ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

V Somanna: ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿಗೆ ಯಾವುದೇ ಕಿಮ್ಮತ್ತಿಲ್ಲ: ಸಚಿವ ವಿ.ಸೋಮಣ್ಣ

V Somanna: ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿಗೆ ಯಾವುದೇ ಕಿಮ್ಮತ್ತಿಲ್ಲ. ಈ ಜಾತಿ ಗಣತಿ ವರದಿ ತನ್ನಿಂದ ತಾನಾಗಿಯೇ ನಿಷ್ಕ್ರಿಯವಾಗುತ್ತದೆ. ದೇಶದ ಜಾತಿ ಗಣತಿಯನ್ನು ಕೇಂದ್ರ ಸರ್ಕಾರವೇ ಮಾಡಲಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿಗೆ ಯಾವುದೇ ಕಿಮ್ಮತ್ತಿಲ್ಲ: ವಿ.ಸೋಮಣ್ಣ

Profile Siddalinga Swamy May 1, 2025 8:29 PM

ತುಮಕೂರು: ದೇಶದಲ್ಲಿ ಜಾತಿ ಗಣತಿ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಹಾಗಾಗಿ ರಾಜ್ಯ ಸರ್ಕಾರದ ಜಾತಿ ಗಣತಿಗೆ ಬೆಲೆ ಇಲ್ಲ. ಈ ಜಾತಿ ಗಣತಿ ವರದಿ ತನ್ನಿಂದ ತಾನಾಗಿಯೇ ನಿಷ್ಕ್ರಿಯವಾಗುತ್ತದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ‌ (V Somanna) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿಗೆ ಯಾವುದೇ ಕಿಮ್ಮತ್ತಿಲ್ಲ. ಹಾಗಾಗಿ ಈ ಸರ್ಕಾರದ ಜಾತಿ ಗಣತಿ ಹೊರಟು ಹೋಗಿದೆ. ದೇಶದ ಜಾತಿ ಗಣತಿಯನ್ನು ಕೇಂದ್ರ ಸರ್ಕಾರವೇ ಮಾಡಲಿದೆ ಎಂದು ತಿಳಿಸಿದರು.

ಒಂದು ದೇಶ, ಒಂದು ಚುನಾವಣೆ, ಮಹಿಳಾ ಮೀಸಲಾತಿ ಬಿಲ್, ಜಾತಿ ಗಣತಿ ಇವೆಲ್ಲಾ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಚಿಂತನೆ. ರಾಜ್ಯ ಸರ್ಕಾರ ವಿನಾ ಕಾರಣ ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದು ಉತ್ತಮ ಎಂದರು.

ನಮ್ಮದು ಜಾತ್ಯಾತೀತ ರಾಷ್ಟ್ರ. ಸುಮಾರು ವರ್ಷಗಳಿಂದ ಜಾತಿ ಗಣತಿ ಮಾಡಬೇಕು ಎಂಬ ಕೂಗಿತ್ತು. ಹಾಗಾಗಿ ಈಗ ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲು ಕ್ರಮ ಕೈಗೊಂಡಿದೆ. ಆದರೆ ಕಾಂಗ್ರೆಸ್‌ನವರು ಕೇಂದ್ರದಲ್ಲಿ ಇಷ್ಟು ವರ್ಷ ಅಧಿಕಾರದಲ್ಲಿದ್ದರಲ್ಲಾ ಅವರು ಏಕೆ ಜಾತಿ ಗಣತಿ ಮಾಡಲಿಲ್ಲ ಎಂದು ಅವರು ಪ್ರಶ್ನಿಸಿದರು. ದೇಶದ ಜ್ವಲಂತ ಸಮಸ್ಯೆಗಳಿಗೆ ಪ್ರಧಾನಿ ಮೋದಿಯವರು ಪರಿಹಾರ ಕಂಡುಕೊಂಡಿದ್ದಾರೆ. ಈವರೆಗೆ 25 ಕೋಟಿ ಕುಟುಂಬಗಳನ್ನು ಮೇಲ್ಪಂಕ್ತಿಗೆ ತಂದಿದ್ದಾರೆ ಎಂದರು.

ಈ ಸುದ್ದಿಯನ್ನೂ ಓದಿ | BY Vijayendra: ಜಾತಿ ಗಣತಿ; ಕೇಂದ್ರದ ನಿರ್ಧಾರದಿಂದ ಕಾಂಗ್ರೆಸ್ಸಿಗರಿಗೂ ಆಶ್ಚರ್ಯ ಎಂದ ವಿಜಯೇಂದ್ರ

ಪ್ರಧಾನಿ ನರೇಂದ್ರ ಮೋದಿಯವರು ಕೇವಲ 10 ವರ್ಷದಲ್ಲಿ ದೇಶವನ್ನು 50 ವರ್ಷ ಮುಂದಕ್ಕೆ ಕೊಂಡೊಯ್ದಿದ್ದಾರೆ. 7 ದಶಕಗಳಿಗೂ ಹೆಚ್ಚು ಕಾಲ ದೇಶವನ್ನಾಳಿದ ಕಾಂಗ್ರೆಸ್‌ನವರು ಏನು ಮಾಡಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಪ್ರಶ್ನಿಸಿದರು.