ಇರಾನ್ ಮೇಲೆ ಅಮೆರಿಕದಿಂದ ಅನಗತ್ಯ ದಾಳಿ; ಖಮೇನಿ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದ ಸಿಎಂ
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಮತ್ತು ಸಿಎಂ ಸಿದ್ದರಾಮಯ್ಯ. -
ಶಿವಮೊಗ್ಗ: ಅಮೆರಿಕವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿರುವ ಅವರು, ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ. ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ಸಹ ವಾಪಸ್ಸು ಕರೆತರಲಾಗುವುದು. ದುಬೈನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ.
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಈ ವೇಳೆ ತಾವು ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿರುವುದಾಗಿ ಸಿಎಂ ತಿಳಿಸಿದ್ದಾರೆ.
ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಶೋಕಾಚರಣೆ; ಕಣ್ಣೀರಿಟ್ಟ ಗ್ರಾಮಸ್ಥರು
ಗೌರಿಬಿದನೂರು: ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲೀಪುರ (Alipur Protest) ಗ್ರಾಮದ ಶಿಯಾ ಮುಸ್ಲಿಮರು ಕಂಬನಿ ಮಿಡಿದಿದ್ದಾರೆ. ತಮ್ಮ ಧಾರ್ಮಿಕ ನಾಯಕನ ಹತ್ಯೆ ಖಂಡಿಸಿ ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.
Is Khamenei more important than Kannadiga's real issue ?? How can they announce bandh ??
— Karnataka Portfolio (@karnatakaportf) March 1, 2026
How is Ayatollah Ali Khamenei so important to Karnataka that Alipur village in Gauribidanur Taluk, Chikkaballapur district, observed a three-day mourning, displayed black flags, closed… pic.twitter.com/6O1ebJETke
ಇನ್ನು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯನ್ನು ಖಂಡಿಸಿ ಗ್ರಾಮಸ್ಥರು ಭಾನುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಕಪ್ಪು ಬಟ್ಟೆ ಧರಿಸಿ, ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ.
Iran Israel War: ಇರಾನ್ ಸುಪ್ರೀಂ ನಾಯಕ ಖಮೇನಿಯನ್ನು ಇಸ್ರೇಲ್-ಅಮೆರಿಕ ಸೇನೆ ಹೊಡೆದುರುಳಿಸಿದ್ದು ಹೇಗೆ?
ಅಮೆರಿಕಾ ಹಾಗೂ ಇಸ್ರೇಲ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಜನ, ಖಮೇನಿ ಫೋಟೋ ಇಟ್ಟುಕೊಂಡು ಕಣ್ಣೀರು ಹಾಕಿದ್ದಾರೆ. ಶಿಯಾ ಸಮುದಾಯ ಅಷ್ಟೇ ಅಲ್ಲದೆ ಇಡೀ ಇರಾನ್‌ನ ಟಾರ್ಗೆಟ್ ಮಾಡಿ ದಾಳಿ ನಡೆಸಲಾಗಿದೆ. ಇದಕ್ಕೆ ಅರಬ್ ರಾಷ್ಟ್ರಗಳ ಕುಮ್ಮಕ್ಕು ಇದೆ ಎಂದು ಕಿಡಿಕಾರಿದ್ದಾರೆ.