ದಿನ ಭವಿಷ್ಯ, ಆಗಸ್ಟ್ 12, 2026: ಈ ರಾಶಿಯವರ ವೈಯಕ್ತಿಕ ಸಮಸ್ಯೆಗಳು ಇಂದು ದೂರವಾಗಲಿದೆ!
Horoscope Today August 12th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ಅಮಾವಾಸ್ಯ ತಿಥಿ, ಪುಷ್ಯ ನಕ್ಷತ್ರದ, ಆಗಸ್ಟ್ 12ನೇ ತಾರೀಖಿನ ಬುಧವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಇಂಟರ್‌ನೆಟ್ ಚಿತ್ರ -
ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ಪುಷ್ಯ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮನೆಯಲ್ಲಿ ಕಿರಿ- ಕಿರಿಯ ವಾತಾವರಣ ಇದೆ. ಕೆಲಸ ಕಾರ್ಯದಲ್ಲಿ ಯಾವುದೇ ಪ್ರಗತಿ ಇಂದು ಕಂಡು ಬರುವುದಿಲ್ಲ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದ್ದು ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಕೆಲಸ ಕಾರ್ಯದಲ್ಲಿ ಅಭಿವೃದ್ಧಿ ಹಾಗೂ ಬಂಧುಗಳ ಸಹಾಯ ಸಿಗುತ್ತದೆ. ಆತ್ಮವಿಶ್ವಾಸ ಕೂಡ ಚೆನ್ನಾಗಿ ಇರುತ್ತದೆ.
ಮಿಥುನ ರಾಶಿ: ಇಂದು ಈ ರಾಶಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ಕ್ಲೇಷ ಉಂಟಾಗಲಿದ್ದು ಆಲಸ್ಯತನವೂ ಇರಬಹುದು. ಸಂಜೆಯ ಸಮಯಕ್ಕೆ ಕೆಲಸ ಕಾರ್ಯದಲ್ಲಿ ಉತ್ಸಾಹ ಹೆಚ್ಚಬಹುದು.
ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ವೈಯಕ್ತಿಕವಾಗಿ ಇದ್ದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಮುಂದಿನ ದಿನಕ್ಕೆ ಉತ್ತಮ ಮಾರ್ಗದರ್ಶನ ಕೂಡ ಪ್ರಾಪ್ತಿಯಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮಿತ್ರರೂ ದೂರವಾಗಲಿದ್ದು ಬಂಧುಗಳು ದೂರವಾಗಬಹುದು. ಬಾಸ್ ಗಳಿಂದ ಕೂಡ ತೊಂದರೆ ಉಂಟಾಗುವ ಸಾಧ್ಯತೆ ಇದೆ.
Vastu Tips: ಮನೆಯ ಮುಖ್ಯ ಬಾಗಿಲು ಹೀಗಿದ್ದರೆ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ!
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಷ್ಟಾರ್ಥ ಸಿದ್ದಿಯಾಗಲಿದ್ದು ಅತ್ಯುತ್ತಮವಾದ ದಿನವಾಗಿದೆ. ಮಿತ್ರರಿಂದ ಧನಲಾಭವಾಗಲಿದ್ದು ಅಂದುಕೊಂಡ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತವೆ.
ತುಲಾ ರಾಶಿ: ತುಲಾ ರಾಶಿ ಅವರಿಗೆ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಹೆಚ್ಚಾಗಬಹುದು. ಆದರೆ ಮಾಡಿದ ಕೆಲಸಕ್ಕೆ ಪ್ರತಿಫಲಗಳು ಸಿಗದೆ ಇರಬಹುದು.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಭಾಗ್ಯೋದಯವಾದ ದಿನವಾಗಿದೆ. ಆದರೆ ಭಗವಂತನ ಹಾಗೂ ಹಿರಿಯರ ಆಶೀರ್ವಾದ ಬೇಕಾಗುತ್ತದೆ. ಇತರರ ಜೊತೆ ವಿನಯತೆಯಿಂದಲೂ ನಡೆದುಕೊಳ್ಳಬೇಕು
ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇಲ್ಲ, ಮುಖ್ಯವಾದ ವಿಚಾರದಲ್ಲಿ ಯಾವುದೇ ನಿರ್ಧಾರಗಳು ಬೇಡ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ನೆಮ್ಮದಿ. ಎಲ್ಲರ ಸಹಕಾರ ಇಂದು ಸಿಗುತ್ತದೆ.
ಕುಂಭ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಜಯ ಸಿಗುತ್ತದೆ.ಅದೇ ರೀತಿ ಶತ್ರುನಾಶ ಹಾಗೂ ಧ್ವಂಸವಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಆದರೆ ಬುದ್ದಿವಂತಿಕೆಯಿಂದ ಕೆಲಸ ಮಾಡಿದರೆ ಯಶಸ್ಸು ಸಿಗುತ್ತದೆ.