಜಿ.ಎಫ್
- ಚಿಕ್ಕಬಳ್ಳಾಪುರ: ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ, ಚೇಳೂರು, ಮಂಚೇನಹಳ್ಳಿ
- ತುಮಕೂರು: ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಶಿರಾ, ತುಮಕೂರು, ತುರುವೇಕೆರೆ
- ಚಿತ್ರದುರ್ಗ: ಚಳ್ಳಕೆರೆ, ಹಿರಿಯೂರು, ಹೊಸದುರ್ಗ
- ದಾವಣಗೆರೆ: ಚನ್ನಗಿರಿ, ಹೊನ್ನಾಳಿ, ನ್ಯಾಮತಿ, ದಾವಣಗೆರೆ
- ಚಾಮರಾಜನಗರ: ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಯಳಂದೂರು, ಹನೂರು
- ಮೈಸೂರು: ಎಚ್.ಡಿ.ಕೋಟೆ, ಹುಣಸೂರು, ಕೆ.ಆರ್.ನಗರ, ಮೈಸೂರು, ನಂಜನಗೂಡು, ಟಿ.ನರಸೀಪುರ, ಸರಗೂರು, ಸಾಲಿಗ್ರಾಮ
- ಮಂಡ್ಯ: ಕೆ.ಆರ್.ಪೇಟೆ, ಮಳವಳ್ಳಿ, ಮಂಡ್ಯ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರು, ಪಾಂಡವಪುರ
- ಬಳ್ಳಾರಿ: ಬಳ್ಳಾರಿ, ಸಂಡೂರು, ಕುರುಗೋಡು, ಕಂಪ್ಲಿ
- ಕೊಪ್ಪಳ: ಗಂಗಾವತಿ, ಕುಕನೂರು, ಕನಕಗಿರಿ
- ರಾಯಚೂರು: ದೇವದುರ್ಗ, ಮಾಸ್ಕಿ, ಅರಕೇರಾ, ಲಿಂಗಸೂಗೂರು, ರಾಯಚೂರು
- ಬೀದರ್: ಬೀದರ್, ಬಸವಕಲ್ಯಾಣ, ಹುಮ್ನಾಬಾದ್, ಚಿಟಗುಪ್ಪ
- ಬಾಗಲಕೋಟೆ: ಬಾಗಲಕೋಟೆ, ಬೀಳಗಿ, ಜಮಖಂಡಿ, ಗುಳೇದಗುಡ್ಡ, ಇಲಕಲ್
- ವಿಜಯಪುರ: ವಿಜಯಪುರ, ನಿಡಗುಂದಿ, ಕೊಲ್ಹಾರ
- ಗದಗ: ಗಜೇಂದ್ರಗಡ
- ಹಾಸನ: ಅರಕಲಗೂಡು, ಅರಸೀಕೆರೆ, ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ
- ಚಿಕ್ಕಮಗಳೂರು: ಅಜ್ಜಂಪುರ, ಕೊಪ್ಪ, ನರಸಿಂಹರಾಜಪುರ, ತರೀಕೆರೆ
- ಯಾದಗಿರಿ: ಶಹಾಪುರ
- ವಿಜಯನಗರ: ಹೊಸಪೇಟೆ, ಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ
- ಕೊಡಗು: ಸೋಮವಾರಪೇಟೆ
- ಉತ್ತರ ಕನ್ನಡ: ಮುಂಡಗೋಡು, ಯಲ್ಲಾಪುರ