ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಎಪ್ರಿಲ್ 11, 2026: ಇಂದು ಈ ರಾಶಿಗೆ ಕೆಲಸ ಕಾರ್ಯದಲ್ಲಿ ಮಹತ್ವದ ಬದಲಾವಣೆ ಸಾಧ್ಯ!

Horoscope Today April 11: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ, ನವಮಿ ತಿಥಿ, ಉತ್ತರಷಾಡ ನಕ್ಷತ್ರದ ಎಪ್ರಿಲ್ 11ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.

ಈ ರಾಶಿಗೆ ಇಂದು ಉದ್ಯೋಗದಲ್ಲಿ ಲಾಭ

ಸಂಗ್ರಹ ಚಿತ್ರ -

Profile
Pushpa Kumari Apr 11, 2026 6:00 AM

ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ,ವಸಂತ ಋತು ಚೈತ್ರ ಮಾಸೆ, ಉತ್ತರಷಾಡ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಇಂದು ಉತ್ತರಾಷಾಡ ನಕ್ಷತ್ರ ಇದ್ದು ಅಧಿಪತಿ ರವಿ ಆಗಿದ್ದಾನೆ. ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ಸಿಗುತ್ತದೆ. ಇಂದು ನಿಮಗೆ ನಾಯಕತ್ವದ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ‌.

ವೃಷಭ ರಾಶಿ: ವೃಷಭ ರಾಶಿ ಅವರಿಗೆ ಇಂದು ಅಸಮಾಧಾನ ತರುವ ದಿನವಾಗಿದೆ. ಎಲ್ಲವೂ ಇಂದು ನಿಮ್ಮ ಪರವಾಗಿ ನಡೆಯುವುದಿಲ್ಲ. ಆದರೂ ಕೂಡ ಮನೆಯಲ್ಲಿ ಇರುವ ಹಿರಿಯರಿಂದ ನಿಮಗೆ ಒಳಿತು ಆಗುತ್ತದೆ.

Vastu Tips: ಈ ದಿಕ್ಕಿನಲ್ಲಿ ಮಲಗಿದ್ರೆ ಜೀವಕ್ಕೆ ಆಪತ್ತು ಕಟ್ಟಿಟ್ಟ ಬುತ್ತಿ ಎನ್ನುತ್ತದೆ ವಾಸ್ತು ಶಾಸ್ತ್ರ

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರ ಮಾಡಲು ಹೋಗಬೇಡಿ. ನಿಮ್ಮ ಪ್ರೀತಿ ಪಾತ್ರರಿಂದ ಕೂಡ ಯಾವುದೇ ಸಹಕಾರ ನಿಮಗೆ ಸಿಗದೇ ಇರಬಹುದು.

ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ ದಿನ ಭವಿಷ್ಯ:



ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದ್ದು ಯಶಸ್ಸು ಸಿಗುತ್ತದೆ. ಪ್ರೀತಿ ಪಾತ್ರರು ಹಾಗೂ ಸ್ನೇಹಿತರು ಎಲ್ಲವೂ ನಿಮ್ಮ ಪರವಾಗಿಯೇ ಮಾತನಾಡುತ್ತಾರೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗುತ್ತದೆ. ಶತ್ರುಗಳನ್ನು ಹಿಮ್ಮೆಟ್ಟಲಿದ್ದು ಶತ್ರು ಸಂಹಾರ ಮಾಡುತ್ತೀರಿ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಆದರೆ ಹಣಕಾಸಿನ ವಿಚಾರವಾಗಿ ಸ್ವಲ್ಪ ಅಸಮಾಧಾನ ಉಂಟಾಗುವ ಸಾಧ್ಯತೆ ಇರುತ್ತದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮನೆಯಲ್ಲೂ ಕೂಡ ಸಮಸ್ಯೆ ಎದುರಾಗುವ ಸಾಧ್ಯತೆ ಇರುತ್ತದೆ‌. ಯಾವ ಕೆಲಸದಲ್ಲೂ ಸಮಾಧಾನ ಇರದೇ ಚಡಪಡಿಕೆ ಉಂಟಾಗುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಅತೀ ಉತ್ತಮವಾದ ದಿನವಾಗಿದೆ. ಸೋಷಿಯಲ್ ಮೀಡಿಯಾ, ಮಾಧ್ಯಮದಲ್ಲಿ ಇರೋರಿಗೆ ಲಾಭದಾಯಕ ದಿನವಾಗಿದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಮನೆಯ ಜವಾಬ್ದಾರಿಗಳು ಜಾಸ್ತಿಯಾಗಿರುತ್ತವೆ. ಉದ್ಯೋಗ, ಮನೆ ಎರಡನ್ನೂ ಸರಿಯಾಗಿ ನೀವು ನಿಭಾಯಿಸಬೇಕಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಚಂದ್ರ ನಿಮ್ಮ ರಾಶಿಗೆ ಪ್ರವೇಶ ಮಾಡಿರುವುದರಿಂದ ಸಣ್ಣ ಪುಟ್ಟ ಸಮಸ್ಯೆಗೆ ಸಂಪೂರ್ಣವಾದ ಪರಿಹಾರ ಸಿಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ವ್ಯಯ ಭಾವದಲ್ಲಿ ಚಂದ್ರ ಬರುತ್ತಿದ್ದಾನೆ. ಮುಖ್ಯವಾದ ವಿಚಾರದಲ್ಲಿ ಮನಸ್ಸಿಗೆ ನೋವು ಉಂಟಾಗಬಹುದು.

ಮೀನ ರಾಶಿ: ಮೀನ ರಾಶಿಗೆ ಅತೀ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಧನ ಆಗಮನವಾಗುತ್ತದೆ. ಹೊಸ ಸ್ನೇಹಿತರ ಪರಿಚಯ ಕೂಡ ನಿಮಗೆ ಆಗುತ್ತದೆ.