ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಎಪ್ರಿಲ್ 10, 2026: ಮೀನ ರಾಶಿಗೆ ಬುಧನ ಪ್ರವೇಶ: ಯಾರಿಗೆ ಒಳಿತು?

Horoscope Today April 10: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ, ಅಷ್ಟಮಿ ತಿಥಿ, ಪೂರ್ವಾಷಡ ನಕ್ಷತ್ರದ ಎಪ್ರಿಲ್ 10ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಈ ರಾಶಿಗೆ ಇಂದು ಕೆಲಸ ಕಾರ್ಯದಲ್ಲಿ ಪ್ರಮುಖ ಬದಲಾವಣೆ!

ಸಂಗ್ರಹ ಚಿತ್ರ -

Profile
Pushpa Kumari Apr 10, 2026 6:00 AM

ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ,ವಸಂತ ಋತು ಚೈತ್ರ ಮಾಸೆ, ಪೂರ್ವಷಾಡ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಇಂದು ಮೀನ ರಾಶಿಗೆ ಬುಧ ಪ್ರವೇಶ ಮಾಡು ತ್ತಿದ್ದಾನೆ. ಮೇಷ ರಾಶಿಯವರಿಗೆ ಕಷ್ಟಕರವಾದ ದಿನವಾಗಿದ್ದು ಮಿತ್ರರು ನಿಮ್ಮಿಂದ ದೂರವಾಗಬಹುದು .ಆದರೆ ಬುಧ ನಿಮಗೆ ಒಳಿತು ಮಾಡಬಹುದು.

ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಎಲ್ಲದರಲ್ಲೂ ಜಯ ಸಿಗುತ್ತದೆ. ಆದರೆ ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿ ಇರಬೇಕು‌

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಸಿಗಬಹುದಿತ್ತು. ಆದರೆ ನಿಮ್ಮ ಮಾತಿನಿಂದ ಇದು ಕೈ ತಪ್ಪಿ ಹೋಗುವ ಸಾಧ್ಯತೆ ಇದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದ್ದು ಯಶಸ್ಸು ಸಿಗುತ್ತದೆ. ನಿಮ್ಮ ಮಾತಿನಿಂದ ನೀವು ಇಂದು ಗೆಲುವನ್ನು ಹೆಚ್ಚಿಸುವ ಸಾಧ್ಯತೆ ಇರುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮನಸ್ಸಿಗೆ ನೆಮ್ಮದಿ ಪ್ರಾಪ್ತಿ ಯಾಗುತ್ತದೆ. ನೀವು ಅಂದುಕೊಂಡಷ್ಟು ಮಟ್ಟದಲ್ಲಿ ಉತ್ತಮ ಫಲ ಸಿಗದೇ ಇದ್ದರೂ ಮುಖ್ಯವಾದ ಕೆಲವು ಕೆಲಸದಲ್ಲಿ ಗೆಲುವು ಸಿಗಬಹುದು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ನಿಮ್ಮ ಮಾತಿನಿಂದ ತೊಂದರೆಯಾಗಬಹುದು. ಇತರರು ನಿಮ್ಮನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇರುತ್ತದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಉತ್ತಮ ಆತ್ಮವಿಶ್ವಾಸ ನಿಮಗೆ ಸಿಗಬಹುದು.

Vastu Tips: ಮನೆಗೆ ಶುಭ ತರೋ ಲಿವಿಂಗ್ ರೂಮ್ ವಾಸ್ತು ಹೇಗಿರಬೇಕು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಹಣಕಾಸಿನ ವಿಚಾರವಾಗಿ ಕಷ್ಟ ಉಂಟಾಗುವ ಸಾಧ್ಯತೆ ಇರುತ್ತದೆ. ಕೋರ್ಟ್, ಡ್ಯಾಕುಮೆಂಟ್ ವಿಚಾರವಾಗಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು.

ಧನಸ್ಸು ರಾಶಿ: ಧನಸ್ಸು ರಾಶಿಗೆ ಕುಟುಂಬದ ನೆಮ್ಮದಿ, ಕುಟುಂಬದ ಜನರ ಬಗ್ಗೆ ಯೋಚನೆ ಮಾಡುವ ದಿನವಾಗಿದೆ. ಹಾಗಾಗಿ ಎಲ್ಲವನ್ನು ನೀವು ನಿಭಾಯಿಸಬೇಕಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದೆ‌.ಆದರೆ ಮಾತು ಬಹಳ ಮುಖ್ಯ ವಾಗಲಿದ್ದು ಮಿತಿ ಮೀರಿದರೆ ಎಲ್ಲವನ್ನು ಕಳೆದುಕೊಳ್ಳಬಹುದು‌

ಕುಂಭರಾಶಿ: ಈ ರಾಶಿಯವರಿಗೆ ಮನೆಯಲ್ಲಿ ಸಂತಸ ಸಂಸಾರ ದಲ್ಲಿ ಖುಷಿ ಸಿಗುತ್ತದೆ.ಅಂದು ಕೊಂಡ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತದೆ.

ಮೀನ ರಾಶಿ: ಮೀನ ರಾಶಿಗೆ ಚಂದ್ರ ಬಂದಿರುವುದರಿಂದ ನಿಮ್ಮ ಮಾತಿನಿಂದ ಸಮಸ್ಯೆ ಬೀರಬಹುದು.ಆದರೆ ಸರಿಯಾದ ರೀತಿಯಲ್ಲಿ ಅರ್ಥೈಸಿಕೊಳ್ಳುವ ಮೂಲಕ ನಿರ್ಧಾರ ತೆಗೆದು ಕೊಳ್ಳಬೇಕು.