ದಿನ ಭವಿಷ್ಯ, ಜುಲೈ 7, 2026: ಇಂದು ನೀವು ಹೆಜ್ಜೆ ಇಟ್ಟಲ್ಲೆಲ್ಲ ಯಶಸ್ಸು ಕಟ್ಟಿಟ್ಟ ಬುತ್ತಿ
Horoscope Today July 7th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಸಪ್ತಮಿ ತಿಥಿ, ಉತ್ತರ ಭಾದ್ರಪದ ನಕ್ಷತ್ರದ, ಜುಲೈ 7ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎಂದುಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಉತ್ತರ ಭಾದ್ರಪದ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯ ಹೇಗಿರಲಿದೆ ಎನ್ನವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಬುಧ ವಕ್ರಿಯಾಗಿ ಮಿಥುನ ರಾಶಿಯನ್ನು ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಬಂಧುಗಳ ಮಧ್ಯೆ ಒಡಕು ಮೂಡಬಹುದು. ಅದೇ ರೀತಿ ಕೆಲಸ ಕಾರ್ಯದಲ್ಲೂ ಅಡಚಣೆ ಉಂಟಾಗುವ ಸಾಧ್ಯತೆ ಇದೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಮನೆಯಲ್ಲಿ ಅತೀ ಖುಷಿ ಸಿಗಲಿದ್ದು ಧನ ಆಗಮನದ ಸೂಚನೆಯೂ ಇದೆ.
ಮಿಥುನ ರಾಶಿ: ಇಂದು ಈ ರಾಶಿಗೆ ಕಷ್ಟದ ಪರಿಸ್ಥಿತಿ ಎದುರಾಗಲಿದೆ. ಮನೆಯಲ್ಲಿ ಏನೋ ಒಂದು ತೊಂದರೆ ನೀವು ಅನುಭವಿಸಬಹುದು.
ಕಟಕ ರಾಶಿ: ಕಟಕ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ಸಿಗುವುದಿಲ್ಲ. ಮಿತ್ರತ್ವದಲ್ಲಿ ಒಡಕು ಉಂಟಾಗುವ ಸಾಧ್ಯತೆ ಇದೆ.
ಹಳೆಯ ಮನೆ ಖರೀದಿಸುವ ಮುನ್ನ ಈ ವಾಸ್ತು ನಿಯಮಗಳನ್ನು ಪಾಲಿಸಿ
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮಿತ್ರರಿಂದ ಧನಾಗಮನದ ಸೂಚನೆ ಇದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ. ಆದರೆ ಮಾತಿನ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು ಅಗತ್ಯ.
ವಿಡಿಯೋ ನೋಡಿ:
ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ನೀವು ಅಂದುಕೊಂಡಿದ್ದೆಲ್ಲ ಇಂದು ನೆರವೇರುತ್ತದೆ.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಲಿದೆ. ಎಲ್ಲವೂ ಇಂದು ನಿಮ್ಮ ಪರವಾಗಿ ನಡೆಯಲಿದ್ದು ಯಶಸ್ಸು ಕಾಣುತ್ತೀರಿ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ದಾಂಪತ್ಯದಲ್ಲೂ ತೊಂದರೆ ಎದುರಾಗಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಹೆಚ್ಚು ಯಶಸ್ಸು ಹಾಗೂ ಸಮೃದ್ಧಿ ಸಿಗುತ್ತದೆ. ಸೋಷಿಯಲ್ ಮೀಡಿಯಾ ಹಾಗೂ ಮಾರ್ಕೆಟಿಂಗ್ ವ್ಯವಹಾರದಲ್ಲಿ ಇರೋರಿಗೆ ಯಶಸ್ಸು.
ಕುಂಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ವ್ಯವಹಾರದಲ್ಲಿ ತೊಂದರೆ ಹಾಗೂ ಹಣಕಾಸಿನ ವಿಚಾರದಲ್ಲಿ ನಷ್ಟ ಉಂಟಾಗಬಹುದು.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು, ಆಸ್ತಿ ಪಾಸ್ತಿ ವಿಚಾರವಾಗಿ ಲಾಭ. ಈ ಹಿಂದೆ ಇದ್ದ ತೊಂದರೆಗಳು ನಿವಾರಣೆಯಾಗುತ್ತದೆ.