ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಮಾರ್ಚ್ 3, 2026: ಈ ರಾಶಿಗೆ ಇಂದು ಎಲ್ಲ ಕೆಲಸ ಕಾರ್ಯದಲ್ಲಿ ಮುನ್ನಡೆ!

Horoscope Today March 3: ಇಂದು ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ, ಶರದೃತು ಫಾಲ್ಗುಣ ಮಾಸೆ, ಕೃಷ್ಣೆ ಪಕ್ಷದ, ಪ್ರತಿಪ ತಿಥಿ, ಪೂರ್ವ ಫಾಲ್ಗುಣ ನಕ್ಷತ್ರದ ಮಾರ್ಚ್ 3ನೇ ತಾರೀಖಿನ ಮಂಗಳವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಈ ರಾಶಿಗೆ ಇಂದು ಯಶಸ್ಸಿನ ಸುರಿಮಳೆ!

ಇಂಟರ್ ನೆಟ್ ಚಿತ್ರ -

Profile
Pushpa Kumari Mar 3, 2026 6:00 AM

ಬೆಂಗಳೂರು: ಇಂದು ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ ಶರದೃತು, ಫಾಲ್ಗುಣ ಮಾಸೆ, ಪೂರ್ವ ಫಾಲ್ಗುಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಇಂದು ಪೂರ್ವ ಫಾಲ್ಗುಣ ನಕ್ಷತ್ರ ಇದ್ದು ಇದರ ಅಧಿಪತಿ ಶುಕ್ರ ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಮಿತ್ರತ್ವದಲ್ಲಿ ಒಡಕು ಉಂಟಾಗುವ ಸಾಧ್ಯತೆ ಇರುತ್ತದೆ. ಆದರೆ ಬುದ್ದಿವಂತಿಕೆಯಿಂದ ಕೆಲಸ ಮಾಡಿದರೆ ಜಯ ಪ್ರಾಪ್ತಿಯಾಗುತ್ತದೆ.

ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಮನೆಯಲ್ಲಿ ಕಷ್ಟಕರವಾದ ದಿನವಾಗಿದೆ. ಪ್ರೀತಿ- ಪಾತ್ರರ ಜೊತೆ ಜಗಳ ಉಂಟಾಗುವ ಸಾಧ್ಯತೆ ಇದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಉತ್ತಮವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಕೆಲಸ ಕಾರ್ಯದಲ್ಲಿ ಜಯ ಪ್ರಾಪ್ತಿಯಾಗುತ್ತದೆ.

ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ ದಿನ ಭವಿಷ್ಯ:



ಕಟಕ ರಾಶಿ: ಕಟಕ ರಾಶಿ ಅವರಿಗೆ ಸಂಸಾರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗೂ ಮನೆಯವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಅತ್ಯುತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಕೆಲಸ ಕಾರ್ಯದಲ್ಲಿ ಗೌರವ ಪ್ರಾಪ್ತಿಯಾಗುತ್ತದೆ‌.

Vastu Tips: ತಪ್ಪಿಯೂ ಅಡುಗೆಮನೆಯಲ್ಲಿ ಇಂತಹ ಕೆಲಸ ಮಾಡಬೇಡಿ; ಆರೋಗ್ಯಕ್ಕೆ ಕುತ್ತು ಬರಬಹುದು

ಕನ್ಯಾ ರಾಶಿ : ಕನ್ಯಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಬೇರೆಯವರಿಂದ ಯಾವುದೇ ಸಹಕಾರ ನಿಮಗೆ ಪ್ರಾಪ್ತಿ ಯಾಗುವುದಿಲ್ಲ. ಮುಖ್ಯವಾದ ಯಾವುದೇ ನಿರ್ಧಾರಗಳನ್ನು ಮಾಡಲು ಹೋಗಬೇಡಿ.

ತುಲಾ ರಾಶಿ: ತುಲಾ ರಾಶಿಯವರಿಗೆ ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ದಿಯಾಗಲಿದೆ. ಧನ ಆಗಮನದ ಸೂಚನೆಗಳು ಕೂಡ ಇರಲಿದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಕಾರ್ಯ ಕ್ಷೇತ್ರದಲ್ಲಿ ತೊಂದರೆಗಳು ಉಂಟಾಗಲಿದೆ. ಆದರೆ ಇದನ್ನು ನಿಭಾಯಿಸಿಕೊಂಡು ಮುಂದುವರಿಯುತ್ತೀರಿ.

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಭಾಗ್ಯೋದಯವಾದ ದಿನವಾಗಿದೆ. ಆದರೆ ಹಿರಿಯರ ಆಶೀರ್ವಾದ ನಿಮಗೆ ಬಹಳ ಮುಖ್ಯವಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ನಿರ್ಧಾರಗಳು ಯಾವುದೇ ಬೇಡ. ತಾಳ್ಮೆಯಿಂದ ಎಲ್ಲರ ಜೊತೆ ನೀವು ವರ್ತಿಸಬೇಕಾಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಅತ್ಯುತ್ತಮವಾದ ದಿನವಾಗಿದೆ. ಇಂದು ಎಲ್ಲರಿಂದ ಸಹಕಾರ ಪ್ರಾಪ್ತಿಯಾಗುತ್ತದೆ. ಪ್ರೀತಿ ಪಾತ್ರರ ಜೊತೆ ಸುಖಕರವಾದ ದಿನವನ್ನು ನೀವು ಕಳೆಯಬಹುದು.

ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗಲಿದ್ದು ಅಂದು ಕೊಂಡ ಕೆಲಸ ಕಾರ್ಯದಲ್ಲಿ ಜಯ ಸಿಗುತ್ತದೆ.