ರಾಜ್ಯಪಾಲ ನಡೆ ವಿರೋಧಿಸಿ ಪ್ರತಿಭಟನೆ

Posted In : ದಾವಣಗೆರೆ, ರಾಜ್ಯ

ದಾವಣಗೆರೆ: ಬಹುಮತವಿಲ್ಲದ ಯಡಿಯೂರಪ್ಪಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು, ಬಿಜೆಪಿಗೆ ಸರಕಾರ ರಚಿಸಲು ಆಹ್ವಾನಿಸಿ, ಅವಕಾಶ ಮಾಡಿಕೊಟ್ಟ ರಾಜ್ಯಪಾಲ ವಜುಭಾಯಿ ವಾಲಾ ಸಂವಿಧಾನ ವಿರೋಧಿ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಶುಕ್ರವಾರ ಸಿಪಿಐಎಂ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಜಯದೇವ ವೃತ್ತದಲ್ಲಿ ಪಕ್ಷದ ಮುಖಂಡ ಕೆ.ಎಲ್.ಭಟ್ ನೇತೃತ್ವದಲ್ಲಿ ಬಹುಮತವಿಲ್ಲದ ಬಿಜೆಪಿಗೆ ಪ್ರಮಾಣ ವಚನಕ್ಕೆ ಅವಕಾಶ ಮಾಡಿಕೊಟ್ಟ ರಾಜ್ಯಪಾಲ ವಾಲಾರ ಸಂವಿಧಾನ ವಿರೋಧಿ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗುವ ಮೂಲಕ ಪಕ್ಷದ ಮುಖಂಡರು, ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಕೆ.ಲಕ್ಷ್ಮಿನಾರಾಯಣ ಭಟ್, ರಾಜ್ಯಪಾಲ ವಜುಬಾಯಿ ವಾಲಾ ಅಧಿಕಾರವನ್ನು ದುರುಪಯೋಗಪಡಿಸಿಕೊಂಜು, ಕೇವಲ ಶೇ.36ರಷ್ಟು ಮಾತ್ರವೇ ಬಹುಮತ ಪಡೆದ ಬಿಜೆಪಿ ಸರಕಾರ ರಚಿಸಲು ಆಹ್ವಾನಿಸಿ, ಬಿಜೆಪಿ ಶಾಸಕಾಂಗ ನಾಯಕ ಬಿ.ಎಸ್. ಯಡಿಯೂರಪ್ಪಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಿದ್ದೇ ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ದೂರಿದರು.

Leave a Reply

Your email address will not be published. Required fields are marked *

eight − 5 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top