Horoscope Today February 14th: ಶುಕ್ರನ ಕೃಪೆಯಿಂದ ಈ ರಾಶಿಗೆ ಇಂದು ಹಣಕಾಸಿನ ಸಮಸ್ಯೆ ನಿವಾರಣೆ!
ನಿತ್ಯ ಭವಿಷ್ಯ ಫೆಬ್ರವರಿ 14, 2026: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು ಮಘೆ ಮಾಸೆ, ಕೃಷ್ಣೆ ಪಕ್ಷದ, ದ್ವಾದಶಿ ತಿಥಿ, ಪೂರ್ವಾಷಡ ನಕ್ಷತ್ರದ ಫೆಬ್ರವರಿ 14ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ..
ಸಂಗ್ರಹ ಚಿತ್ರ -
ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾ ಯನ ಶಿರದೃತು, ಮಘೆ ಮಾಸೆ, ಕೃಷ್ಣೆ ಪಕ್ಷದ, ಪೂರ್ವಾಷಡ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಇಂದು ಪೂರ್ವಾಷಡ ನಕ್ಷತ್ರ ಇದ್ದು ಅಧಿಪತಿ ಶುಕ್ರ ಆಗಿದ್ದಾನೆ. ಹಾಗಾಗಿ ಹೆಚ್ಚಿನ ವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಮಧ್ಯಾಹ್ನವರೆಗೂ ಸ್ವಲ್ಪ ಅಡೆತಡೆಗಳು ಬರಬಹುದು.ಆದರೆ ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ಸಿಗುತ್ತದೆ
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಮಧ್ಯಾಹ್ನವರೆಗೂ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಆದರೆ ಮಧ್ಯಾಹ್ನ ಬಳಿಕ ಭಾಗ್ಯೋದಯವಾದ ದಿನವಾಗುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಮಧ್ಯಾಹ್ನವರೆಗೂ ಒಳ್ಳೆಯ ದಿನವಾಗುತ್ತದೆ. ಮಧ್ಯಾಹ್ನ ಬಳಿಕ ನಿಮ್ಮ ಪ್ರೀತಿ ಪಾತ್ರರ ಜೊತೆ ಮನಸ್ತಾಪ ಉಂಟಾಗುವ ಸಾಧ್ಯತೆಗಳು ಹೆಚ್ಚು ಇರುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಮಧ್ಯಾಹ್ನವರೆಗೂ ಮನಸ್ಸಿಗೆ ನೆಮ್ಮದಿ ಇದ್ದು ಎಲ್ಲವೂ ಸರಿಯಾಗಿಯೇ ನಡೆಯುತ್ತದೆ. ಮಧ್ಯಾಹ್ನ ಬಳಿಕ ಕೂಡ ಪ್ರೀತಿ ಪಾತ್ರರ ಜೊತೆ ಸಂತೋಷದಿಂದ ಸಮಯವನ್ನು ಕಳೆಯುತ್ತೀರಿ.
ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಮಧ್ಯಾಹ್ನವರೆಗೂ ಕಿರಿ ಕಿರಿ ಉಂಟಾಗುತ್ತದೆ .ಹಣಕಾಸಿನ ವಿಚಾರವಾಗಿಯೂ ತಲೆ ನೋವು ಕಾಡುತ್ತದೆ. ಮಧ್ಯಾಹ್ನ ಬಳಿಕ ಶತ್ರುಗಳಿಂದ ಸಮಸ್ಯೆ ಪರಿಹಾರ ವಾಗಿ ಶತ್ರುನಾಶ ವಾಗಲಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ಸು ಸಿಗುತ್ತದೆ. ಹಣಕಾಸಿನ ನಿವಾರಣೆ ಯಾಗಲಿದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮಧ್ಯಾಹ್ನ ವರೆಗೂ ಸಂಸಾರದ ತಾಪತ್ರಯಗಳು ಜಾಸ್ತಿ ಯಾಗುತ್ತವೆ.ಮಧ್ಯಾಹ್ನ ಬಳಿಕ ಹಣಕಾಸಿನ ಬಗ್ಗೆ ಮುಖ್ಯವಾದ ನಿರ್ಧಾರಗಳನ್ನು ಮಾಡಬೇಕಾಗುತ್ತದೆ.
Vastu Tips: ವಾಸ್ತು ಸಲಹೆಯಂತೆ ಮನೆಯಲ್ಲಿ ಕರಿಬೇವು ಗಿಡ ನೆಟ್ಟರೆ ಹಣಕಾಸು ಸಮಸ್ಯೆಯೇ ಬರದು!
ತುಲಾ ರಾಶಿ: ತುಲಾ ರಾಶಿಯವರಿಗೆ ಮಧ್ಯಾಹ್ನ ವರೆಗು ಎಲ್ಲವೂ ನಿಮ್ಮ ಪರವಾಗಿ ನಡೆಯಲಿದ್ದು ಆತ್ಮವಿಶ್ವಾಸ ಚೆನ್ನಾಗಿ ಇರುತ್ತದೆ. ಮಧ್ಯಾಹ್ನ ಬಳಿಕ ಮನಸ್ಸಿಗೆ ಕಿರಿ ಕಿರಿ ಆಗುವ ಸಾಧ್ಯತೆ ಇರುತ್ತದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಮಧ್ಯಾಹ್ನವರೆಗೂ ಸಂಸಾರದ ತಾಪತ್ರಯಗಳು ಜಾಸ್ತಿಯಾಗುತ್ತವೆ. ಮಧ್ಯಾಹ್ನ ಬಳಿಕ ನೀವು ಬಂಧು ಮಿತ್ರರ ಜೊತೆ ಸಿಹಿಯಾದ ಸಮಯವನ್ನು ಕಳೆಯಬಹುದು.
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಮಧ್ಯಾಹ್ನವರೆಗೂ ಮನಸ್ಸಿಗೆ ನೆಮ್ಮದಿ ತರುವ ದಿನವಾಗಿದೆ. ಮಧ್ಯಾಹ್ನ ಬಳಿಕ ಸಂಸಾರದ ಜೊತೆ ಉತ್ತಮ ಸಮಯ ಕಳೆಯಲಿದ್ದೀರಿ.
ಮಕರ ರಾಶಿ: ಮಕರ ರಾಶಿಯವರಿಗೆ ಮಧ್ಯಾಹ್ನವರೆಗೂ ಅನೇಕ ರೀತಿಯ ಯೋಚನೆ ಕಾಡಬಹುದು. ಮಧ್ಯಾಹ್ನ ಬಳಿಕ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮುಖ್ಯವಾದ ವಿಚಾರದಲ್ಲಿ ಮಾರ್ಗ ದರ್ಶನ ಪ್ರಾಪ್ತಿ
ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದೆ. ಆದರೆ ಮಧ್ಯಾಹ್ನ ಬಳಿಕ ಕ್ಷೇಷ ಆಗಬಹುದು.
ಮೀನ ರಾಶಿ: ಮೀನ ರಾಶಿಗೆ ಮಧ್ಯಾಹ್ನ ವರೆಗೆ ಕಾರ್ಯಕ್ಷೇತ್ರದ ಜವಾಬ್ದಾರಿ ಹೆಚ್ಚಾಗುತ್ತದೆ. ಮಧ್ಯಾಹ್ನ ಬಳಿಕ ಮಿತ್ರರ ಜೊತೆ ಉತ್ತಮವಾಗಿ ಸಮಯ ಕಳೆಯುತ್ತೀರಿ.