Karnataka Assembly session 2026: ಬಿಜೆಪಿ ಸರ್ಕಾರದ ಅವಧಿಯಲ್ಲೂ ವಿತ್ತೀಯ ಕೊರತೆ ಇತ್ತು: ಸಿಎಂ ಟೀಕೆ
ವಿರೋಧ ಪಕ್ಷದ ವಿಜಯೇಂದ್ರ ಮುಂತಾದವರು ರೆವಿನ್ಯೂ ಸರಿಯಾಗಿ ಸಂಗ್ರಹವಾಗದ ಕಾರಣ ಪ್ರತಿ ವರ್ಷ ಬಜೆಟ್ಟನ್ನು ಪರಿಷ್ಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಇದು ಕೇಂದ್ರ ಸರ್ಕಾರದ ಅಪಕ್ವ ಆರ್ಥಿಕ ನೀತಿಗಳಿಂದ ಉಂಟಾಗುತ್ತಿರುವ ಸಮಸ್ಯೆಯಾಗಿದೆ. ನಮ್ಮ ಅಕ್ಕ ಪಕ್ಕದ ರಾಜ್ಯಗಳಿಗೆ ಹೋಲಿಸಿದರೂ ಸಹ ನಮ್ಮ ಸ್ವಂತ ರಾಜಸ್ವ ಸಂಗ್ರಹ ಉತ್ತಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ. -
ಬೆಂಗಳೂರು: ದಕ್ಷಿಣ ಭಾರತದ ನಮ್ಮ ಸುತ್ತ ಮುತ್ತಲ ಪ್ರಗತಿಶೀಲ ರಾಜ್ಯಗಳಿಗೆ ಹೋಲಿಕೆ ಮಾಡಿದರೂ ಸಹ ನಮ್ಮ ವಿತ್ತೀಯ ಕೊರತೆಯ (fiscal deficit) ಪ್ರಮಾಣ ನಿಗದಿತ ಮಟ್ಟದ ಒಳಗೇ ಇದೆ. 2025-26 ಪರಿಷ್ಕೃತ ಅಂದಾಜಿನಲ್ಲೂ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟು ಇರಲಿದೆ. ಮಹಾರಾಷ್ಟ್ರದಲ್ಲಿ ಶೇ.3.0 ರಷ್ಟು, ಆಂಧ್ರಪ್ರದೇಶ ಶೇ.4.5, ಕೇರಳ ಶೇ.3.8, ತಮಿಳುನಾಡು ಶೇ.3.5 ರಷ್ಟು ಇದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಕುರಿತು ಬುಧವಾರ ನಡೆದ ಚರ್ಚೆಯ ವೇಳೆ ಮಾತನಾಡಿ, ವಾಸ್ತವವಾಗಿ ರೆವೆನ್ಯೂ ಡಿಫಿಸಿಟ್ ಇರಬಾರದು. ಆದರೆ ಕೇಂದ್ರ ಸರ್ಕಾರ ಒಳಗೊಂಡಂತೆ ಮಹಾರಾಷ್ಟ್ರ ಹಾಗೂ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲೂ ರೆವೆನ್ಯೂ ಡಿಫಿಸಿಟ್ ಇದೆ. ಅದರಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳದ್ದೇ ಕಡಿಮೆ ಇದೆ ಎಂದು ತಿಳಿಸಿದರು.

ವಿರೋಧ ಪಕ್ಷದ ವಿಜಯೇಂದ್ರ ಮುಂತಾದವರು ರೆವಿನ್ಯೂ ಸರಿಯಾಗಿ ಸಂಗ್ರಹವಾಗದ ಕಾರಣ ಪ್ರತಿ ವರ್ಷ ಬಜೆಟ್ಟನ್ನು ಪರಿಷ್ಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆಯವ್ಯಯ ಅಂದಾಜಿಗೆ ಹೋಲಿಸಿದರೆ ಪಕ್ಕದ ರಾಜ್ಯಗಳ ಸ್ವಂತ ರಾಜಸ್ವ ಸಂಗ್ರಹಣೆಯು ವಾಸ್ತವ/ಪರಿಷ್ಕೃತ ಸಂಗ್ರಹಣೆಯಲ್ಲಿ ಕಡಿಮೆ ಆಗಿದೆ. ಕರ್ನಾಟಕ ರಾಜ್ಯದ್ದೊಂದೆ ಸಮಸ್ಯೆಯಲ್ಲ. ಕೇಂದ್ರ ಸರ್ಕಾರದ ಅಪಕ್ವ ಆರ್ಥಿಕ ನೀತಿಗಳಿಂದ ಉಂಟಾಗುತ್ತಿರುವ ಸಮಸ್ಯೆಯಾಗಿದೆ. ಆದರೆ ನಮ್ಮ ಅಕ್ಕ ಪಕ್ಕದ ರಾಜ್ಯಗಳಿಗೆ ಹೋಲಿಸಿದರೂ ಸಹ ನಮ್ಮ ಸ್ವಂತ ರಾಜಸ್ವ ಸಂಗ್ರಹ ಉತ್ತಮವಾಗಿದೆ.
Election in Kerala: 'ದೇವರ ನಾಡಿ’ನಲ್ಲೀಗ ರಂಗೇರಿರುವ ಚುನಾವಣಾ ಕಾವು

ಕೇಂದ್ರ ಸರ್ಕಾರದವರು ಕಳೆದ ವರ್ಷ ವರ್ಷದ ಮಧ್ಯ ಭಾಗದಲ್ಲಿ ಇದ್ದಕ್ಕಿದ್ದಂತೆ ಜಿಎಸ್‌ಟಿ ದರಗಳನ್ನು ತರ್ಕಬದ್ಧಗೊಳಿಸುತ್ತೇವೆಂದು ಹೇಳಿ ಪರಿಷ್ಕರಣೆ ಮಾಡಿದ ಕಾರಣಕ್ಕೆ ರಾಜ್ಯದ ಆರ್ಥಿಕತೆಯ ಮೇಲೆ ಹೊಡೆತ ಬಿತ್ತು. 2025-26ನೇ ಸಾಲಿನಲ್ಲಿ ಜಿ.ಎಸ್.ಟಿ ತರ್ಕಬದ್ಧಗೊಳಿಸುವಿಕೆಗೂ ಮುನ್ನ, ರಾಜ್ಯದ ಸರಾಸರಿ ಮಾಸಿಕ ಜಿ.ಎಸ್.ಟಿ ರಾಜಸ್ವ ಸಂಗ್ರಹಣೆಯು ಶೇ.10ರಷ್ಟು ಬೆಳವಣಿಗೆಯನ್ನು ದಾಖಲಿಸಿತ್ತು. ಆದರೆ ದರ ತರ್ಕಬದ್ಧಗೊಳಿಸುವಿಕೆಯ ನಂತರ, ಜಿ.ಎಸ್.ಟಿ ಸಂಗ್ರಹಣೆಯ ಮಾಸಿಕ ಬೆಳವಣಿಗೆಯು ಶೇ.4ಕ್ಕೆ ಕಡಿಮೆಯಾಗಿದೆ. 2025-26ನೇ ಸಾಲಿನಲ್ಲಿ ಸುಮಾರು 10,000 ಕೋಟಿ ಕೊರತೆಯಾದರೆ 26-27ರಲ್ಲಿ 15,000 ಕೋಟಿ ರೂ.ಗಳಷ್ಟು ಕೊರತೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಕಾರಣದಿಂದಾಗಿ 2025-26ರ ಪರಿಷ್ಕೃತ ಅಂದಾಜಿನಲ್ಲಿ ಅಂದಾಜಿನಲ್ಲಿ ರಾಜಸ್ವ ಕೊರತೆಯಷ್ಟು 22,957 ಕೋಟಿ ರೂಗಳಷ್ಟು ರಾಜಸ್ವ ಕೊರತೆಯಾಗಿರುತ್ತದೆ.

ಹೋಗಲಿ, ಜಿಎಸ್‌ಟಿ ದರ ಪರಿಷ್ಕರಣೆಯಿಂದ ಜನರಿಗೆ ಹೆಚ್ಚಿನ ಲಾಭ ದೊರೆಯಿತೆ? ಎಂದು ನೋಡಿದರೆ ಅದೂ ಇಲ್ಲ. ಕಾರು, ಬೈಕುಗಳ ಬೆಲೆ ತುಸು ಕಡಿಮೆಯಾಗಿದ್ದು ಬಿಟ್ಟರೆ ಬೇರೇನೂ ಆಗಲಿಲ್ಲ. ಇತ್ತ ಜನರಿಗೂ ಇಲ್ಲ. ಜನ ಕಲ್ಯಾಣಕ್ಕೂ ಇಲ್ಲ. ಲಾಭಾಂಶವನ್ನು ಬಹುರಾಷ್ಟ್ರೀಯ ಕಂಪನಿಗಳು, ಕಾರ್ಪೊರೇಟ್ ಕುಳಗಳು ಹೊತ್ತುಕೊಂಡು ಹೋಗುತ್ತಿವೆ. ಇಷ್ಟರ ನಡುವೆಯೂ ಕಳೆದ ವರ್ಷದ ಆಯವ್ಯಯಕ್ಕಿಂತ ಸುಮಾರು 22,573 ಕೋಟಿ ರೂ. ಹೆಚ್ಚಿನ ರೆವಿನ್ಯೂ ಸಂಗ್ರಹವಾಗಬಹುದೆಂದು ಅಂದಾಜಿಸಿದ್ದೇವೆ. 2.92 ಲಕ್ಷ ಕೋಟಿ ರೂ.ಗಳಷ್ಟಿದ್ದ ಕಳೆದ ವರ್ಷದ ಅಂದಾಜು ಈ ವರ್ಷ 3.15 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಲಿದೆಯೆಂದು ಅಂದಾಜು ಮಾಡಿದ್ದೇವೆ.

ರಾಜ್ಯದ ತೆರಿಗೆ ಹಂಚಿಕೆಯ ಪಾಲು 14ನೇ ಹಣಕಾಸು ಆಯೋಗದ ಶಿಫಾರಸ್ಸು ಶೇ.4.713 ರಿಂದ 15ನೇ ಹಣಕಾಸು ಆಯೋಗದ ಶಿಫಾರಸ್ಸು ಶೇ.3.647ಕ್ಕೆ ಇಳಿಕೆಯಾಗಿದ್ದು, ಹಿಂದಿನ ಆಯೋಗದ ಶಿಫಾರಸ್ಸಿಗೆ ಹೋಲಿಸಿದರೆ ಶೇ.23ರಷ್ಟು ಕಡಿಮೆಯಾಗಿದೆ. ರಾಜ್ಯಗಳಿಗೆ ನ್ಯಾಯಯುತ ತೆರಿಗೆ ಹಂಚಿಕೆ ಮಾಡಲು ಸಮಾನತೆ ಮತ್ತು ಬೆಳವಣಿಗೆ ಎರಡಕ್ಕೂ ಪ್ರಾಮುಖ್ಯತೆ ನೀಡುವ ಸೂತ್ರವನ್ನು ಶಿಫಾರಸ್ಸು ಮಾಡಬೇಕು ಎಂದು ರಾಜ್ಯವು 16ನೇ ಹಣಕಾಸು ಆಯೋಗಕ್ಕೆ ಮನವಿ ಮಾಡಿತ್ತು. 16ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ಶೇ.4.131 ರಷ್ಟು ತೆರಿಗೆ ಪಾಲನ್ನು ಶಿಫಾರಸ್ಸು ಮಾಡಿದೆ. ಇದು 15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ ಪಾಲಿಗಿಂತ ಶೇ.13 ರಷ್ಟು ಹೆಚ್ಚಳವಾಗಿದ್ದು, ನಮ್ಮ ಬೇಡಿಕೆಯನ್ನು ಭಾಗಶಃ ಪರಿಗಣಿಸಿದಂತಾಗಿದೆ. ಆದರೆ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಪಾಲು ಸಿಗಲಿಲ್ಲ.

ಬಿಜೆಪಿ ಸರ್ಕಾರದ ಅವಧಿಯಲ್ಲಿ Surplus budget ಮಾಡಿದ್ದೇವೆ. ನಿಮ್ಮದು Deficit budget ರಾಜಸ್ವ ಕೊರತೆಯ ಬಜೆಟ್ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ನಾನು 2000ನೇ ಇಸವಿಯಿಂದಲೂ ರಾಜ್ಯದ ಎಲ್ಲ ಬಜೆಟ್‌ಗಳನ್ನು ನೋಡಿದ್ದೇನೆ. ಎಲ್ಲ ಬಜೆಟ್‌ಗಳಲ್ಲೂ ಫಿಸ್ಕಲ್ ಡಿಫಿಸಿಟ್ ಇದ್ದೇ ಇತ್ತು. ನಿಮ್ಮ ನಾಲ್ಕು ವರ್ಷಗಳ ಅವಧಿಯಲ್ಲೂ ಫಿಸ್ಕಲ್ ಡಿಫಿಸಿಟ್ ಇತ್ತು. ಜಿ.ಎಸ್.ಟಿ. ಪರಿಹಾರ ಒಟ್ಟಿಗೆ ಬಿಡುಗಡೆ ಕಾರಣ ಸರ್ಪ್ಲಸ್ ಆಯಿತು. ಈ ಯಾವ ವಿಚಾರಗಳು ಗೊತ್ತಿಲ್ಲದೆ ವಿರೋಧ ಪಕ್ಷದ ಸದಸ್ಯರು ಮಾತನಾಡುತ್ತಾರೆ.
ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದಲ್ಲಿ ಸೂಚಿಸಿರುವಂತೆ ರಾಜ್ಯವು ರಾಜಸ್ವ ಹೆಚ್ಚುವರಿಯನ್ನು ಕಾಯ್ದುಕೊಂಡು ಬಂದಿರುತ್ತದೆ. ಆದರೆ, ಜಿ.ಎಸ್.ಟಿ. ಜಾರಿಯಿಂದ ರಾಜ್ಯಕ್ಕೆ ಆದ ರಾಜಸ್ವ ನಷ್ಟವನ್ನು ಸಂಪೂರ್ಣವಾಗಿ ಸರಿದೂಗಿಸಲು ಕೇಂದ್ರ ಸರ್ಕಾರ ವಿಫಲವಾದ ಕಾರಣ ಮತ್ತು ಕೇಂದ್ರ ಸರ್ಕಾರ ವಿಧಿಸುವ ಸೆಸ್‌ಗಳು ಮತ್ತು ಸರ್‌ಚಾರ್ಜ್ಗಳನ್ನು ರಾಜ್ಯಗಳಿಗೆ ಹಂಚಿಕೆಯಾಗುವ ತೆರಿಗೆ ಪಾಲಿನಲ್ಲಿ ಪರಿಗಣಿಸದಿರುವುದರಿಂದ ಹಾಗು 15ನೇ ಹಣಕಾಸಿನಲ್ಲಿ ರಾಜ್ಯದ ತೆರಿಗೆ ಪಾಲು ಕಡಿಮೆಯಾದ ಕಾರಣ ರಾಜ್ಯವು ವಿತ್ತೀಯ ಸವಾಲುಗಳನ್ನು ಎದುರಿಸುವಂತಾಯಿತು. ಕೇಂದ್ರ ಸರ್ಕಾರ 2023-24ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳಿಸಿದ್ದರಿಂದ, ಕೇಂದ್ರ ಸರ್ಕಾರ ಅಂದಾಜಿಸಿದ್ದ ಜಿ.ಎಸ್.ಟಿ. ಸಂಗ್ರಹಣೆಗೆ (Protected Revenue) ಹೋಲಿಸಿದರೆ, ರಾಜ್ಯದ ಜಿ.ಎಸ್.ಟಿ ಸಂಗ್ರಹಣೆಯು 2023-24ರಲ್ಲಿ 30,871 ಕೋಟಿ ರೂ.ಗಳು ಮತ್ತು 2024-25ರಲ್ಲಿ 40,368 ಕೋಟಿ ರೂ.ಗಳು ಕೊರತೆಯಾಗಿರುತ್ತದೆ. 15ನೇ ಹಣಕಾಸಿನಲ್ಲಿ ರಾಜ್ಯದ ತೆರಿಗೆ ಪಾಲು ಕಡಿಮೆಯಾದ ಕಾರಣ 2023-24ರಿಂದ 2025-26ರವರೆಗೆ 39,500 ಕೋಟಿ ರೂ.ಗಳು ನಷ್ಟವಾಗಿರುತ್ತದೆ. ಇದರ ಪರಿಣಾಮವಾಗಿ, 2023-24ರಿಂದ ರಾಜಸ್ವ ಕೊರತೆಯನ್ನು ಎದುರಿಸುವಂತಾಯಿತು.
ಬಿಜೆಪಿ ಸರ್ಕಾರದ ಅವಧಿಯಲ್ಲಿ (2019-2022) ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರ ನೀಡಿರುತ್ತದೆ. ಈ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ಒಟ್ಟು ಪರಿಹಾರ 57,351 ಕೋಟಿ ರೂ.ಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ, 2023ರಿಂದ ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರ ನೀಡುವುದನ್ನು ನಿಲ್ಲಿಸಿರುತ್ತದೆ. ಆದಕಾರಣ ರಾಜ್ಯದ ರಾಜಸ್ವ ಸಂಗ್ರಹಣೆ ಕಡಿಮೆಯಾಗಿ ರಾಜಸ್ವ ಕೊರತೆಯನ್ನು ಎದುರಿಸಬೇಕಾಯಿತು.
2017ರಲ್ಲಿ ಜಿಎಸ್‌ಟಿ ಜಾರಿಯಾದಾಗಿನಿಂದ, 15ನೇ ಹಣಕಾಸು ಆಯೋಗ ಮಾಡಿದ ಅನ್ಯಾಯದಿಂದ, 15ನೇ ಹಣಕಾಸು ಆಯೋಗ ಮಾಡಿದ ಶಿಫಾರಸ್ಸುಗಳನ್ನು ಜಾರಿ ಮಾಡದೆ ಕೇಂದ್ರವು ಮಾಡಿದ ದ್ರೋಹದಿಂದ, ಜಿಎಸ್‌ಟಿ ಪರಿಹಾರ ಸಿಗದೆ ನೀಡದ ಕಾರಣ ಸುಮಾರು 2,00,000 ಕೋಟಿ ರೂ.ಗಳಿಗೂ ಹೆಚ್ಚಿನ ನಷ್ಟ ರಾಜ್ಯಕ್ಕೆ ಉಂಟಾಗಿದೆ. ಪರಿಸ್ಥಿತಿ ಹೀಗಾದರೆ ರಾಜ್ಯಗಳ ಆರ್ಥಿಕತೆ ಹೇಗೆ ಉಳಿಯುತ್ತದೆ? ಇಷ್ಟೆಲ್ಲದರ ನಡುವೆಯೂ ನಮ್ಮ ರಾಜ್ಯವನ್ನು ನಾವು ಮುನ್ನಡೆಸುತ್ತಿದ್ದೇವೆ. ಗ್ಯಾರಂಟಿಯಂಥ ಜನ ಕಲ್ಯಾಣ ಯೋಜನೆಗಳಿಗಾಗಿ ನಯಾಪೈಸೆ ಖರ್ಚು ಮಾಡದ ಗುಜರಾತ್ ರಾಜ್ಯವು ಈ ಬಾರಿ 1,00,000 ಕೋಟಿ ರೂಗಳಷ್ಟು ಸಾಲ ಮಾಡುತ್ತಿದೆ.
ಸಸ್ಪೆಂಡ್ ಮಾಡ್ತೀರಿ ಅನ್ಕೊಂಡೆ: ಇ-ಖಾತಾ ದಂಧೆ ವಿಚಾರಕ್ಕೆ ಡಿಕೆಶಿ-ಸುನೀಲ್ ಕುಮಾರ್ ನಡುವೆ ವಾಕ್ಸಮರ!
ಇಲ್ಲಿ ತಮಗೆ ಅರ್ಥವಾಗಿರಬಹುದು, ರಾಜಸ್ವ ಕೊರತೆಯು 3-4 ಕಾರಣಗಳಿಂದ ರಾಜಸ್ವ ಕೊರತೆಯ ಸಮಸ್ಯೆ ಉಂಟಾಗಿರುತ್ತದೆ. 15 ನೇ ಹಣಕಾಸು ಆಯೋಗವು ಕಡಿಮೆ ಹಂಚಿಕೆ ಮಾಡಿತು, ಆಯೋಗವು ಶಿಫಾರಸು ಮಾಡಿದ ಅನುದಾನಗಳನ್ನು ಕೇಂದ್ರ ಸರ್ಕಾರ ಕೊಡದೆ ವಂಚಿಸಿತು. ಜಿಎಸ್‌ಟಿ ಪರಿಹಾರ ನಿಲ್ಲಿಸಲಾಯಿತು, ಜಿಎಸ್‌ಟಿ ದರಗಳ ಪರಿಷ್ಕರಣೆ, ಜೆಜೆಎಂ ಮುಂತಾದ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಕೊಡದೆ ಅನ್ಯಾಯ ಮಾಡಿದ ಕಾರಣ ರಾಜಸ್ವ ಕೊರತೆಯ ಸಮಸ್ಯೆ ಉದ್ಭವಿಸಿತು.