ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಸೆಪ್ಟೆಂಬರ್ 20, 2026: ಈ ರಾಶಿಗೆ ಸಂಬಂಧದಲ್ಲಿ ಮನಸ್ತಾಪ!

Horoscope Today September 20th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ಪೂರ್ವಾಷಢ ನಕ್ಷತ್ರದ, ಸೆಪ್ಟೆಂಬರ್ 20 ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಬಾಕಿ ಉಳಿದ ಕೆಲಸ ಪೂರ್ಣಗೊಳ್ಳಬಹುದು!

ಇಂಟರ್ ನೆಟ್ ಚಿತ್ರ -

Profile
Pushpa Kumari Sep 20, 2026 6:01 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಪೂರ್ವಾಷಢ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮನೆಯಲ್ಲಿ ಇಂದು ಮಾತಿನ ಚಕಮಕಿ ನಡೆಯಬಹುದು. ಹಾಗಾಗಿ ನೀವು ಮಾತನಾಡುವಾಗ ಇಂದು ಜಾಗೃತಿ ವಹಿಸಬೇಕಾಗುತ್ತದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದ್ದು ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಇಂದಿನಿಂದ ನಿಮ್ಮ ಪರಾಕ್ರಮಗಳು ಹೆಚ್ಚಾಗಬಹುದು. ಮಾಧ್ಯಮ ಹಾಗು ಸೋಶಿಯಲ್ ಮೀಡಿಯಾದಲ್ಲಿ ಇರೋರಿಗೆ ಲಾಭದಾಯಕವಾಗಿದೆ.

ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಶುಭ ಕಾರ್ಯಗಳು ಮನೆಯಲ್ಲಿ ನಡೆಯಲಿದ್ದು ಬಂಧು ಮಿತ್ರರಿಂದ ನೆಮ್ಮದಿ ಸಿಗುತ್ತದೆ. ಸುಖ- ಸಮೃದ್ಧಿ ಇಂದು ಹೆಚ್ಚು ಪ್ರಾಪ್ತಿಯಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಆದರೆ ಮಾತಿನಲ್ಲಿ ಇಂದು ತೊಂದರೆಯನ್ನು ಎಸುರಿಸಬೇಕಾಗಿ ಬರಬಹುದು.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಕೆಲಸ ಕಾರ್ಯಗಳನ್ನು ಮಾಡಬೇಡಿ. ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿಯೂ ಕೆಲವೊಂದು ತೊಂದರೆ ಎದುರಿಸಬೇಕಾಗಿ ಬರಬಹುದು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದ್ದು ಇಷ್ಟಾರ್ಥ ಸಿದ್ದಿಯಾಗಲಿದೆ. ಕಾರ್ಯಕ್ಷೇತ್ರದಲ್ಲಿಯೂ ಅಭಿವೃದ್ಧಿಯಾಗಲಿದೆ. ಬರವಣಿಗೆಗಾರರಿಗೆ ಹೆಚ್ಚಿನ ಯಶಸ್ಸು ಸಿಗುತ್ತದೆ.

ತುಲಾ ರಾಶಿ: ತುಲಾ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ದೊಡ್ಡದಾದ ತಿರುವು ಉಂಟಾಗುವ ಸಾಧ್ಯತೆ ಇರುತ್ತದೆ. ಕೆಲವೊಂದು ಕೆಲಸವನ್ನು ಯೋಚಿಸಿ ಮಾಡಬೇಕಾಗುತ್ತದೆ.

Vastu Tips: ಮನೆ ಖರೀದಿಸುವ ಮುನ್ನ ಈ ವಾಸ್ತು ನಿಯಮಗಳನ್ನು ತಿಳಿಯಿರಿ; ಇಲ್ಲವಾದರೆ ಎದುರಾಗಬಹುದು ಸಮಸ್ಯೆಗಳು!

ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಭಾಗ್ಯ ಸ್ಥಾನದಲ್ಲಿ ಗುರು ಇದ್ದಾನೆ. ಆದರೆ ಭಗವಂತನ ಹಾಗೂ ಹಿರಿಯರ ಆಶೀರ್ವಾದ ಬೇಕಾಗುತ್ತದೆ. ಅದೇ ರೀತಿ ವಿನಯತೆಯಿಂದಲೂ ನಡೆದುಕೊಳ್ಳಬೇಕಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇಲ್ಲ, ಕೆಲವು ಸಣ್ಣ ಪುಟ್ಟ ತೊಂದರೆಗಳು ನಿಮಗೆ ಎದುರಾಗಬಹುದು‌

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ನೆಮ್ಮದಿ ಇರುತ್ತದೆ.ಆದರೆ ಕೆಲವೊಂದು ಭಿನ್ನಾಭಿಪ್ರಾಯವನ್ನು ನೀವು ಸರಿಪಡಿಸಲೇ ಬೇಕಾಗುತ್ತದೆ.

ಕುಂಭ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ಶತ್ರುಗಳನ್ನು ಹಿಮ್ಮೆಟ್ಟಬಹುದು. ಕೆಲಸ ಕಾರ್ಯದಲ್ಲೂ ಹೆಚ್ಚಿನ ಯಶಸ್ಸು ಸಿಗುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ನಿಮ್ಮ‌ ಕ್ರಿಯಾತ್ಮಕ ಕೆಲಸದಲ್ಲಿ ಯಶಸ್ಸು ಕಾಣುತ್ತೀರಿ. ಆದರೆ ಕೆಲವೊಂದು ಕೆಲಸವನ್ನು ಯೋಚಿಸಿ ಮಾಡಿ.