ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಎಪ್ರಿಲ್ 25, 2026: ಇಂದು ಈ ರಾಶಿಗೆ ಚಂದ್ರನಿಂದ ಭಾರೀ ಒಳಿತು!

Horoscope Today April 25: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲಪಕ್ಷ, ನವಮಿ ತಿಥಿ, ಆಶ್ಲೇಷಾ ನಕ್ಷತ್ರದ ಎಪ್ರಿಲ್ 25 ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಈ ರಾಶಿಗೆ ಇಂದು ಕೆಲಸ ಕಾರ್ಯದಲ್ಲಿ ಯಶಸ್ಸು

ಇಂಟರ್ ನೆಟ್ ಚಿತ್ರ -

Profile
Pushpa Kumari Apr 25, 2026 6:00 AM

ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ, ವಸಂತ ಋತು, ವೈಶಾಖ ಮಾಸೆ,ಆಶ್ಲೇಷಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಮೇಷ ರಾಶಿಗೆ ತಾಯಿಯ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಸಂಸಾರದ ಸಮಸ್ಯೆಗಳು ಇಂದು ಜಾಸ್ತಿಯಾಗುವ ಸಾಧ್ಯತೆ ಕೂಡ ಇರುತ್ತದೆ.

ವೃಷಭ ರಾಶಿ: ವೃಷಭ ರಾಶಿ ಅವರಿಗೆ ಅತೀ ಉತ್ತಮವಾದ ದಿನವಾಗಿದೆ. ಎಲ್ಲ ಕಾರ್ಯದಲ್ಲೂ ಯಶಸ್ಸು ಸಿಗುತ್ತದೆ. ಅಂದುಕೊಂಡಕ್ಕಿಂತ ಹೆಚ್ಚಿನ ಸಹಕಾರ ನಿಮಗೆ ಪ್ರಾಪ್ತಿಯಾಗುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಮನೆಯಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ. ಕೆಲಸ ಕಾರ್ಯದಲ್ಲೂ ಅತೀ ಹೆಚ್ಚಿನ ಯಶಸ್ಸು ನಿಮಗೆ ದೊರೆಯುತ್ತದೆ.

ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ ದಿನ ಭವಿಷ್ಯ:



ಕಟಕ ರಾಶಿ: ಕಟಕ ರಾಶಿ ಅವರಿಗೆ ನಿಮ್ಮ ರಾಶಿಯಲ್ಲಿ ಚಂದ್ರ ಇದ್ದಾನೆ. ಮನಸ್ಸಿಗೆ ಅತೀ ಹೆಚ್ಚಿನ ಖುಷಿ ನಿಮಗೆ ಸಿಗುತ್ತದೆ‌.ಆದರೆ ಮನಸ್ಸಿಗೆ ನಾನಾ ರೀತಿಯ ಯೋಚನೆಯನ್ನು ನೀವು ಮಾಡುವ ಸಾಧ್ಯತೆ ಇದೆ.

Vastu Tips: ವಾಸ್ತು ಪ್ರಕಾರ ಮನೆಯ ಯಾವ ಕೋಣೆಗೆ ಯಾವ ಬಣ್ಣ ಸೂಕ್ತ? ಇಲ್ಲಿದೆ ಉತ್ತರ

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಯಾವುದೇ ಕೆಲಸ ಕಾರ್ಯಗಳು ಇಂದು ನಿಮ್ಮ ಪರವಾಗಿ ನಡೆಯುವುದಿಲ್ಲ. ಯಾವುದೇ ಮುಖ್ಯವಾದ ನಿರ್ಧಾರಗಳು ಬೇಡ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಧನ ಆಗಮನ ಕೂಡ ಆಗುತ್ತದೆ. ಗುಂಪು ಕೆಲಸದಿಂದ ಯಶಸ್ಸು ಸಿಗುತ್ತದೆ

ತುಲಾ ರಾಶಿ: ತುಲಾ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಜಾಸ್ತಿಯಾಗುತ್ತದೆ. ಇದರಿಂದ ಮನಸ್ಸಿಗೆ ಬೇಸರ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿ ಬರುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಭಾಗ್ಯೋದಯವಾದ ದಿನ ವಾಗಿದೆ. ಆದರೂ ಹಿರಿಯರ ಹಾಗೂ ಭಗವಂತನ ಆಶೀರ್ವಾದ ನಿಮಗೆ ಬಹಳ ಮುಖ್ಯವಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಯಾವುದೇ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುವುದಿಲ್ಲ. ಮನಸ್ಸಿಗೆ ನೆಮ್ಮದಿ ಕೂಡ ಇರುವುದಿಲ್ಲ

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ‌. ಎಲ್ಲ ರೀತಿಯಿಂದಲೂ ಗೆಲುವು ನಿಮಗೆ ಸಿಗಬಹುದು.ಎಲ್ಲರ ಸಹಕಾರ ಕೂಡ ಪ್ರಾಪ್ತಿಯಾಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಶತ್ರುಗಳನ್ನು ಹಿಮ್ಮೆಟ್ಟಬಹುದು. ಸಾಮಾಜಿಕ ಚಟುವಟಿಕೆಯಲ್ಲೂ ಯಶಸ್ಸು ಸಿಗುತ್ತದೆ.

ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ‌‌. ನಿಮ್ಮ ಬುದ್ದಿವಂತಿಕೆ ಯಿಂದ ಇಂದು ಯಶಸ್ಸು ಗಳಿಸುತ್ತೀರಿ. ಎಲ್ಲ ಕೆಲಸ ಕಾರ್ಯದಲ್ಲೂ ಯಶಸ್ಸು ಸಿಗುತ್ತದೆ.