ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದೆಹಲಿ ವಿವಿ ಚುನಾವಣೆ ಗೆದ್ದ ABVP ಅಭ್ಯರ್ಥಿಗಳಿಗೆ ಸಚಿವ ಪ್ರಲ್ಹಾದ್‌ ಜೋಶಿ ಅಭಿನಂದನೆ

Pralhad Joshi: ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘ ಚುನಾವಣೆ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ, 2026ರ ಡಿಯುಎಸ್‌ಯು ಚುನಾವಣೆಯಲ್ಲಿ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳನ್ನು ಎಬಿವಿಪಿ ಗೆದ್ದುಕೊಂಡಿದ್ದು, ಬೆಂಬಲಿಸಿದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ದೆಹಲಿ ವಿವಿ ಚುನಾವಣೆ ಗೆದ್ದ ABVP ಅಭ್ಯರ್ಥಿಗಳಿಗೆ ಸಚಿವ ಜೋಶಿ ಅಭಿನಂದನೆ

ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ (ಸಂಗ್ರಹ ಚಿತ್ರ). -

Profile
Siddalinga Swamy Sep 19, 2026 9:23 PM

ನವದೆಹಲಿ, ಸೆ.19: ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಎಬಿವಿಪಿ ಅಭ್ಯರ್ಥಿಗಳಿಗೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅಭಿನಂದನೆ ಸಲ್ಲಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘ (DUSU) ಚುನಾವಣೆ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಈ ಫಲಿತಾಂಶ ದೆಹಲಿ ವಿವಿ ವಿದ್ಯಾರ್ಥಿಗಳ ಬೆಂಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

2026ರ DUSU ಚುನಾವಣೆಯಲ್ಲಿ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳನ್ನು ABVP ಗೆದ್ದುಕೊಂಡಿದ್ದು, ಬೆಂಬಲಿಸಿದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಸಂಘಟನೆಯಾಗಿರುವ ABVP ವಿದ್ಯಾರ್ಥಿಗಳ ಕಲ್ಯಾಣ, ಸೇವೆ ಮತ್ತು ರಾಷ್ಟ್ರ ನಿರ್ಮಾಣದಂತಹ ಕಾರ್ಯಗಳಿಗೆ ಸದಾ ಬದ್ಧವಾಗಿದೆ ಎಂದು ಜೋಶಿ ಪ್ರತಿಪಾದಿಸಿದ್ದಾರೆ.‌

ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್; ತಳಮಟ್ಟದಿಂದಲೇ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಸಚಿವ ಪ್ರಲ್ಹಾದ್‌ ಜೋಶಿ ಮಹತ್ತರ ಹೆಜ್ಜೆ

ದೆಹಲಿ ವಿವಿ ವಿದ್ಯಾರ್ಥಿ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪ್ರತಿನಿಧಿಗಳು ಅಧಿಕಾರಾವಧಿಯಲ್ಲಿ ಯಶಸ್ಸು ಸಾಧಿಸಲಿ ಮತ್ತು ವಿದ್ಯಾರ್ಥಿ ಸಮುದಾಯದ ಸೇವೆಗೈಯುವಲ್ಲಿ ಸದಾ ಮುಂಚೂಣಿಯಲ್ಲಿ ಇರಲೆಂದು ಸಚಿವರು ಶುಭ ಹಾರೈಸಿದ್ದಾರೆ.