ದಿನ ಭವಿಷ್ಯ, ಜುಲೈ 13, 2026: ರಾಹುವಿನ ಪ್ರಭಾವ; ಇಂದು ದಿನಚರಿಯಲ್ಲಿ ಬದಲಾವಣೆ ಮಾಡಿಕೊಳ್ಳಿ
Horoscope Today July 13th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಆರಿದ್ರಾ ನಕ್ಷತ್ರದ, ಜುಲೈ 12ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಆರಿದ್ರಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಆರಿದ್ರಾ ನಕ್ಷತ್ರದ ಅಧಿಪತಿ ರಾಹು. ಹೀಗಾಗಿ ಹೆಚ್ಚಿನ ಜನರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ನಿಮ್ಮ ಆತ್ಮವಿಶ್ವಾಸ ಚೆನ್ನಾಗಿ ಇದ್ದು, ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಲಾಭ ತರಲಿದೆ.
ವೃಷಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮನೆಯಲ್ಲಿ ಕೆಲವೊಂದು ವಿಚಾರಗಳಿಗೆ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಬಹಳ ಕಾಳಜಿಯಿಂದ ಎಲ್ಲವನ್ನು ನೀವು ನಿಭಾಯಿಸಬೇಕಾಗುತ್ತದೆ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ನಿಮ್ಮ ವ್ಯಕ್ತಿತ್ವದಲ್ಲಿ ಕೆಲವು ಬದಲಾವಣೆ ಮಾಡಿ ಕೊಳ್ಳಬೇಕಾಗುತ್ತದೆ. ಆದೇ ರೀತಿ ಬೇರೆಯವರಿಂದ ಕೆಲವು ಟೀಕೆಯನ್ನು ನೀವು ಕೇಳಬೇಕಾಗುತ್ತದೆ.
ವಿಡಿಯೋ ನೋಡಿ:
ಕಟಕ ರಾಶಿ: ಕಟಕ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಆದರೆ ಲೌಕಿಕವಾಗಿ ಕೆಲವು ಬದಲಾವಣೆ ಮಾಡಿಕೊಳ್ಲಬೇಕು. ಕೆಲವೊಂದಿಷ್ಟು ಕೆಲಸದಲ್ಲಿ ಒಡಕು ಕಾಣುವ ಸಾಧ್ಯತೆ ಇದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಗುಂಪು ಕೆಲಸದಿಂದ ಹೆಚ್ಚಿನ ಯಶಸ್ಸು ಕಾಣುತ್ತೀರಿ. ಆರ್ಥಿಕವಾಗಿಯೂ ಲಾಭ ಗಳಿಸುತ್ತೀರಿ.
ಹಳೆಯ ಮನೆ ಖರೀದಿಸುವ ಮುನ್ನ ಈ ವಾಸ್ತು ನಿಯಮಗಳನ್ನು ಪಾಲಿಸಿ
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ದೊಡ್ಡದಾದ ಬದಲಾವಣೆ ಕಂಡು ಬರಲಿದ್ದು, ಪ್ರತಿಷ್ಠೆ ಹೆಚ್ಚಾಗಬಹುದು.
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ವ್ಯವಹಾರದಲ್ಲಿ ನಷ್ಟ ಉಂಟಾಗುವ ಸಾಧ್ಯತೆ ಇದೆ. ಬಾಸ್ ಅಥವಾ ಅಧಿಕಾರಿಗಳಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮನಸ್ಸಿಗೆ ಬೇಸರ ಇದ್ದು, ಪ್ರೇಮಿಗಳಿಗೆ ಕಠಿಣ ದಿನವಾಗಲಿದೆ.
ಧನಸ್ಸು ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಪಾರ್ಟ್‌ನರ್‌ಶಿಪ್ ವ್ಯವಹಾರದಲ್ಲಿ ತೊಂದರೆ ಎದುರಾಗಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಶತ್ರು ನಾಶ, ಎಲ್ಲ ಕೆಲಸ ಕಾರ್ಯದಲ್ಲಿ ಜಯ.
ಕುಂಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಾಗಲಿದ್ದು, ಬುದ್ದಿವಂತಿಕೆ ಉಪಯೋಗಿಸಿ ಮಾಡುವ ಕೆಲಸದಲ್ಲಿ ಯಶಸ್ಸು.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಆದರೆ ಆಸ್ತಿ ವ್ಯವಹಾರದಲ್ಲಿ ತೊಂದರೆ ಉಂಟಾಗಬಹುದು. ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ.