ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸಿರಿವಂತರು ಗ್ಯಾರಂಟಿ ಯೋಜನೆ ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ? ಡಿ.ಕೆ. ಶಿವಕುಮಾರ್ ಪ್ರಶ್ನೆ

DK Shivakumar: ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಯಾವುದೇ ರೀತಿಯಲ್ಲೂ ಸಹಾಯ ಮಾಡುತ್ತಿಲ್ಲ. ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿ ನಿಭಾಯಿಸುತ್ತಿದ್ದೇವೆ. ಸರ್ಕಾರವೂ ಅತ್ಯುತ್ತಮವಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿದೆ. 21 ಕೋಟಿ ರುಪಾಯಿ ಹಣ ಮೃತಪಟ್ಟಿರುವ ಮಹಿಳೆಯರ ಖಾತೆಗೆ ಹೋಗಿದೆ. ಇದರ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

21 ಕೋಟಿ ರುಪಾಯಿ ಗ್ಯಾರಂಟಿ ಹಣ ಮೃತಪಟ್ಟವರ ಖಾತೆಗೆ ಹೋಗಿದೆ: ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy Feb 26, 2026 11:02 PM

ಬೆಂಗಳೂರು, ಫೆ. 26: ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ? ಸರ್ಕಾರಿ ನೌಕರರು, ದೊಡ್ಡ, ದೊಡ್ಡ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರು ಹೀಗೆ ಬಹಳ ಜನ ನಮಗೆ ಗ್ಯಾರಂಟಿ ಯೋಜನೆಗಳು ಬೇಡ ಎಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಅವರು ಉತ್ತರಿಸಿದರು.

ಸಿರಿವಂತರು ಗ್ಯಾರಂಟಿ ಯೋಜನೆಗಳ ಫಲಾನುಭವದಿಂದ ಹೊರಬರಲಿ ಎಂದು ಒಂದಷ್ಟು ಸಚಿವರು ಹೇಳುತ್ತಿರುವ ಬಗ್ಗೆ ಕೇಳಿದಾಗ, ಒಂದಷ್ಟು ಸಿರಿವಂತರು ನಮಗೆ ಅವಶ್ಯಕತೆ ಇಲ್ಲ ಎಂದಿದ್ದಾರೆ. 200 ಯೂನಿಟ್ ಉಚಿತ ವಿದ್ಯುತ್ ಬಗ್ಗೆಯೂ ಹೇಳಿದ್ದಾರೆ. ಅದಕ್ಕೆ ನಾವು ಆ ಬಗ್ಗೆ ವಿಮರ್ಶೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಮಾಧ್ಯಮಗಳು ಯಾವುದನ್ನೂ ಸಹ ತಿರುಚುವುದು ಬೇಡ. ಯಾವ ಕಾರಣಕ್ಕೂ ಯಾವ ಗ್ಯಾರಂಟಿಗಳೂ ನಿಲ್ಲುವುದಿಲ್ಲ. ಎಷ್ಟೇ ಕಷ್ಟ ಇದ್ದರೂ ಸಹ ಗ್ಯಾರಂಟಿಗಳನ್ನು ಕೊಡುತ್ತಾ ಇದ್ದೇವೆ ಎಂದು ಹೇಳಿದ್ದೇನೆ. ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎನ್ನುವ ಸುಳ್ಳಿನ ಬಗ್ಗೆಯೂ ಸ್ಪಷ್ಟನೆ ನೀಡಿದ್ದೇನೆ. ಈ ಬಜೆಟ್‌ನಲ್ಲಿ ಒಳ್ಳೊಳ್ಳೆ ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರ ಘೋಷಣೆ ಮಾಡುತ್ತದೆ ಎಂದು ಹೇಳಿದರು.‌

ಗ್ಯಾರಂಟಿ ಯೋಜನೆ ನಿಲ್ಲುತ್ತಾ? ಮಹತ್ವದ ಅಪ್‌ಡೇಟ್‌ ಕೊಟ್ರು ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಯಾವುದೇ ರೀತಿಯಲ್ಲೂ ಸಹಾಯ ಮಾಡುತ್ತಿಲ್ಲ. ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿ ನಿಭಾಯಿಸುತ್ತಿದ್ದೇವೆ. ಸರ್ಕಾರವೂ ಸಹ ಅತ್ಯುತ್ತಮವಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿದೆ. 21 ಕೋಟಿಯಷ್ಟು ಹಣ ಮೃತಪಟ್ಟಿರುವ ಮಹಿಳೆಯರ ಖಾತೆಗೆ ಹೋಗಿದೆ. ಇದರ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.