ದಿನ ಭವಿಷ್ಯ, ಆಗಸ್ಟ್ 14, 2026: ಈ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು
Horoscope Today August 14th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ದ್ವೀತಿಯ ತಿಥಿ, ಮಖಾ ನಕ್ಷತ್ರದ, ಆಗಸ್ಟ್ 14ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಮಖಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಹಣಕಾಸಿನ ವಿಚಾರ ಹಾಗೂ ಪ್ರೇಮ, ಪ್ರೀತಿ ಪ್ರಕರಣದಲ್ಲಿ ತೊಂದರೆ ಎದುರಾಗಬಹುದು. ಹಾಗಾಗಿ ಮುಖ್ಯ ನಿರ್ಧಾರ ಕೈಗೊಳ್ಳುವಾಗ ಜಾಗೃತರಾಗಿರಿ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ರಿಯಲ್ ಎಸ್ಟೇಟ್ ಬ್ಯುಸಿನೆಸ್ ವ್ಯವಹಾರ ಹಾಗೂ ಕೋರ್ಟ್ ಕಚೇರಿ ವ್ಯವಹಾರದಲ್ಲಿ ತೊಂದರೆ ಎದುರಾಗಬಹುದು.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮಾಧ್ಯಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಕೆಲಸ ಮಾಡೋರಿಗೆ ಉತ್ತಮ ದಿನವಾಗಲಿದೆ. ಅದೇ ರೀತಿ ಮನೆಯಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆ ಇದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಮನೆಯವರ ಬಗ್ಗೆ ಇಂದು ಹೆಚ್ಚು ಯೋಚಿಸುವ ದಿನವಾಗಲಿದೆ.
ಈ ವಸ್ತುಗಳನ್ನು ಉಡುಗೊರೆಗಳನ್ನು ನೀಡಬೇಡಿ ಎನ್ನುತ್ತದೆ ವಾಸ್ತು ಶಾಸ್ತ್ರ!
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮವಾದ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಳವರೆಗೆ ಇದ್ದ ತೊಂದರೆ ಎಲ್ಲವೂ ಮಾಯವಾಗುತ್ತದೆ. ಮನಸ್ಸಿಗೆ ಹೆಚ್ಚಿನ ನಿರಾಳತೆ ಸಿಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟದ ದಿನವಾಗಿದ್ದು ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅದೇ ರೀತಿ ನಿಮ್ಮ ಪ್ರೀತಿ ಪಾತ್ರರ ಜತೆಗೆ ವೈಮನಸ್ಸು ಕಾಡುವ ಸಾಧ್ಯತೆ ಕೂಡ ಇದೆ.
ತುಲಾ ರಾಶಿ: ತುಲಾ ರಾಶಿಯವರಿಗೆ ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಇರುತ್ತದೆ. ಮಿತ್ರರಿಂದ ಧನ ಲಾಭದ ಸೂಚನೆಗಳು ಕೂಡ ಇವೆ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಯಶಸ್ಸು ಸಿಗುತ್ತದೆ. ನೀವು ಅಂದುಕೊಂಡ ಕೆಲಸ ಕಾರ್ಯದಲ್ಲಿ ಜಯವನ್ನು ಕಾಣುತ್ತೀರಿ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಅದೃಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುತ್ತದೆ. ಆದರೆ ಹಿರಿಯರ ಸೇವೆ ಇಂದು ಅಗತ್ಯವಾಗಿರುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ನೆಮ್ಮದಿ ಇರುವುದಿಲ್ಲ. ಸ್ವಲ್ಪ ದಿನಗಳವರೆಗೆ ತಾಳ್ಮೆಯಿಂದ ಇರುವುದು ಒಳ್ಳೆಯದು.
ಕುಂಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಪ್ರೀತಿ ಪಾತ್ರರಿಂದ ನೆಮ್ಮದಿ ಸಿಗಲಿದೆ. ದಾಂಪತ್ಯ ಹಾಗೂ ಸ್ನೇಹಿತರಿಂದ ಒಳಿತಾಗಲಿದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಶತ್ರು ನಾಶವಾಗಲಿದೆ. ಹಿಂದಿನ ದಿನದಲ್ಲಿ ಇದ್ದ ತೊಂದರೆ ಮಾಯವಾಗುತ್ತದೆ.