About Us Advertise with us Be a Reporter E-Paper

Breaking Newsಪ್ರಚಲಿತವಿದೇಶ

ಪಾಕಿಸ್ತಾನದ ಜತೆಗಿನ ಸಂಬಂಧ ಭಾರತದಲ್ಲಿ ಚುನಾವಣಾ ವಿಷಯವಾಗಿದೆ: ಇಮ್ರಾನ್ ಖಾನ್

ಇಸ್ಲಾಮಾಬಾದ್: 2019ರ ಲೋಕಸಭಾ ಚುನಾವಣೆಗೂ ಮುನ್ನ ಭಾರತದೊಂದಿಗೆ ಮಾತುಕತೆ ನಡೆಯುವ ಸಾಧ್ಯತೆಗಳು ಕಡಿಮೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಇಲಾಖೆ ವ್ಯವಹಾರಗಳ ಸ್ಥಾಯಿ ಸಮಿತಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಭೆಯಲ್ಲಿ ಬಾರತದೊಂದಿಗೆ ಮಾತುಕತೆ ನಡೆಸುವ ಚರ್ಚೆ ನಡೆಯಿತು ಎಂದರು.

ಸೌದಿ ಅರೇಬಿಯಾ ಮತ್ತು ಚೀನಾಗೆ ಪ್ರಧಾನಿ ಇಮ್ರಾನ್ ಖಾನ್ ಅವರ ಭೇಟಿ ಮತ್ತು ನೆರೆ ರಾಷ್ಟ್ರಗಳಾದ ಭಾರತ ಮತ್ತು ಆಫ್ಘಾನಿಸ್ತಾನದೊಂದಿಗಿನ ಸಂಬಂಧ ಕುರಿತೂ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನ ವಿರೋಧಿ ವಿಷಯ ಭಾರತದಲ್ಲಿ ಮತ ಗಳಿಕೆಯ ವಿಷಯವಾಗಿದೆ. ಪಾಕಿಸ್ತಾನದೊಂದಿಗಿನ ಸಂಬಂಧ ಭಾರತದಲ್ಲಿ ಚುನಾವಣಾ ವಿಷಯವಾಗಿದೆ ಎಂದು ಇತ್ತೀಚೆಗಷ್ಟೇ ಇಮ್ರಾನ್ ಖಾನ್ ಹೇಳಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close