ಸಿಸಿಬಿ ಪೊಲೀಸರ ಎದುರು ತಪ್ಪೊಪ್ಪಿಕೊಂಡ ರವಿ ಬೆಳಗೆರೆ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ನಾನೇ ಸುಪಾರಿ ಕೊಟ್ಟಿದ್ದೆ ಎಂದು ಪತ್ರಕರ್ತ ರವಿ ಬೆಳಗೆರೆ ಕಡೆಗೂ ತಪ್ಪೊಪ್ಪಿಕೊಂಡಿದ್ದಾರೆ.

ಈ ಸಂಬಂಧ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಬರೋಬ್ಬರಿ 500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಪಿಸ್ತೂಲು ಕೊಟ್ಟು ಸಹೋದ್ಯೋಗಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಎ-2 ಮಾಡಿರುವ ಸಿಸಿಬಿ ಪೊಲೀಸರ ನಡೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಪ್ರಕರಣದಲ್ಲಿ ದುಡ್ಡಿನಾಸೆಗೆ ಬೆಳಗೆರೆಯಿಂದ ಸುಪಾರಿ ಪಡೆದಿದ್ದ ಶಶಿಧರ ಮುಂಡೇವಾಡಿಯನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ.

ಸಿಸಿಬಿ ಪೊಲೀಸರು ಸಾಕ್ಷ್ಯಧಾರ ಸಮೇತ ಬೆಂಗಳೂರಿನ 1 ನೇ ಎಸಿಎಂಎಂ ಕೋರ್ಟ್‌ಗೆ 500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದರಲ್ಲಿ ಬೆಳಗೆರೆ ಇಡೀ ಪ್ರಕರಣದ ವಿಚಾರದಲ್ಲಿ ಏನೆಲ್ಲಾ ಮಾಡಿದ್ದೇನೆಂಬುದನ್ನು ಹೇಳಿಕೊಂಡಿದ್ದಾರೆ. ಅಲ್ಲದೇ, ನಾನೇ ಸುಪಾರಿ ಕೊಟ್ಟು ಸುನೀಲ್ ಹೆಗ್ಗರವಳ್ಳಿಯನ್ನು ಹತ್ಯೆ ಮಾಡಲು ಎಂದೂ ಹೇಳಿದ್ದಾರೆ ಎಂಬ ವಿಚಾರ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ.

Leave a Reply

Your email address will not be published. Required fields are marked *

20 − 3 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top