ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

PM Surya Ghar Yojana: ಪಿಎಂ ಸೂರ್ಯಘರ್ ಯೋಜನೆಯಡಿ 16,000 ಕೋಟಿ ಸಬ್ಸಿಡಿ ಸಕ್ರಿಯ: ಪ್ರಲ್ಹಾದ್‌ ಜೋಶಿ

PM Surya Ghar Yojana: ಪಿಎಂ ಸೂರ್ಯಘರ್ ಯೋಜನೆಯಡಿ ಈವರೆಗೆ ₹ 16,000 ಕೋಟಿ ಸಬ್ಸಿಡಿ ಸಕ್ರಿಯಗೊಳಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಪಿಎಂ ಸೂರ್ಯಘರ್ ಯೋಜನೆಯಡಿ 16,000 ಕೋಟಿ ಸಬ್ಸಿಡಿ: ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (ಸಂಗ್ರಹ ಚಿತ್ರ) -

Profile
Siddalinga Swamy Feb 10, 2026 10:58 PM

ನವದೆಹಲಿ, ಫೆ.10: ಪಿಎಂ ಸೂರ್ಯಘರ್ ಯೋಜನೆಯಡಿ (PM Surya Ghar Yojana) ಈವರೆಗೆ ₹ 16,000 ಕೋಟಿ ಸಬ್ಸಿಡಿ ಸಕ್ರಿಯಗೊಳಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ. ಪಿಎಂ ಸೂರ್ಯಘರ್ ಮಫ್ತ್ ಬಿಜ್ಲಿ ಯೋಜನೆಯಲ್ಲಿ ಭಾರತ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಫೆಬ್ರವರಿ 2026ರವರೆಗೆ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಸೌರ ವಿದ್ಯುತ್ ಸಬಲೀಕರಣ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

PM ಸೂರ್ಯಘರ್ ಯೋಜನೆಯಡಿ ಮೇಲ್ಛಾವಣಿ ಮೂಲಕ ಸೌರಶಕ್ತಿ ಶುದ್ಧ ಇಂಧನ ಹಾಗೂ ಕಡಿಮೆ ಬಿಲ್‌ ಮತ್ತು ಬಲವಾದ ಇಂಧನ ಸ್ವಾವಲಂಬನೆ ಸಾಧಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸೌರ ಯೋಜನೆಗಳ ಮೂಲಕ ಭಾರತ ಇಂದು ಶುದ್ಧ ಇಂಧನ ದೇಶವಾಗಿ ಪರಿವರ್ತನೆಗೊಳ್ಳುತ್ತಿದೆ. ಪಿಎಂ ಸೂರ್ಯಘರ್ ಮತ್ತು ಪಿಎಂ ಕುಸುಮ್ ಯೋಜನೆ ಜನಸಾಮಾನ್ಯರು, ರೈತರನ್ನು ಸಬಲೀಕರಣಗೊಳಿಸುತ್ತಿದೆ ಎಂದು ಹೇಳಿದ್ದಾರೆ.‌

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ; ಪಿಎಲ್ಐ 1.2 ಆರಂಭಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಇಂಗಾಲದ ಹೊರಸೂಸುವಿಕೆ ಕಡಿಮೆ, ಇಂಧನ ದಕ್ಷತೆ ಸುಧಾರಣೆ ಮತ್ತು ವಿಕೇಂದ್ರೀಕೃತ ಸೌರ ವಿದ್ಯುತ್ ಉತ್ಪಾದನೆ ಮೂಲಕ ವಿದ್ಯುತ್ ವೆಚ್ಚ ಕಡಿಮೆ ಮಾಡುವುದರ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.