About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ದೇಶದ ಜನತೆಗೆ ರಕ್ಷಾಬಂಧನದ ಶುಭಾಶಯ ತಿಳಿಸಿದ ರಾಷ್ಟ್ರಪತಿ, ಪ್ರಧಾನಿ

ದೆಹಲಿ: ಇಂದು ದೇಶದೆಲ್ಲೆಡೆ ರಕ್ಷಾಬಂಧನ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಬ್ಬವು ಸಹೋದರ-ಸಹೋದರಿಯ ನಡುವಿನ ಭಾತೃತ್ವದ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶದ ಜನತೆಗೆ ರಾಖಿ ಶುಭಾಶಯ ತಿಳಿಸಿದ್ದಾರೆ.

‘ದೇಶದ ಎಲ್ಲ ಜನತೆಗೆ ರಕ್ಷಾಬಂಧನ ಹಬ್ಬದ ಶುಭಾಶಯಗಳು. ಈ ಹಬ್ಬವು ನಮ್ಮ ನಡುವೆ ಸೋದರತ್ವದ ಭಾವವನ್ನು ಬಲಪಡಿಸುತ್ತದೆ ಮತ್ತು ನಮ್ಮನ್ನು ಸ್ಫೂರ್ತಿಗೊಳಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಸಮಾಜದಲ್ಲಿ ಮಹಿಳೆಯರು, ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಸುರಕ್ಷಿತರಾಗಿದ್ದಾರೆ ಮತ್ತು ಅವರಲ್ಲಿ ಗೌರವಯುತವಾಗಿ ಕಾಣಬೇಕು’ ಎಂದು ರಾಷ್ಟ್ರಪತಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ದೇಶದ ಜನತೆಗೆ ರಕ್ಷಾಬಂಧನದ ಶುಭಾಶಯಗಳನ್ನು ತಿಳಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close