ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಮೇ 7, 2026: ಈ ರಾಶಿಯವರಿಗೆ ಇಂದು ಗಜಕೇಸರಿ ಯೋಗ; ಮುಟ್ಟಿದ್ದೆಲ್ಲ ಚಿನ್ನ

Horoscope Today May 7th 2026: ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣಪಕ್ಷ, ಪಂಚಮಿ ತಿಥಿ, ಪೂರ್ವಾಷಾಡ ನಕ್ಷತ್ರದ ಮೇ 7ನೇ ತಾರೀಕಿನ ಗುರುವಾರದ ಈ ದಿನ ಯಾವ ರಾಶಿಯವರಿಗೆ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಈ ರಾಶಿಯವರಿಗೆ ಇಂದು ಧನ ಲಾಭ ಪ್ರಾಪ್ತಿ

ಇಂಟರ್‌ನೆಟ್ ಚಿತ್ರ -

Profile
Pushpa Kumari May 7, 2026 6:10 AM

ಬೆಂಗಳೂರು, ಮೇ 7: ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಪಂಚಮಿ ತಿಥಿ, ಪೂರ್ವಾಷಾಡ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಧನು ರಾಶಿಯಲ್ಲಿ ಚಂದ್ರ ಇರುವುದರಿಂದ ಅನೇಕ ರಾಶಿಗಳಿಗೆ ಇಂದು ಗಜ ಕೇಸರಿ ಯೋಗ ಇರಲಿದೆ. ಮೇಷ ರಾಶಿಗೆ ಇಂದು ಉತ್ತಮ ದಿನವಾಗಲಿದ್ದು, ಹಿರಿಯರಿಂದ ಹೆಚ್ಚಿನ ಆಶೀರ್ವಾದ ನಿಮಗೆ ಪ್ರಾಪ್ತಿಯಾಗಲಿದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ನೀವು ಆಡುವ ಮಾತಿನಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಇತರರಿಂದ ಟೀಕೆ ಎದುರಿಸಬೇಕಾಗಿ ಬರಬಹುದು.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಇಂದು ಉತ್ತಮ ದಿನವಾಗಲಿದೆ. ಅತೀ ಶ್ರೇಷ್ಠ ಗಜಕೇಸರಿ ಯೋಗ ನಿಮಗೆ ಇರಲಿದ್ದು, ಯಶಸ್ಸು ಸಿಗುತ್ತದೆ.‌ ನಿಮ್ಮ ಪ್ರೀತಿ ಪಾತ್ರರ ಜತೆ ಬಹಳ ಮುಖ್ಯವಾದ ನಿರ್ಧಾರ ಇಂದು ಮಾಡಲಿದ್ದೀರಿ.

ಕಟಕ ರಾಶಿ: ಕಟಕ ರಾಶಿಯವರಿಗೆ ತೊಂದರೆಗಳು ಜಾಸ್ತಿಯಾಗುವ ಸಾಧ್ಯತೆ ಇದೆ. ವೈರಿಗಳಿಂದ ತಾಪತ್ರಯ ಅತಿ ಹೆಚ್ಚಾಗಿ ಕಾಡಬಹುದು. ವಿನಯತೆಯಿಂದ ಎಲ್ಲರ ಜತೆ ವರ್ತಿಸಬೇಕಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ವ್ಯವಹಾರದಲ್ಲಿ ನಷ್ಟ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಚಾರವಾಗಿ ಜಾಗೃತಿ ವಹಿಸಿದರೆ ಒಳಿತು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮನೆಯಲ್ಲಿ ಇಂದು ಮುಖ್ಯ ಘಟನೆ ನಡೆಯಬಹುದು. ಅದೇ ರೀತಿ ಸಂಸಾರದಲ್ಲಿ ದೊಡ್ಡದಾದ ತಿರುವು ದೊರೆಯಲಿದೆ. ಮನಸ್ಸಿಗೆ ಹೆಚ್ಚಿನ ಖುಷಿ ಸಿಗುತ್ತದೆ.

ಈ ದಿಕ್ಕಿನಲ್ಲಿ ಮಲಗಿದ್ರೆ ಜೀವಕ್ಕೆ ಆಪತ್ತು ಕಟ್ಟಿಟ್ಟ ಬುತ್ತಿ ಎನ್ನುತ್ತದೆ ವಾಸ್ತು ಶಾಸ್ತ್ರ

ತುಲಾ ರಾಶಿ: ತುಲಾ ಅವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗಲಿದ್ದು, ಬೇರೆಯವರಿಂದ ಸಹಕಾರ ಪ್ರಾಪ್ತಿಯಾಗುತ್ತದೆ.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮನೆಯಲ್ಲಿ ನೆಮ್ಮದಿ ಸಿಗಲಿದ್ದು ಶುಭ ಸಮಾರಂಭಗಳು ನಡೆಯುವ ಸಾಧ್ಯತೆ ಇದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಗಜಕೇಸರಿ ಯೋಗ ಇರಲಿದೆ. ಜೀವನದಲ್ಲಿ ಮುಖ್ಯವಾದ ತಿರುವು ಸಿಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದೆ.

ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಅದೇ ರೀತಿ ಪಾರ್ಟನರ್‌ಶಿಪ್‌ ವ್ಯವಹಾರದಲ್ಲಿ ತೊಂದರೆ ಎದುರಾಗಬಹುದು.

ಕುಂಭರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ‌‌. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು ಆರ್ಥಿಕ ಲಾಭ ಗಳಿಸುತ್ತೀರಿ.

ಮೀನ ರಾಶಿ: ಮೀನ ರಾಶಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ. ಮುಖ್ಯವಾದ ಮೈಲಿಗಲ್ಲನ್ನು ಇಂದು ನೀವು ಪಡೆಯಲಿದ್ದೀರಿ.