About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

Lok Sabha Election: ಖರ್ಗೆ ವಿರುದ್ಧ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಕಣಕ್ಕೆ

ಬೆಳಗಾವಿ: ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಎಂ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.

ಇನ್ನೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರು ಸೇರಿದಂತೆ ಹಾಲಿ 15 ಸಂಸದರ ಹೆಸರನ್ನು ಅಂತಿಮಗೊಳಿಸಲಾಗಿದೆ. ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಡದಲ್ಲಿ ಬಿಜೆಪಿ ಪರಾಭವ ಗೊಂಡ ಹಿನ್ನೆಲೆಯಲ್ಲಿ 2019ರ ಲೋಕಸಭೆ ಚುನಾವಣೆಯನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶೀಘ್ರವೇ ರಾಜ್ಯ ಸಂಸದರು ಪಟ್ಟಿಯನ್ನು ಬಿಜೆಪಿ ರಾಷ್ಟ್ರೀಯ ನಾಯಕರುಗಳಿಗೆ ಕಳುಹಿಸಿಕೊಡಲಿದ್ದಾರೆ. ಅಂತಿಮವಾಗಿ ಬಿಜೆಪಿ ರಾಷ್ಟ್ರ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ.

ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಸುರೇಶ್ ಅಂಗಡಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ ಹಾಗಾಗಿ ರಾಜ್ಯ ನಾಯಕರು ಪ್ರಭಾಕರ್ ಕೋರೆ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ರಾಜ್ಯ ಸಭೆ ಸದಸ್ಯರಾಗಿರುವ ಕೋರೆ ಅವರ ಅಧಿಕಾರವಧಿ ಇನ್ನೂ ಎರಡು ಸಮಯ ಬಾಕಿಯಿದೆ, ಬೆಳಗಾವಿಯಿಂದ ಸುರೇಶ್ ಅಂಗಡಿ ನಾಲ್ಕನೇ ಬಾರಿಗೆ ಕಣಕ್ಕಳಿಯಲಿದ್ದಾರೆ.

ಬೆಂಗಳೂರು ಉತ್ತರಿಂದ ಡಿ.ವಿ. ಸದಾನಂದಗೌಡ ಅವರನ್ನು ಸ್ಪರ್ಧಿಸಲಿದ್ದಾರೆ. ಬೆಂಗಳೂರು ಸೆಂಟ್ರಲ್ ನಲ್ಲಿ ಪಿ.ಸಿ.ಮೋಹನ್ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ಆರ್. ಅಶೋಕ್ ಅಥವಾ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಕಣಕ್ಕಿಳಿಯುವ ಸಾಧ್ಯತೆಗಳಿವೆ.

Tags

Related Articles

Leave a Reply

Your email address will not be published. Required fields are marked *

Language
Close