ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಂಡರ್‌ ಲಾದಲ್ಲಿ ಮಜಾ ಮಾಡುತ್ತಿರುವ ಕಾಂಗ್ರೆಸ್ ಶಾಸಕರೇ ಒಮ್ಮೆ ಬನ್ನಿಗಿರಿ ನೋಡಲು ಬನ್ನಿ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: 'ಇಂಟಿಗ್ರೇಟೆಡ್ ಟೌನ್‌ಶಿಪ್' ಹೆಸರಿನಲ್ಲಿ ಬಡವರ ಭೂಮಿಯನ್ನು ರಿಯಲ್ ಎಸ್ಟೇಟ್ ದಂಧೆಗೆ ಒಪ್ಪಿಸಿ, 'ಪ್ರೀಮಿಯಂ' ಹೆಸರಿನಲ್ಲಿ ಬರೋಬ್ಬರಿ ₹33,562 ಕೋಟಿ ಆದಾಯ ಲೂಟಿ ಮಾಡಲು ನಡೆಸುತ್ತಿರುವ ಸಂಚುʼ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

ರೈತರನ್ನು ಸಿಎಂ ಡಿಕೆಶಿ ಸಂಪೂರ್ಣವಾಗಿ ಕಡೆಗಣಿಸಿದ್ದಾರೆ: ನಿಖಿಲ್

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (ಸಂಗ್ರಹ ಚಿತ್ರ) -

Profile
Siddalinga Swamy Jun 17, 2026 8:39 PM

ಬೆಂಗಳೂರು, ಜೂ.17: ವಂಡರ್‌ ಲಾದಲ್ಲಿ ಮಜಾ ಮಾಡುತ್ತಿರುವ ಕಾಂಗ್ರೆಸ್ ಶಾಸಕರೇ, ನಿಮ್ಮ ಐಷಾರಾಮಿ ಪ್ರಪಂಚದಿಂದ ಹೊರಬಂದು ಪಕ್ಕದಲ್ಲೇ ಇರುವ ಬನ್ನಿಗಿರಿ ವ್ಯೂ ಪಾಯಿಂಟ್‌ಗೆ ಒಮ್ಮೆ ಭೇಟಿ ಕೊಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದ್ದಾರೆ.

ಸಾವಿರಾರು ಬಡ ರೈತ ಕುಟುಂಬಗಳ ಹೊಟ್ಟೆ ತುಂಬಿಸುತ್ತಿರುವ ಬಿಡದಿಯ ಈ ಅದ್ಭುತ ಹಸಿರನ್ನು ಕಣ್ಣಾರೆ ನೋಡಿ. ಕಳೆದ 470ಕ್ಕೂ ಹೆಚ್ಚು ದಿನಗಳಿಂದ ಈ ಬಡ ರೈತರು ತಮ್ಮ ಅಳಲು ತೋಡಿಕೊಳ್ಳಲು ಒಂದು ಸಭೆಗಾಗಿ ಕೈಮುಗಿದು ಬೇಡಿಕೊಳ್ಳುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇವರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದೆಲ್ಲವೂ 'ಇಂಟಿಗ್ರೇಟೆಡ್ ಟೌನ್‌ಶಿಪ್' ಹೆಸರಿನಲ್ಲಿ ಬಡವರ ಭೂಮಿಯನ್ನು ರಿಯಲ್ ಎಸ್ಟೇಟ್ ದಂಧೆಗೆ ಒಪ್ಪಿಸಿ, 'ಪ್ರೀಮಿಯಂ' ಹೆಸರಿನಲ್ಲಿ ಬರೋಬ್ಬರಿ ₹33,562 ಕೋಟಿ ಆದಾಯ ಲೂಟಿ ಮಾಡಲು ನಡೆಸುತ್ತಿರುವ ಸಂಚುʼ ಎಂದು ಅವರು ದೂರಿದ್ದಾರೆ.

ಇನ್ನು ಮುಖ್ಯಮಂತ್ರಿಗಳು ಮಾಡದ ಕೆಲಸವನ್ನಾದರೂ ಕನಿಷ್ಠ ಶಾಸಕರು ಮಾಡಿ. ಆ ಹಸಿರನ್ನು ಕೊನೆಯ ಬಾರಿ ನೋಡಿ ಬನ್ನಿ. ರಾಹುಲ್ ಗಾಂಧಿ ಅವರ 'Green over Greed' ಬೋಧನೆ ಕೇವಲ ಕರ್ನಾಟಕದ ಹೊರಗೆ ಮಾತ್ರ ಅನ್ವಯಿಸುತ್ತದೆಯೇ? ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸಿಎಂ ಆದ ಮೇಲೆಯೂ ಆತ ಹಳೇ ಚಾಳಿ ಬಿಟ್ಟಿಲ್ಲ: ಡಿಕೆಶಿ ವಿರುದ್ಧ ಎಚ್‌ಡಿಕೆ ಆಕ್ರೋಶ

ಬೆಂಗಳೂರು: ರಾಜ್ಯದ ಸಿಎಂ ಆದ ಮೇಲೆಯೂ ಬ್ಲೂ ಫಿಲ್ಮ್ ‌ಮಾಡಿಸುವುದು, ಪೋಸ್ಟರ್ ಅಂಟಿಸುವುದು ಬಿಡುತ್ತಾರೆ ಅಂದುಕೊಂಡಿದ್ದೆ. ಆ ಚಾಳಿ ಡಿ.ಕೆ. ಶಿವಕುಮಾರ್‌ಗೆ (CM DK Shivakumar) ಇನ್ನೂ ಹೋಗಿಲ್ಲ. ವೈಯಕ್ತಿಕವಾಗಿ ಅಪಪ್ರಚಾರ ಮಾಡಿದರೆ ನಾನು ಕುಗ್ಗುವ ಮನುಷ್ಯ ಅಲ್ಲ. ನನ್ನ ಹೋರಾಟ ಇನ್ನೂ ತೀವ್ರವಾಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದ ಬಳಿ ಬುಧವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಬಿಡದಿ ಭಾಗದಲ್ಲಿ ತಮ್ಮ ಮತ್ತು ಕುಟುಂಬದ ವಿರುದ್ದ ಪೋಸ್ಟರ್ ಅಂಟಿಸಿರುವ ಮಾಹಿತಿ ನನಗೂ ಬಂದಿದೆ. ರಾಜ್ಯದ ಸಿಎಂ ಆದ ಮೇಲೆಯೂ ಬ್ಲೂ ಫಿಲ್ಮ್ ‌ಮಾಡಿಸುವುದು, ಪೋಸ್ಟರ್ ಅಂಟಿಸುವುದು ಬಿಡುತ್ತಾರೆ ಅಂದುಕೊಂಡಿದ್ದೆ. ಆ ಚಾಳಿ ಡಿ.ಕೆ.ಶಿವಕುಮಾರ್'ಗೆ ಇನ್ನೂ ಹೋಗಿಲ್ಲ. ವೈಯಕ್ತಿಕವಾಗಿ ಅಪಪ್ರಚಾರ ಮಾಡಿದರೆ ನಾನು ಕುಗ್ಗುವ ಮನುಷ್ಯ ಅಲ್ಲ. ನನ್ನ ಹೋರಾಟ ಇನ್ನೂ ತೀವ್ರವಾಗುತ್ತದೆ ಎಂದು ಅವರು ಕಿಡಿಕಾರಿದರು.

ಕೈಲಾಗದವನ ಕೊನೆಯ ಅಸ್ತ್ರವೇ ಅಪಪ್ರಚಾರ. ಅದನ್ನೇ ಡಿ.ಕೆ. ಶಿವಕುಮಾರ್ ಮಾಡುತ್ತಿದ್ದಾರೆ. ಪೋಸ್ಟರ್ ಅಂಟಿಸಿ ‌ಅಪಪ್ರಚಾರ ಮಾಡುತ್ತಿದ್ದಾರೆ. ನನ್ನ ಪತ್ನಿಯ ಚಿತ್ರವನ್ನು ಪೋಸ್ಟರ್‌ನಲ್ಲಿ ಹಾಕಿದ್ದಾರೆ. ಹಾಗೆ ನೋಡಿದರೆ ಈ ವ್ಯಕ್ತಿಯ ಬಗ್ಗೆ ನಾವು ಎಷ್ಟು ಪೋಸ್ಟರ್‌ಗಳನ್ನು ಅಂಟಿಸಬೇಕು ಎಂದು ಪ್ರಶ್ನಿಸಿದರು.

100 ಎಕರೆ ಅಂತ ಪೋಸ್ಟರ್‌ನಲ್ಲಿ ಬರೆದು ನನ್ನ ಮತ್ತು ನನ್ನ ಪುತ್ರ ನಿಖಿಲ್ ಫೋಟೋಗಳನ್ನು ಹಾಕಿದ್ದಾರೆ. ನನ್ನದೂ ಅಂತ ಭೂಮಿ ಅಂತ ಇರುವುದೇ 46 ಎಕರೆ. 40 ವರ್ಷಗಳ ಹಿಂದೆ ಕಷ್ಟಪಟ್ಟು ಖರೀದಿ ಮಾಡಿರುವ ಜಮೀನು ಅದು. ಅದು ಬಿಟ್ಟು ನನ್ನ ಹೆಸರಿನಲ್ಲಿ ಯಾವ ಜಮೀನು ಇಲ್ಲ. ನೂರು ಎಕರೆ ಎಲ್ಲಿದೆ ಎಂದು ಅವರು ತೋರಿಸಲಿ. ಅನಿತಾ ಕುಮಾರಸ್ವಾಮಿ ಅವರು 36-37 ಎಕರೆ ಭೂಮಿ ಖರೀದಿಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ಬಿಡದಿ ಟೌನ್‍ಶಿಫ್; ಗೂಂಡಾಗಳನ್ನು ಬಿಟ್ಟು ರೈತರನ್ನು ಬೆದರಿಸಬೇಡಿ ಎಂದು ಬಿ.ವೈ. ವಿಜಯೇಂದ್ರ ಕಿಡಿ

ಆರಂಭದಿಂದಲೂ ಇವರ ಹಿನ್ನೆಲೆಯೇ ಇದೇ ಆಗಿದೆ. ಈ ಚಾಳಿಯಲ್ಲಿ ಬಂದ ವ್ಯಕ್ತಿ‌ ಸಿಎಂ ಆದ ಮೇಲೂ ಸಿಎಂ ಕುರ್ಚಿಗೆ ಗೌರವ ಕೊಡೋದು ಬೇಡವ? ಪೋಸ್ಟರ್ ಹಾಕಿಕೊಂಡು ಅಪಪ್ರಚಾರ ಮಾಡ್ತಾ ಇದ್ದಾರೆ. ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿ.ವೈ. ವಿಜಯೇಂದ್ರ ಅವರ ವಿರುದ್ಧವೂ ಪೋಸ್ಟರ್ ಹಾಕಿಸಿದ್ದಾರೆ. ಆಯಿತು, ನಾವು ತಪ್ಪು ಮಾಡಿದ್ದರೆ ಅಧಿಕಾರಿಗಳಿಗೆ ಹೇಳಿ ಕ್ರಮ ಕೈಗೊಳ್ಳಲು ಹೇಳಿ. ಸುಮ್ಮನೆ ಯಾಕೆ ಪೋಸ್ಟರ್ ಹಾಕಿದ್ದೀರಾ? ಇಲ್ಲಿವರೆಗೂ ಕಾಂಗ್ರೆಸ್ ಪಕ್ಷದ ಶಾಸಕರು, ಮಂತ್ರಿಗಳದ್ದು ನಡೆದು ಹೋಯಿತು. ನನ್ನನ್ನು ಹನಿಟ್ರ್ಯಾಪ್ ಮಾಡಿಸಲು ಸಂಚು ರೂಪಿಸಿದ್ದರು ಎಂದು ಸಚಿವರೊಬ್ಬರೇ ಆರೋಪಿಸಿದ್ದರು. ವಿಧಾನಸಭೆ ಕಲಾಪದಲ್ಲಿ ನಡೆದಿದ್ದನ್ನು ಇಡೀ ರಾಜ್ಯವೇ ನೋಡಿತು. ಕೊನೆಗೆ ಅವರ ಬಾಯಿ ಮುಚ್ಚಿಸಿದರು. ಸತ್ಯ ಹೇಳುತ್ತೇನೆ ಎಂದ ಅವರು ಕೊನೆಗೆ ಬಾಯಿ ತೆಗೆಯಲಿಲ್ಲ. ಹಾಳಾಗಿ ಹೋಗಲಿ, ಮುಖ್ಯಮಂತ್ರಿ ಆಗಿದ್ದಾರೆ, ಮುಂದೆ ಎಲ್ಲವೂ ನಿಲ್ಲುತ್ತದೆ ಎಂದುಕೊಂಡಿದ್ದೆ. ಇವರ ಚಾಳಿ ಬಿಡುವ ಹಾಗೆ ಕಾಣುತ್ತಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.‌