ದಿನ ಭವಿಷ್ಯ, ಮಾರ್ಚ್ 16, 2026: ಕುಜನ ಆಶೀರ್ವಾದದಿಂದ ಈ ರಾಶಿಯವರಿಗೆ ಅಪಾರ ಸಂಪತ್ತು ಭಾಗ್ಯ
Horoscope Today March 16: ಇಂದು ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ, ಶರದೃತು ಫಾಲ್ಗುಣ ಮಾಸೆ, ಕೃಷ್ಣೆ ಪಕ್ಷದ, ದ್ವಾದಶಿ ತಿಥಿ, ದನಿಷ್ಠ ನಕ್ಷತ್ರದ ಮಾರ್ಚ್ 16ನೇ ತಾರೀಖಿನ ಸೋಮವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ..
ಇಂಟರ್ ನೆಟ್ ಚಿತ್ರ -
ಬೆಂಗಳೂರು: ಇಂದು ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ ಶರದೃತು, ಫಾಲ್ಗುಣ ಮಾಸೆ, ದನಿಷ್ಠ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ದನಿಷ್ಠ ನಕ್ಷತ್ರದ ಅಧಿಪತಿ ಕುಜ ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಮೇಷ ರಾಶಿಯವರಿಗೆ ಮಧ್ಯಾಹ್ನವರೆಗೂ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಹೆಚ್ಚು ಇರುತ್ತದೆ. ಮಧ್ಯಾಹ್ನ ಬಳಿಕ ಮಿತ್ರರ ಜೊತೆ ಸಂತೋಷವಾದ ದಿನವನ್ನು ನೀವು ಕಳೆಯಲಿದ್ದೀರಿ.
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಕಷ್ಟಕರವಾದ ದಿನವಾಗಿದೆ. ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು, ಲಾಭ ಗಳಿಸಬಹುದು
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಮಧ್ಯಾಹ್ನ ವರೆಗೂ ಮನಸ್ಸಿಗೆ ನೋವು ತರುವ ದಿನವಾಗಿದೆ. ಮಧ್ಯಾಹ್ನ ಬಳಿಕ ನಿಮಗೆ ಇದ್ದಂತಹ ತೊಂದರೆಗಳು ಪರಿಹಾರವಾಗುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ನಾನಾ ರೀತಿಯ ಯೋಚನೆಗಳು ಕಾಡಬಹುದು. ನಿಮ್ಮ ಪ್ರೀತಿ ಪಾತ್ರರಿಂದಲೇ ಬೇಸರ ಉಂಟಾಗಬಹುದು.
ಸಿಂಹ ರಾಶಿ: ಸಿಂಹ ರಾಶಿಯವರು ಮಧ್ಯಾಹ್ನವರೆಗೂ ಸಾಮಾಜಿಕ ಚಟುವಟಿಕೆಯಲ್ಲಿ ಬ್ಯುಸಿ ಇರುತ್ತೀರಿ. ಮಧ್ಯಾಹ್ನ ಬಳಿಕ ಪ್ರೀತಿ ಪಾತ್ರರ ಜೊತೆ ಉತ್ತಮ ದಿನ ಕಳೆದು ಖುಷಿಯಿಂದ ಇರುತ್ತೀರಿ.
Vastu Tips: ಮನೆಯಲ್ಲಿನ ನಕಾರಾತ್ಮಕ ಶಕ್ತಿ ದೂರವಾಗಬೇಕಾ? ಈ ಸರಳ ವಾಸ್ತು ವಿಧಾನಗಳನ್ನು ಅನುಸರಿಸಿ
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮಧ್ಯಾಹ್ನವರೆಗೂ ಕಾರ್ಯಕ್ಷೇತ್ರದಲ್ಲಿ ತೊಂದರೆ ಆಗಬಹುದು. ಮಧ್ಯಾಹ್ನ ಬಳಿಕ ಎಲ್ಲ ತೊಂದರೆ ಬಗೆಹರಿದು ಇದ್ದಂತಹ ತೊಂದರೆಗಳಿಗೆ ಪರಿಹಾರ ಸಿಗುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.
ತುಲಾ ರಾಶಿ: ತುಲಾ ರಾಶಿಯವರಿಗೆ ಮಧ್ಯಾಹ್ನವರೆಗೂ ನಾನಾ ರೀತಿಯ ಯೋಚನೆಗಳು ಕಾಡಬಹುದು. ಮಧ್ಯಾಹ್ನ ಬಳಿಕ ನಿಮ್ಮ ಕ್ರಿಯಾತ್ಮಕ ಕೌಶಲ್ಯ ಮೂಲಕ ಯಶಸ್ಸು ಕಾಣುತ್ತೀರಿ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಮಧ್ಯಾಹ್ನವರೆಗೂ ನೀವು ಹೇಳಿದಂತೆ ಎಲ್ಲವೂ ನಡೆಯುತ್ತದೆ. ಮಧ್ಯಾಹ್ನ ಬಳಿಕ ನಿಮ್ಮ ಸಂಸಾರದಲ್ಲಿ ಕಲಹ ಉಂಟಾಗುವ ಸಾಧ್ಯತೆ ಇರುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಮಧ್ಯಾಹ್ನ ಸಂಸಾರದ ವಿಚಾರದಲ್ಲಿ ಯೋಚನೆ ಇರುತ್ತದೆ. ಆದರೆ ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ಕಾಣುತ್ತೀರಿ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ನಿಮ್ಮ ಕುಟುಂಬದ ಜೊತೆ ನೀವು ಇಂದು ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ.
ಕುಂಭರಾಶಿ: ಈ ರಾಶಿಯವರಿಗೆ ಮಧ್ಯಾಹ್ನ ವರೆಗೂ ನಾನಾ ರೀತಿಯ ಯೋಚನೆಗಳು ಕಾಡಬಹುದು. ಮಧ್ಯಾಹ್ನ ಬಳಿಕ ಚಂದ್ರ ನಿಮ್ಮ ರಾಶಿ ಪ್ರವೇಶ ಮಾಡುವುದರಿಂದ ನಿಮಗೆ ಒಳಿತು ಆಗುತ್ತದೆ.
ಮೀನ ರಾಶಿ: ಮೀನ ರಾಶಿಗೆ ಮಧ್ಯಾಹ್ನ ಉತ್ತಮವಾದ ದಿನವಾಗಿದೆ. ಆದರೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಜಾಗೃತೆ ವಹಿಸಬೇಕು.