ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಮೇ 16, 2026: ಈ ರಾಶಿಯವರಿಗೆ ಇಂದು ಕಾರ್ಯಕ್ಷೇತ್ರದ ಜವಾಬ್ದಾರಿಗಳು ಹೆಚ್ಚಳ!

Horoscope Today May 16th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣಪಕ್ಷದ, ಅಮಾವಾಸ್ಯ ತಿಥಿ, ಭರಣಿ ನಕ್ಷತ್ರದ ಮೇ 16ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಈ ರಾಶಿಯವರಿಗೆ ಇಂದು ಕೆಲಸ ಕಾರ್ಯದಲ್ಲಿ ಮುನ್ನಡೆ!

ಸಂಗ್ರಹ ಚಿತ್ರ -

Profile
Pushpa Kumari May 16, 2026 6:10 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯ ತಿಥಿ, ಭರಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗಲಿದ್ದು ಇಷ್ಟಾರ್ಥ ಸಿದ್ದಿಯಾಗುತ್ತದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ಸಮಸ್ಯೆ ಎಲ್ಲವೂ ಇಂದು ಪರಿಹಾರವಾಗುತ್ತದೆ.

ವೃಷಭ ರಾಶಿ: ಈ ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ನಿರ್ಧಾರಗಳು ಬೇಡ. ಯಾರು ಕೂಡ ಇಂದು ನಿಮ್ಮ ಪರವಾಗಿ ಮಾತನಾಡದೇ ಇರಬಹುದು‌

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಇಷ್ಟಾರ್ಥ ಸಿದ್ದಿಯಾಗಲಿದ್ದು ಗುಂಪು ಕೆಲಸದಿಂದ ಧನ ಲಾಭವಾಗುತ್ತದೆ. ಕೆಲಸ ಕಾರ್ಯದಲ್ಲಿ ಅತೀ ಹೆಚ್ಚಿನ ಯಶಸ್ಸು ಸಿಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಇಷ್ಟಾರ್ಥ ಸಿದ್ದಿ ಯಾಗಲಿದ್ದು ಕಾರ್ಯಕ್ಷೇತ್ರದ ಜವಾಬ್ದಾರಿ ಹೆಚ್ಚಾಗುತ್ತದೆ. ಜವಾಬ್ದಾರಿಯುತವಾಗಿ ನೀವು ಕೆಲಸ ಪೂರೈಸಬೇಕಾಗುತ್ತದೆ.

Vastu Tips: Vastu Tips: ಈ ವಾಸ್ತು ನಿಯಮಗಳನ್ನು ಪಾಲಿಸಿದ್ರೆ ಮನೆಯಲ್ಲಿ ಅತ್ತೆ-ಸೊಸೆ ಜಗಳವೇ ಇರೊಲ್ಲ!

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಇಷ್ಟಾರ್ಥ ಸಿದ್ದಿಯಾಗಲಿದ್ದು ಭಾಗ್ಯೋದಯವಾದ ದಿನವಾಗಿದೆ. ಮನಸ್ಸಿನಲ್ಲಿದ್ದ ನೋವುಗಳಿಗೆ ಇಂದು ಪರಿಹಾರ ಸಿಗುವ ದಿನವಾಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಮನಸ್ಸಿಗೆ ನೋವು ತರುವ ದಿನವಾಗಿದೆ. ಯಾವುದೇ ಮುಖ್ಯ ನಿರ್ಧಾರ ಮಾಡಲು ಹೋಗಬೇಡಿ.ಪ್ರೇಮ ,ಪ್ರೀತಿ ಪ್ರಕರಣದಲ್ಲಿ ಸೋಲು ಉಂಟಾಗಬಹುದು.

ತುಲಾ ರಾಶಿ: ತುಲಾ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಎಲ್ಲರ ಸಹಕಾರ ಪ್ರಾಪ್ತಿಯಾಗುತ್ತದೆ.

ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಶತ್ರುಗಳು ಹಿಮ್ಮೆಟ್ಟಬಹುದು. ಕಾರ್ಯಕ್ಷೇತ್ರದಲ್ಲಿ ಕೂಡ ಅತೀ ಹೆಚ್ಚಿನ ಯಶಸ್ಸು ನಿಮ್ಮದಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಕಷ್ಟಕರವಾದ ದಿನ ವಾಗಿದೆ. ಮುಖ್ಯವಾದ ಕೆಲಸ ಕಾರ್ಯದಲ್ಲಿ ಮನಸ್ಸಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ತೊಂದರೆಗಳು ಎದುರಿಸಬೇಕಾಗಿ ಬರಬಹುದು. ಬಿಸೆನೆಸ್ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇದೆ‌

ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಕಾಣುತ್ತೀರಿ.

ಮೀನ ರಾಶಿ: ಮೀನ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಆದರೆ ಮನೆಯ ಬಗ್ಗೆ ಹೆಚ್ಚಿನ ಜವಾಬ್ದಾರಿಯನ್ನು ನೀವು ವಹಿಸಬೇಕಾಗುತ್ತದೆ.