ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಆಗಸ್ಟ್‌ 15, 2026: ಇಂದು ಶ್ರಾವಣ ಶನಿವಾರ! ಈ ರಾಶಿಗೆ ಯಶಸ್ಸಿನ ಫಲ ಪ್ರಾಪ್ತಿ!

Horoscope Today August 15th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ತೃತೀಯ ತಿಥಿ , ಉತ್ತರ ಪಾಲ್ಗುಣಿ ನಕ್ಷತ್ರದ,ಆಗಸ್ಟ್ 15ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯತೆ!

ಇಂಟರ್ ನೆಟ್ ಚಿತ್ರ -

Profile
Pushpa Kumari Aug 15, 2026 6:00 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಉತ್ತರ ಪಾಲ್ಗುಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಇಂದು ಶ್ರಾವಣ ಶನಿವಾರವಾಗಿದೆ. ಇಂದು ಗೌರಿ ಪೂಜೆಯನ್ನು ಮಾಡುವುದರಿಂದ ಸೌಹಾರ್ದ ಪ್ರಾಪ್ತಿಯಾಗುತ್ತದೆ. ಈ ರಾಶಿಯವರಿಗೆ ಇಂದು ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಾಗಬಹುದು. ಅದೇ ರೀತಿ ಪ್ರೇಮ,ಪ್ರೀತಿ ಪ್ರಕರಣದಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ರಿಯಲ್ ಎಸ್ಟೇಟ್ ಬಿಸೆನೆಸ್ ವ್ಯವಹಾರ ಹಾಗೂ ಕೋರ್ಟ್ ಕಛೇರಿ ವ್ಯವಹಾರದಲ್ಲಿ ತೊಂದರೆ ಎದುರಾಗಬಹುದು. ಯಾವುದೇ ಕೆಲಸ ಮಾಡುವಾಗ ಯೋಚನೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ.

ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನ ವಾಗಿದೆ.ಮನಸ್ಸಿಗೆ ನೆಮ್ಮದಿ ಇದ್ದು ಪರಾಕ್ರಮದಿಂದ ಎಲ್ಲದರಲ್ಲೂ ಜಯ ಗಳಿಸಲು ಸಾಧ್ಯವಾಗುತ್ತದೆ. ನಿಮ್ಮ ಸಾಮರ್ಥ್ಯದಿಂದ ಇಂದು ಜಯವನ್ನು ಕಾಣುತ್ತೀರಿ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಸಂಸಾರದಲ್ಲಿ ಮುಖ್ಯವಾದ ನಿರ್ಧಾರ ತೆಗೆದು ಕೊಳ್ಳಬೇಕಾಗುತ್ತದೆ. ಮುಖ್ಯವಾದ ಕೆಲಸದಲ್ಲಿ ಮನೆಯವರ ಸಹಕಾರ ಇಂದು ಇರುವುದಿಲ್ಲ.  

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ತೊಂದರೆ ಮಯವಾಗುತ್ತದೆ. ಮನಸ್ಸಿಗೆ ಅತೀ ಹೆಚ್ಚಿನ ನೆಮ್ಮದಿ ಇಂದು ಪ್ರಾಪ್ತಿಯಾಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ  ಕಷ್ಟಕರವಾದ ದಿನವಾಗಿದ್ದು ಮುಖ್ಯವಾದ ನಿರ್ಧಾರಗಳನ್ನು ಕೈಗೊಳ್ಳಲು ಹೋಗಬೇಡಿ. ಮಿತ್ರತ್ವದಲ್ಲಿ ಅತೀ ಹೆಚ್ಚಿನ ಒಡಕುಗಳು ಕಾಣುವ ಸಾಧ್ಯತೆ ಕೂಡ ಇರುತ್ತದೆ.

Vastu Tips: ನಿಮ್ಮ ಆದಾಯ ಹೆಚ್ಚಾಗಿ ಕೋಟ್ಯಾಧಿಪತಿ ಆಗಬೇಕಾ? ಹಾಗಾದ್ರೆ ಈ ವಸ್ತುವನ್ನು ಜೇಬಿನಲ್ಲಿರಿಸಿ!

ತುಲಾ ರಾಶಿ: ತುಲಾ ರಾಶಿ ಅವರಿಗೆ ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಇರುತ್ತದೆ. ಅದೇ ರೀತಿ ಸಾಮಾಜಿಕ ಚಟುವಟಿಕೆಯಲ್ಲಿ ಜಯ ಕೂಡ ಪ್ರಾಪ್ತಿಯಾಗುತ್ತದೆ.

ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಮನಸ್ಸಿಗೆ ನೆಮ್ಮದಿ ಇದ್ದು ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಯಶಸ್ಸು ಸಿಗುತ್ತದೆ.‌ ಎಲ್ಲರದಲ್ಲೂ ಜಯ ನಿಮ್ಮದಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಭಾಗ್ಯೋದಯವಾದ ದಿನವಾಗಿದೆ. ಆದರೆ ಭಗವಂತನ ಹಿರಿಯರ ಆಶೀರ್ವಾದ ಇಲ್ಲದೆ ಏನೂ ಮಾಡಲು ಸಾಧ್ಯವಿಲ್ಲ.

ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಅತೀ ಹೆಚ್ಚಿನ ಕಷ್ಟಕರವಾದ ದಿನ ನಿಮ್ಮದಾಗುತ್ತದೆ. ಮುಖ್ಯವಾದ ಕೆಲಸ ಕಾರ್ಯದಲ್ಲಿ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು

ಕುಂಭ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ಎಲ್ಲ ರೀತಿಯಿಂದಲೂ ನಿಮಗೆ ಸಹಕಾರ ಪ್ರಾಪ್ತಿಯಾಗುತ್ತದೆ. ಇಂದು ಎಲ್ಲ ವ್ಯವಹಾರದಲ್ಲಿ ಲಾಭ ತಂದು ಕೊಡುವ ದಿನವಾಗಿದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಶತ್ರು ನಾಶವಾಗಲಿದೆ. ಅದೇ ರೀತಿ ಮನಸ್ಸಿಗೆ ಹೆಚ್ಚಿನ ನೆಮ್ಮದಿ ಸಿಗುತ್ತದೆ.