ಟೈಯರ್ ಸ್ಫೋಟಗೊಂಡು ಬೈಕ್ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರ ಸಾವು
Ramanagara Accident: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ. ಗಣೇಶನ ಹಬ್ಬಕ್ಕೆ ಅತ್ತೆಯನ್ನು ಅಳಿಯ ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ಗೆ ಬಸ್ ಡಿಕ್ಕಿಯಾಗಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.