ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಮಾರ್ಚ್ 14, 2026: ಇಂದು ಹಣ ವ್ಯಯ ಆಗುವ ಸಾಧ್ಯತೆ ಅಧಿಕ

Horoscope Today March 14: ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಶರದೃತು, ಫಾಲ್ಗುಣ ಮಾಸೆ, ಕೃಷ್ಣೆ ಪಕ್ಷದ, ಏಕಾದಶಿ ತಿಥಿ, ಉತ್ತರಾಷಾಢ ನಕ್ಷತ್ರದ ಮಾರ್ಚ್ 14ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಈ ರಾಶಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಪ್ರಮೋಷನ್ ಸಿಗುವ ಸಾಧ್ಯತೆ!

ಇಂಟರ್ನೆಟ್ ಚಿತ್ರ -

Profile
Pushpa Kumari Mar 14, 2026 7:00 AM

ಬೆಂಗಳೂರು, ಮಾ. 14: ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ, ಶರದೃತು, ಫಾಲ್ಗುಣ ಮಾಸೆ, ಉತ್ತರಾಷಾಢ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ಮೇಷ ರಾಶಿ: ಇಂದು ಉತ್ತರಾಷಾಢ ನಕ್ಷತ್ರ ಇದ್ದು, ರವಿ ಮೀನ ರಾಶಿಯನ್ನು ಪ್ರವೇಶ ಮಾಡುತ್ತಿದ್ದಾನೆ. ಹಾಗಾಗಿ ಹೆಚ್ಚಿನವರ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಕಷ್ಟದದ ದಿನವಾಗಲಿದೆ. ನಿಮಗೆ ಬೇಕಾದಂತಹ ಕೆಲಸ ಕಾರ್ಯಗಳು ನಡೆಯದೆ ಇರಬಹುದು. ಹಣ ವ್ಯಯ ಆಗುವ ಸಾಧ್ಯತೆಗಳು ಇದೆ.

ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಉತ್ತಮವಾದ ಫಲ ಗೋಚರವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಎಲ್ಲೇ ಹೋದರು ನಿಮಗೆ ಹೆಚ್ಚು ಗೌರವ ಪ್ರಾಪ್ತಿಯಾಗುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಕಾರ್ಯ ಕ್ಷೇತ್ರದಲ್ಲಿ ಯಶಸ್ಸು ಕಾಣ ಸಿಗಲಿದೆ. ಕೆಲಸದಲ್ಲಿ ಗೌರವ, ಬಡ್ತಿ ಸಿಗುವ ಸಾಧ್ಯತೆ ಇದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಕಾಣುತ್ತೀರಿ.

ಕಟಕ ರಾಶಿ: ಕಟಕ ರಾಶಿಯವರಿಗೆ ಅದೃಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹಿಂದಿನ ದಿನದಲ್ಲಿ ಇದ್ದ ನೋವೆಲ್ಲ ಮಾಯವಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟ ಗೋಚರವಾಗುತ್ತದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮುಖ್ಯವಾದ ವಿಚಾರದಲ್ಲಿ ಯಾವುದೇ ನಿರ್ಧಾರ ಮಾಡಲು ಇಂದು ಹೋಗುವುದು ಒಳಿತಲ್ಲ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ದಾಂಪತ್ಯ ಹಾಗೂ ಪ್ರೀತಿ-ಪ್ರೇಮ ವಿಚಾರದಲ್ಲಿ ಕಲಹ ಉಂಟಾಗುವ ಸಾಧ್ಯತೆ ಇದೆ. ವ್ಯವಹಾರದಲ್ಲೂ ಒಡಕು ಕಾಣುವ ಸಾಧ್ಯತೆ ಇದೆ.

ನಿಮ್ಮ ಮನೆಯ ವಾಶ್ ರೂಮ್‌ನಲ್ಲಿರುವ ಈ ಬಣ್ಣದ ಬಕೆಟ್ ವಾಸ್ತುದೋಷಕ್ಕೆ ಕಾರಣವಾಗಬಹುದು

ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಬಹುದು. ಹಾಗಾಗಿ ಬಹಳ ವಿನಯಪೂರ್ವಕವಾಗಿ ನೀವು ವ್ಯವಹಾರವನ್ನು ಮಾಡಬೇಕಾಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಮಿಶ್ರ ಫಲ ಗೋಚರವಾಗುತ್ತದೆ. ನಿಮ್ಮ ಕ್ರಿಯಾತ್ಮಕತೆ ಹೆಚ್ಚಿದ್ದರೂ ಯಾರಿಂದಲೂ ಪ್ರಶಂಸೆ ವ್ಯಕ್ತವಾಗದೇ ಇರಬಹುದು. ಇನ್ನು ಮಕ್ಕಳು ಇರುವ ಪೋಷಕರು ಅತೀ ಎಚ್ಚರಿಕೆ ವಹಿಸಬೇಕಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಯಾವುದೇ ಹೊಸ ನಿರ್ಧಾರ ಮಾಡಲು ಹೋಗಬೇಡಿ. ತಾಯಿಯ ಆರೋಗ್ಯ ಹಾಗೂ ಸಂಸಾರದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಬಂಧು ಬಾಂಧವರಿಂದ ಉತ್ತಮ ಸಹಕಾರ ವ್ಯಕ್ತವಾಗುತ್ತದೆ. ಮಾಧ್ಯಮದಲ್ಲಿ ಇರೋರಿಗೆ ಅತೀ ಉತ್ತಮ ದಿನವಾಗಲಿದೆ.

ಕುಂಭರಾಶಿ: ಈ ರಾಶಿಯವರಿಗೆ ಸಂಸಾರದ ಬಗ್ಗೆ ನೀವು ಹೆಚ್ಚು ಯೋಚಿಸಬೇಕಾಗುತ್ತದೆ. ಹಾಗೆಯೇ ಹಣ ಕಾಸಿನ ವ್ಯವಹಾರ ಬಗ್ಗೆ ಯೂ ಯೋಚನೆ ಮಾಡಬೇಕಾಗುತ್ತದೆ.

ಮೀನ ರಾಶಿ: ಮೀನ ರಾಶಿಗೆ ನಿಮ್ಮ ರಾಶಿಗೆ ರವಿ ಪ್ರವೇಶ ಮಾಡುವುದರಿಂದ ಉತ್ತಮ ದಿನವಾಗಲಿದೆ. ಆದರೆ ನಿಮಗೆ ಆಸಕ್ತಿ ಇರುವ ಕೆಲಸದಲ್ಲಿ ಮಾತ್ರ ಪಾಲ್ಗೊಳ್ಳಬೇಕಾಗುತ್ತದೆ.