Horoscope Today January 19th: ರವಿಯ ಪ್ರಭಾವದಿಂದ ಈ ರಾಶಿಯವರಿಗೆ ನಷ್ಟ
ನಿತ್ಯ ಭವಿಷ್ಯ ಜನವರಿ 19, 2026: ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು, ಮಘೆ ಮಾಸೆ, ಶುಕ್ಷ ಪಕ್ಷ, ಪ್ರತಿಭಾ ತಿಥಿ, ಉತ್ತರಾಷಡ ನಕ್ಷತ್ರದ ಜನವರಿ 19ನೇ ತಾರೀಖಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು, ಜ. 19: ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು, ಮಘೆ ಮಾಸೆ, ಶುಕ್ಷ ಪಕ್ಷ, ಉತ್ತರಾಷಾಢ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಇಂದು ಉತ್ತರಾಷಾಢ ನಕ್ಷತ್ರ ಇದ್ದು, ಇದರ ಅಧಿಪತಿ ರವಿ. ಹಾಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಅತ್ಯುತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗಲಿದ್ದು, ಎಲ್ಲ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ.
ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಅದೇ ರೀತಿ ಹಿರಿಯರ ಆಶೀರ್ವಾದ ನಿಮಗೆ ಮುಖ್ಯವಾಗುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗುವುದಿಲ್ಲ. ಪ್ರೀತಿ ಪಾತ್ರರ ಜತೆ ಕಲಹ ಉಂಟಾಗುವ ಸಾಧ್ಯತೆ ಇದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ನೆಮ್ಮದಿ ಸಿಗುವ ದಿನವಾಗಲಿದೆ. ಬೇರೆಯವರಿಂದ ಸಹಕಾರ ಪ್ರಾಪ್ತಿಯಾಗಲಿದ್ದು ಇಷ್ಟಾರ್ಥ ಸಿದ್ಧಿಯಾಗಲಿದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಶತ್ರುಗಳ ನಾಧೆ ನಿಮಗೆ ಹೆಚ್ಚಾಗಿ ಕಾಡಬಹುದು. ಆದರೂ ಕೂಡ ಕೆಲವೊಂದು ಕೆಲಸದಲ್ಲಿ ಜಯ ಪ್ರಾಪ್ತಿಯಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮಕ್ಕಳ ವಿಚಾರದಲ್ಲಿ ತೊಂದರೆ ಉಂಟಾಗಲಿದೆ. ಅದಾಗ್ಯೂ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಂಡು ಮುಂದೆ ಹೋದರೆ ಜಯ ಪ್ರಾಪ್ತಿಯಾಗುತ್ತದೆ.
ತುಳಸಿ ಕಟ್ಟೆಯ ಬಳಿ ಈ ಗಿಡಗಳನ್ನು ನೆಡಿ; ಹಣದ ಸಮಸ್ಯೆ ಸುಳಿಯುವುದೂ ಇಲ್ಲ
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ನಾನಾ ರೀತಿಯ ಯೋಚನೆಗಳು ನಿಮ್ಮನ್ನು ಕಾಡಬಹುದು. ರಿಯಲ್ ಎಸ್ಟೇಟ್, ಕೋರ್ಟ್, ವ್ಯವಹಾರ ಮಾಡುವವರಿಗೆ ನಷ್ಟವಾಗಲಿದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರ ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಸೋಶಿಯಲ್ ಮೀಡಿಯಾ, ಮಾಧ್ಯಮ, ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಇರುವವರಿಗೆ ಉತ್ತಮ ದಿನವಾಗಲಿದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಮನೆಯ ವಿಚಾರದಲ್ಲಿ, ಸಂಸಾರದ ವಿಚಾರದಲ್ಲಿ ಸಮಸ್ಯೆ ಎದುರಾಗಲಿದೆ. ನಿಮ್ಮ ಕಷ್ಟವನ್ನು ನೀವು ಮನೆಯವರ ಜತೆ ಹಂಚಿಕೊಳ್ಳಬೇಕಾಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಎರಡು ಮೂರು ದಿನಗಳಲ್ಲಿ ಇದ್ದ ಮನಸ್ಸಿನ ಕ್ಷೇಷ ಎಲ್ಲವೂ ಮಾಯವಾಗುತ್ತದೆ.
ಕುಂಭರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರ ಇಂದು ಬೇಡ. ಮಾತುಕತೆಗಳು ಬೇಡ, ಆಧ್ಯಾತ್ಮಿಕತೆಯ ಕಡೆ ಗಮನ ಕೊಡಬೇಕಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ಧಿಯಾಗಲಿದೆ. ಮಿತ್ರರಿಂದ, ಗುಂಪುಗಳಿಂದ ಯಶಸ್ಸು ಸಿಗುತ್ತದೆ.