ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಆಗಸ್ಟ್‌ 13, 2026: ಇಂದು ಗಜಕೇಸರಿ ಯೋಗ; ಮುಟ್ಟಿದ್ದೆಲ್ಲ ಚಿನ್ನವಾಗಬೇಕಾದರೆ ಈ ಕೆಲಸ ಮಾಡಬೇಕು

Horoscope Today August 13th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಪ್ರತಿಭಾ ತಿಥಿ, ಆಶ್ಲೇಷಾ ನಕ್ಷತ್ರದ, ಆಗಸ್ಟ್ 13ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಈ ರಾಶಿಯವರಿಗೆ ಇಂದು ಸಮಸ್ಯೆಗಳಿಂದ ಮುಕ್ತಿ

ಇಂಟರ್‌ನೆಟ್ ಚಿತ್ರ -

Profile
Pushpa Kumari Aug 13, 2026 6:00 AM

ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಆಶ್ಲೇಷಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿಕೊಟ್ಟಿದ್ದಾರೆ. ಆ ಕುರಿತಾದ ವಿವರ ಇಲ್ಲಿದೆ.

ಮೇಷ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಗಜಕೇಸರಿ ಯೋಗವು ಇರಲಿದ್ದು, ಮನೆ ಹಾಗೂ ಕೋರ್ಟ್ ವಿಚಾರದಲ್ಲಿ ಅನುಕೂವಾಗಲಿದೆ. ಕೆಲಸ ಕಾರ್ಯದಲ್ಲೂ ಪ್ರಗತಿ ಕಂಡು ಬರಲಿದೆ.

ವೃಷಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದ್ದು, ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಮಾಧ್ಯಮ ಹಾಗು ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೆ ಉತ್ತಮ ದಿನ.

ಮಿಥುನ ರಾಶಿ: ಇಂದು ಈ ರಾಶಿಯವರ ಪಾಲಿಗೆ ಉತ್ತಮ ದಿನವಾಗಲಿದೆ. ಶುಭ ಕಾರ್ಯಗಳು ಮನೆಯಲ್ಲಿ ನಡೆಯಲಿದ್ದು, ಬಂಧು ಮಿತ್ರರಿಂದ ನೆಮ್ಮದಿ ಸಿಗಲಿದೆ. ಅದೇ ರೀತಿ ಧನಾಗಮನದ ಸೂಚನೆಯೂ ಇದೆ.

ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸಮಸ್ಯೆಗಳು ನಿವಾರಣೆಯಾಗುತ್ತವೆ. ಸ್ನೇಹಿತರಿಂದ ಸಹಕಾರ ದೊರೆಯಲಿದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮುಖ್ಯವಾದ ಕೆಲಸ ಕಾರ್ಯಗಳನ್ನು ಮಾಡಬೇಡಿ. ಪಾರ್ಟನರ್‌ ಶಿಪ್ ವ್ಯವಹಾರದಲ್ಲಿ ತೊಂದರೆ ಎದುರಾಗಬಹುದು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದ್ದು, ಇಷ್ಟಾರ್ಥ ಸಿದ್ದಿಯಾಗಲಿದೆ. ಕಾರ್ಯಕ್ಷೇತ್ರದಲ್ಲಿಯೂ ಯಶಸ್ಸು ಗಳಿಸುತ್ತೀರಿ.

ಮನೆಗೆ ಸುಖ, ಸಮೃದ್ಧಿ ತರಲು ಪಾಲಿಸಬೇಕಾದ ಪ್ರಮುಖ ನಿಯಮಗಳು

ತುಲಾ ರಾಶಿ: ತುಲಾ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ತಿರುವು ಕಂಡುವ ಬರುವ ಸಾಧ್ಯತೆ ಇದೆ. ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗಲಿದ್ದು, ಉತ್ತಮ ಪ್ರತಿಫಲ ಸಿಗಲಿದೆ.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಗಜಕೇಸರಿ ಯೋಗ ಇದರಲಿದೆ. ಜತೆಗೆ ಅದೃಷ್ಟದ ದಿನವಾಗಲಿದೆ. ಇದಕ್ಕೆ ಭಗವಂತನ ಹಾಗೂ ಹಿರಿಯರ ಆಶೀರ್ವಾದ ಬೇಕಾಗುತ್ತದೆ. ಅದೇ ರೀತಿ ವಿನಯತೆಯಿಂದಲೂ ನಡೆದುಕೊಳ್ಳಬೇಕು‌

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇಲ್ಲ. ಕಿರಿ ಕಿರಿ ಅನುಭವಿಸುವ ಸಾಧ್ಯತೆ ಇದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ನೆಮ್ಮದಿ ಹಾಗೂ ಸಂಸಾರದಲ್ಲಿ ಖುಷಿ ಸಿಗುತ್ತದೆ. ಮನಸ್ಸಿಗೆ ಸಮಾಧಾನ ಕಂಡು ಬರಲಿದೆ.

ಕುಂಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಶತ್ರುಗಳಿಂದ ತೊಂದರೆ ಎದುರಾಗುತ್ತದೆ. ಹಾಗಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕ್ರಿಯಾತ್ಮಕ ಕೆಲಸದಲ್ಲಿ ಯಶಸ್ಸು ಸಿಗಲಿದೆ.