ದಿನ ಭವಿಷ್ಯ, ಸೆಪ್ಟೆಂಬರ್ 10, 2026: ಇಂದು ಯಾವುದೇ ಮುಖ್ಯ ನಿರ್ಧಾರ ತೆಗೆದುಕೊಳ್ಳಬೇಡಿ
Horoscope Today September 10th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಕೃಷ್ಣೆಪಕ್ಷದ, ಚತುರ್ದಶಿ ತಿಥಿಯ, ಮಘಾ ನಕ್ಷತ್ರದ ಸೆಪ್ಟೆಂಬರ್ 10ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದ್ದು, ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮಕ್ಕಳಿಂದ ಇಂದು ತೊಂದರೆ ಎದುರಾಗುವ ಸಾಧ್ಯತೆ ಇದೆ. ಹಣ ಕಳೆದು ಹೋಗಲಿದೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮನೆಯಲ್ಲಿ ಹಾಗೂ ಸಂಸಾರದಲ್ಲೂ ಗೊಂದಲ ಉಂಟಾಗಬಹುದು. ಪ್ರೀತಿಪಾತ್ರರ ಜತೆ ಒಡಕು ಕಾಣುವ ಸಾಧ್ಯತೆ ಹೆಚ್ಚು.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ಸೋಷಿಯಲ್ ಮೀಡಿಯಾ ಹಾಗೂ ಮಾಧ್ಯಮದಲ್ಲಿ ಇರೋರಿಗೆ ಬಹಳಷ್ಟು ಲಾಭವಾಗಲಿದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಅದೇ ರೀತಿ ದೊಡ್ಡದಾದ ಜವಾಬ್ದಾರಿಯನ್ನು ನೀವಿಂದು ತೆಗೆದುಕೊಳ್ಳುಬೇಕಾದ ಅನಿವಾರ್ಯತೆ ಇದೆ. ಸಂಸಾರದಲ್ಲೂ ಸಂಕಷ್ಟ ಎದುರಾಗಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ತೊಂದರೆ ಬಗೆ ಹರಿಯುತ್ತದೆ. ಸ್ನೇಹಿತರ ಜತೆ ಇಂದು ಖುಷಿಯಾಗಿ ದಿನವನ್ನು ಕಳೆಯುತ್ತೀರಿ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಯಾವುದೇ ಮುಖ್ಯ ನಿರ್ಧಾರವನ್ನು ಇಂದು ಕೈಗೊಳ್ಳಲು ಹೋಗಬೇಡಿ. ಮಿತ್ರತ್ವದಲ್ಲಿ ಹಾಗೂ ಪಾರ್ಟನರ್‌ಶಿಪ್ ವ್ಯವಹಾರದಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ.
ಅದೃಷ್ಟ ತರಬೇಕಾದರೆ ಲಕ್ಕಿ ಬ್ಯಾಂಬೂದಲ್ಲಿ ಎಷ್ಟು ಕಾಂಡ ಇರಬೇಕು ಗೊತ್ತೇ?
ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು, ಅಂದುಕೊಂಡದ್ದನ್ನು ನೀವಿಂದು ಗಳಿಸಬಹುದು. ಹಣಕಾಸಿನ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಹೀಗಾಗಿ ಮುಖ್ಯವಾದ ಕೆಲಸ ಕಾರ್ಯದಲ್ಲಿ ಒಡಕು ಕಾಣುವ ಸಾಧ್ಯತೆ ಹೆಚ್ಚು.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಳ ತೊಂದರೆ ಎಲ್ಲವೂ ಮಾಯವಾಗುತ್ತದೆ. ಆರ್ಥಿಕ ವ್ಯವಹಾರದಲ್ಲೂ ಯಶಸ್ಸು ಸಿಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ತಿರುವು ಹಾಗೂ ಆತಂಕ ಎದುರಾಗುವ ಸಾಧ್ಯತೆ ಇದೆ.
ಕುಂಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಹಿಂದಿನ ಕಷ್ಟಗಳೆಲ್ಲ ದೂರವಾಗಲಿದೆ. ದಾಂಪತ್ಯದಲ್ಲಿ ನೆಮ್ಮದಿ ಸಿಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶತ್ರು ನಾಶವಾಗಲಿದ್ದು ಸಾಮಾಜಿಕ ಚಟುವಟಿಕೆಯಲ್ಲಿ ದೊಡ್ಡದಾದ ಯಶಸ್ಸು ಸಿಗುತ್ತದೆ.