About Us Advertise with us Be a Reporter E-Paper

Breaking Newsದೇಶಪ್ರಚಲಿತ

ಚುನಾವಣೆಗೆ ಪೂರ್ವ ತಯಾರಿ: ಬಿಜೆಪಿ ಮುಖ್ಯಮಂತ್ರಿಗಳ ಜತೆ ಮೋದಿ, ಶಾ ಮೀಟಿಂಗ್‌

ದೆಹಲಿ: ಮುಂದಿನ ಲೋಕಸಭಾ ಚುನಾವಣೆ ಹಾಗೂ ಶೀಘ್ರದಲ್ಲೇ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಪೂರ್ವ ತಯಾರಿಯಲ್ಲಿ ತೊಡಗಿರುವ ಬಿಜೆಪಿ ಮಂಗಳವಾರ ದೆಹಲಿಯಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸುದೀರ್ಘ ಸಭೆ ನಡೆಸಿದೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಶಾ ಸಭೆಯ ನೇತೃತ್ವ ವಹಿಸಲಿದ್ದು, ಕೇಂದ್ರ ಸರಕಾರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನ ಹಾಗೂ ಅದರಿಂದ ಪ್ರಯೋಜನ ಪಡೆದುಕೊಂಡಿರುವವರ ಬಗ್ಗೆ ವರದಿ ಕೇಳಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಪಕ್ಷದ ಸ್ಥಿತಿಗತಿಗಳ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಲೋಕಸಭೆ ಚುನಾವಣೆಗಿಂತ ಮುಂಚಿತವಾಗಿ ಚುನಾವಣೆ ಎದುರಾಗಲಿದ್ದು ಈ ಹಿನ್ನೆಲೆಯಲ್ಲಿ ಈ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ಮೋದಿ, ಅಮಿತ್ ಶಾ ಜತೆಗೆ ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ಬಿಜೆಪಿ ಆಡಳಿತವಿರುವ 15 ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು.

ಮುಂಬರುವ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಅನುಸರಿಸಬೇಕಾದ ಕಾರ್ಯತಂತ್ರ ಕುರಿತಂತೆ ಚರ್ಚಿಸಲಾಗಿದೆ ಎಂದು ಪಕ್ಷದ ತಿಳಿಸಿವೆ.

Tags

Related Articles

Leave a Reply

Your email address will not be published. Required fields are marked *

Language
Close