ದಿನ ಭವಿಷ್ಯ ನವೆಂಬರ್ 6, 2026: ಹಣದ ವಿಚಾರದಲ್ಲಿ ಜಗಳವಾಗಲಿದೆ, ಯಾರಿಗೂ ಸಾಲ ನೀಡಬೇಡಿ
Horoscope Today November 6: ಕಾರ್ತಿಕ ಮಾಸ, ಕೃಷ್ಣ ಪಕ್ಷ, ದ್ವಾದಶಿಯ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.
ಚಾಟ್ಜಿಪಿಟಿ ರಚಿತ ಚಿತ್ರ -
ಬೆಂಗಳೂರು: ನವೆಂಬರ್ 6ರ ಈ ದಿನ ಗ್ರಹಗಳ ಚಲನೆಯ ಆಧಾರದ ಮೇಲೆ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ. ಇಂದು ಕೆಲವರಿಗೆ ಉದ್ಯೋಗದಲ್ಲಿ ಪ್ರಗತಿ ಕಂಡುಬಂದರೆ, ಇನ್ನು ಕೆಲವರಿಗೆ ಆರ್ಥಿಕ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಸಮಸ್ಯೆ ಪರಿಹಾರಕ್ಕೆ ಲಕ್ಷ್ಮೀ ದೇವಿಗೆ ಬಿಳಿ ಹೂವು ಅಥವಾ ಅಕ್ಕಿ-ಬೆಲ್ಲ ಕೊಡಿ. ಸಂಜೆ ದೀಪ ಹಚ್ಚಿ.
ಮೇಷ ರಾಶಿ: ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಯತ್ನಕ್ಕೆ ಮೆಚ್ಚುಗೆ ದೊರೆಯಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ಗಮನ ಕೊಡಿ. ನಿಮ್ಮ ಹಳೆಯ ತಪ್ಪನ್ನು ಇಂದು ಯಾರೋ ನೆನಪಿಸುತ್ತಾರೆ. ಟೆನ್ಷನ್ ಬೇಡ, ಕ್ಷಮೆ ಕೇಳಿದರೆ ಎಲ್ಲ ಮುಗಿಯುತ್ತೆ.
ವೃಷಭ ರಾಶಿ: ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ ಸಿಗಲಿದೆ. ಹೊಸ ಕೆಲಸ ಆರಂಭಿಸಲು ಉತ್ತಮ ಅವಕಾಶ ದೊರೆಯಲಿದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಹೊಸ ಡ್ರೆಸ್, ಹೇರ್ ಕಟ್ ಮಾಡಿದರೆ ಸೂಪರ್ ಆಗಿ ಕಾಣ್ತೀರಿ.
ಮಿಥುನ ರಾಶಿ: ಕೆಲಸದಲ್ಲಿ ಹೊಸ ಜವಾಬ್ದಾರಿ ಎದುರಾಗಬಹುದು. ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಸ್ನೇಹಿತರ ಸಹಕಾರದಿಂದ ಸಮಸ್ಯೆ ಬಗೆಹರಿಯಲಿದೆ. ಹಣದ ವಿಚಾರದಲ್ಲಿ ಜಗಳ ಬೇಡ. ಸಾಲ ಕೊಡುವಾಗ ಯೋಚಿಸಿ. ಯುಪಿಐ ಬಳಸುವಾಗ ಎಚ್ಚರ.
ಕಟಕ ರಾಶಿ: ಕುಟುಂಬದ ವಿಚಾರದಲ್ಲಿ ನೆಮ್ಮದಿ ದೊರೆಯಲಿದೆ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ ಸಾಧ್ಯತೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.
ಸಿಂಹ ರಾಶಿ: ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಂಡು ಬರಲಿದೆ. ಹಿರಿಯರ ಸಲಹೆ ಪಡೆದು ನಿರ್ಧಾರ ಕೈಗೊಳ್ಳಿ.
ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸಬೇಕೆ? ಶುಕ್ರವಾರ ಈ 5 ಆಚರಣೆಗಳನ್ನು ತಪ್ಪದೇ ಪಾಲಿಸಿ
ಕನ್ಯಾ ರಾಶಿ: ಕೆಲವು ಕೆಲಸಗಳು ವಿಳಂಬವಾಗಬಹುದು. ತಾಳ್ಮೆಯಿಂದ ವರ್ತಿಸಿದರೆ ಯಶಸ್ಸು. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ. ನಿಮ್ಮ ಕ್ರಶ್ ಜತೆ ಮಾತನಾಡಲು ಒಳ್ಳೆಯ ದಿನ.
ತುಲಾ ರಾಶಿ: ಇಂದು ನಿಮಗೆ ಉತ್ತಮ ದಿನವಾಗಿರಲಿದೆ. ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಅವಕಾಶಗಳ ಸಾಧ್ಯತೆ. ಪ್ರೀತಿಪಾತ್ರರೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುವಿರಿ.
ವೃಶ್ಚಿಕ ರಾಶಿ: ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆಯಿದೆ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.
ಧನು ರಾಶಿ: ಹೊಸ ಯೋಜನೆಗಳನ್ನು ರೂಪಿಸಲು ಉತ್ತಮ ದಿನ. ದೂರ ಪ್ರಯಾಣದ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಬರಲಿದೆ.
ಮಕರ ರಾಶಿ: ಕೆಲಸದ ಒತ್ತಡ ಹೆಚ್ಚಾಗಬಹುದು. ಆದರೂ ನಿಮ್ಮ ಕಾರ್ಯಕ್ಷಮತೆಯಿಂದ ಯಶಸ್ಸು ಸಾಧಿಸುವಿರಿ. ಹಣದ ವಿಚಾರದಲ್ಲಿ ಆತುರದ ನಿರ್ಧಾರ ಬೇಡ.
ಕುಂಭ ರಾಶಿ: ಸ್ನೇಹಿತರಿಂದ ಸಹಾಯ ದೊರೆಯಲಿದೆ. ಉದ್ಯೋಗದಲ್ಲಿ ಹೊಸ ಅವಕಾಶ ಸಿಗಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ನಡೆಯಬಹುದು. ನಿಮ್ಮ ಐಡಿಯಾವನ್ನು ಕದಿಯುವ ಸಾಧ್ಯತೆ.
ಮೀನ ರಾಶಿ: ಇಂದು ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಉತ್ತಮ ಬೆಳವಣಿಗೆಯ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಹರಿಸಿ. ಕನಸಿನಲ್ಲಿ ಕಂಡಿದ್ದು ನಿಜವಾಗುವ ಸಾಧ್ಯತೆ.