About Us Advertise with us Be a Reporter E-Paper

Breaking Newsದೇಶಪ್ರಚಲಿತ

ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ರೂಪಿಸುವಂತೆ ವಿಶ್ವ ಹಿಂದು ಪರಿಷತ್ ಆಗ್ರಹ

ಇಂದೋರ್: ನಂಬಿಕೆಯ ವಿಷಯಗಳು ನ್ಯಾಯಾಲಯಗಳ ವ್ಯಾಪ್ತಿಗೆ ಬರುವುದಿಲ್ಲವಾದ್ದರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಕಾನೂನು ರೂಪಿಸುವಂತೆ ವಿಶ್ವ ಹಿಂದು ಪರಿಷತ್ ಆಗ್ರಹಪಡಿಸಿದೆ.

ವಿಎಚ್‌ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣು ಕೊಕ್ಜೆ , ಕಾನೂನುಗಳ ಮೂಲಕ ನಡೆಯುವ ನ್ಯಾಯಾಲಯಗಳ ವ್ಯಾಪ್ತಿಗೆ ಧಾರ್ಮಿಕ ನಂಬಿಕೆಯ ವಿಷಯಗಳು ಬರುವುದಿಲ್ಲ. ಆದ್ದರಿಂದ ತ್ವರಿತವಾಗಿ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ರೂಪಿಸಬೇಕು ಎಂದು ಕೇಂದ್ರ ಸರಕಾರವನ್ನು ಆಗ್ರಹಪಡಿಸಿದರು. ನ್ಯಾಯಾಲಯದ ಪ್ರಕ್ರಿಯೆಗಳ ಮೂಲಕ ತಕ್ಷಣಕ್ಕೆ ಅಯೋಧ್ಯೆ ವಿವಾದ ಬಗೆಹರಿಯುವ ಲಕ್ಷಣಗಳು ಕಂಡು ಬರುತ್ತಿಲ್ಲ ಎಂದೂ ತಿಳಿಸಿದರು. ಕೊಕ್ಜೆ ಮಧ್ಯ ಪ್ರದೇಶ ಮತ್ತು ರಾಜಸ್ಥಾನ ಹೈಕೋರ್ಟ್‌ಗಳ ಮಾಜಿ ನ್ಯಾಯಮೂರ್ತಿಗಳಾಗಿದ್ದಾರೆ.

ಯಾವ ನ್ಯಾಯಾಲಯವೂ ರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದನೇ ಇಲ್ಲವೇ ಎನ್ನವುದನ್ನು ಸಾಧ್ಯವಿಲ್ಲ. ಆದ್ದರಿಂದಲೇ ನಾವು ಆರಂಭದಿಂದಲೂ ರಾಮ ಮಂದಿರ ನಿರ್ಮಾಣಕ್ಕೆ ಶಾಸನ ರೂಪಿಸುವಂತೆ ಆಗ್ರಹಪಡಿಸುತ್ತಲೇ ಬಂದಿದ್ದೇವೆ. ಇಲ್ಲವಾದಲ್ಲಿ ಈ ವಿಷಯ ಶಾಶ್ವತವಾಗಿ ನ್ಯಾಯಾಲಯದಲ್ಲಿಯೇ ಉಳಿದು ಬಿಡುತ್ತದೆ ಎಂದು ಅಭಿಪ್ರಾಯ ಪಟ್ಟರು.

ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಕುಂಭಮೇಳದ ಸಂದರ್ಭದಲ್ಲಿ ಜ.31 ಮತ್ತು ಫೆ.1ರಂದು ಧರ್ಮ ಸಂಸತ್‌ನಲ್ಲಿ ಧಾರ್ಮಿಕ ಮುಖಂಡರೊಂದಿಗೆ ಈ ವಿಷಯ ಕುರಿತು ಚರ್ಚೆ ನಡೆಸುವುದಾಗಿಯೂ ತಿಳಿಸಿದ ಕೊಕ್ಜೆ ಕಾಂಗ್ರೆಸ್‌ನ ವೋಟ್ ಬ್ಯಾಂಕ್ ರಾಜಕಾರಣವೇ ರಾಮ ಮಂದಿರ ನಿರ್ಮಾಣ ತಡವಾಗಲು ಕಾರಣ ಎಂದೂ

Tags

Related Articles

Leave a Reply

Your email address will not be published. Required fields are marked *

Language
Close